ಮಿಂಟೋ ಆಸ್ಪತ್ರೆ ಪ್ರಕರಣದಲ್ಲಿ ರಾಜಕೀಯ ನಡೆಯುವುದಿಲ್ಲ: ಡಾ. ಅಶ್ವತ್ಥನಾರಾಯಣ


Team Udayavani, Nov 5, 2019, 3:12 PM IST

ashwath-narayan

ಬೆಂಗಳೂರು: ಮಿಂಟೋ ಆಸ್ಪತ್ರೆ ಮುಷ್ಕರ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಮಂಗಳವಾರ ಹೇಳಿದ್ದಾರೆ.

“ಮಿಂಟೋ ಆಸ್ಪತ್ರೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಆದ ತಪ್ಪಿನಿಂದ ಕಣ್ಣು ಕಳೆದುಕೊಂಡವರು ಹಾಗೂ ಸಂತ್ರಸ್ತರ ಪರ ನಡೆದ ಹೋರಾಟದ ವೇಳೆ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು. ಇಬ್ಬರಿಗೂ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ. ಸರ್ಕಾರ ಇರುವುದೇ ಸಮಾಜ ಮತ್ತು ನಾಗರಿಕರಿಗಾಗಿ,” ಎಂದು ಮಾಧ್ಯಮದವರ ಜತೆ ಮಾತನಾಡುತ್ತಾ ಸಚಿವರು ತಿಳಿಸಿದ್ದಾರೆ.

ಡಾ. ರವಿ ಎನ್ನುವವರು ಪ್ರತಿಭಟನೆಗೆ ಕುಮ್ಮುಕ್ಕು ನೀಡುತ್ತಿದ್ದಾರೆ ಎಂಬ ಆರೋಪ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು,” ಇಂಥ ಸೂಕ್ಷ್ಮ ಸಂದರ್ಭಗಳನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುವವರು ಇರುತ್ತಾರೆ. ಈ ರೀತಿ ತಮ್ಮ ಬೇಳೆ ಬೇಯಿಸಿಕೊಳ್ಳುವವರಿಗೆ ಒಂದೊಂದು ರೀತಿಯ ಒಲವು ಇರುತ್ತದೆ. ತಮ್ಮ ಸ್ಥಾನದ ದುರ್ಬಳಕೆ ಮಾಡಿಕೊಳ್ಳುವ ಜನ ಇರುತ್ತಾರೆ. ಅಂಥ ಮಹಾನುಭಾವರ ಪ್ರಚೋದನೆಗೆ ಒಳಗಾಗಬಾರದೆಂದು ಎಲ್ಲ ವೈದ್ಯ ಸ್ನೇಹಿತರು ಹಾಗೂ ಹೋರಾಟಗಾರರಲ್ಲಿ ಮನವಿ ಮಾಡುತ್ತೇನೆ,” ಎಂದಿದ್ದಾರೆ.

“ಎಲ್ಲರೂ ಕಾನೂನನ್ನು ಕೈಗೆ ತಗೆದುಕೊಂಡರೆ ವ್ಯವಸ್ಥೆ ನಿಯಂತ್ರಣ ಹೇಗೆ ಸಾಧ್ಯ ? ಹೋರಾಟಗಾರರು ಅಥವಾ ವೈದ್ಯರು. ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಎಲ್ಲರೂ ಅವರವರ ಕೆಲಸ ಮಾಡಿದರೆ ಯಾರಿಗೂ ತೊಂದರೆ ಆಗದು. ಯಾವುದೇ ಕಾರಣಕ್ಕೂ ಅಮಾಯಕರಿಗೆ ತೊಂದರೆ ಆಗಬಾರದು. ಸಾಮಾನ್ಯ ಜನರು ಇವರ ಆಟಕ್ಕೆ ಬಲಿಪಶು ಆಗಬಾರದು. ಈ ವಿಚಾರದಲ್ಲಿ ರಾಜಕೀಯ ಬೇಡ. ಈ ಎಲ್ಲ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ನಡೆಯುವುದು,”ಎಂದು ಅವರು ಭರವಸೆ ನೀಡಿದರು.

ಇನ್ನು ಮುಂದೆ ಇಂಥ ಪ್ರಕರಣಗಳು ಮರುಕಳಿಸದಂತೆ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಪ್ರಶ್ನೆಗೆ ವಿವರಣೆ ನೀಡಿದ ಸಚಿವರು,”. ವೈದ್ಯರು ಹಲವಾರು ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ವೈದ್ಯರ ಹಿತಾಸಕ್ತಿ ಕಾಯುವಂಥ ಕಾನೂನುನ್ನು ಈ ಹಿಂದೆಯೇ ಪರಿಚಯಿಸಲಾಗಿದೆ. ಕಾನೂನು, ವ್ಯವಸ್ಥೆ, ಸಮಾಜದ ಬಗ್ಗೆ ವೈದ್ಯರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಅಥವಾ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ನಿಯೋಜಿಸುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ. ವೈದ್ಯರ ರಕ್ಷಣೆಗೆ ಕೃತಕ ಬುದ್ಧಿಮತ್ತೆ, ಆಧುನಿಕ ತಂತ್ರಜ್ಞಾನ ಅನುಸರಿಸಲಾಗುವುದು. ತುರ್ತು ಪರಿಸ್ಥಿತಿ ನಿಭಾಯಿಸಲು ಆಂತರಿಕ ಪಡೆ, ಪೊಲೀಸ್‌ ಹಾಗೂ ಮೀಸಲು ಪಡೆ ಸ್ಥಳಕ್ಕೆ ಧಾವಿಸುವ ವ್ಯವಸ್ಥೆ ಕಲ್ಪಿಸಲಾಗುವುದು. ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗುವುದು,” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.