ಭಯಮುಕ್ತ ವಾತಾವರಣಕ್ಕೆ ಶಿಕ್ಷಕರ ಆಗ್ರಹ


Team Udayavani, Nov 6, 2019, 11:29 AM IST

huballi-tdy-2

ಧಾರವಾಡ: ಬೆಳಗಾವಿ ವಿಭಾಗದ ಶಿಕ್ಷಕರ ಅಮಾನತ್ತಿನ ಎಲ್ಲಾ ಪ್ರಕರಣ ರದ್ದುಪಡಿಸುವುದರ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ಭಯಮುಕ್ತ ವಾತಾವರಣಕ್ಕೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಬೃಹತ್‌ ಪ್ರತಿಭಟನಾ ರ್ಯಾಲಿ ನಗರದಲ್ಲಿ ಸೋಮವಾರ ಜರುಗಿತು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡ ಶಿಕ್ಷಕರು, ಸರ್‌. ಸಿದ್ದಪ್ಪ ಕಂಬಳಿ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಬಳಿಕ ಜಿಲ್ಲಾ ಧಿಕಾರಿ ಮೂಲಕ ಸಿಎಂ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಅಖೀಲ ಭಾರತ ಪ್ರಾಥಮಿಕ ಶಿಕ್ಷಕರ ಫೇಡರೇಶನ್‌ ಅಧ್ಯಕ್ಷ ವಿ.ಎಂ. ನಾರಾಯಣಸ್ವಾಮಿ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನೆಮ್ಮದಿಯಿಂದ ಕಾರ್ಯ ನಿರ್ವಹಿಸದ ಪರಿಸ್ಥಿತಿ ನಿರ್ಮಾಣವಾಗಿರುವುದು ಖೇದಕರ ಸಂಗತಿ.  ಶಿಕ್ಷಣ ಇಲಾಖೆ ಮೇಲಧಿ ಕಾರಿಗಳು ವಿನಾಕಾರಣ ಶಿಕ್ಷಕರಿಗೆ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೇ, ಸಣ್ಣ-ಪುಟ್ಟ ತಪ್ಪುಗಳಿಗೂ ಶಿಕ್ಷಕರನ್ನು ಹುದ್ದೆಯಿಂದ ಅಮಾನತುಗೊಳಿಸುವ ಕಾರ್ಯವನ್ನು ಮಾಡಲಾಗಿದೆ. ಕೆಳಹಂತದ ಶಿಕ್ಷಕರ ಮೇಲೆ ಇಲಾಖೆ ಅಧಿ ಕಾರಿಗಳ ಈ ಕ್ರಮ ಅಕ್ಷಮ ಎಂದು ದೂರಿದರು.

ಸಂಘಟನೆ ಹಿರಿಯ ಉಪಾಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದ ಸರ್ಕಾರಿ ಶಾಲೆಗಳಲ್ಲಿ ಇಲಾಖೆಯ ಮೇಲ ಧಿಕಾರಿಗಳು ಭಯದ ವಾತಾವರಣ ನಿರ್ಮಿಸಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಪಾಠ ಬೋಧಿಸುವುದು ದುಸ್ತರವಾಗಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ, ಸರ್ಕಾರಿ ಶಾಲೆಗಳ ಸಬಲೀಕರಣ, ಬೆಳಗಾವಿ ವಿಭಾಗ ಮಟ್ಟದ ಎಲ್ಲ ಅಮಾನತು ಪ್ರಕರಣಗಳನ್ನು ತಕ್ಷಣವೇ ರದ್ದುಪಡಿಸುವುದು, ತಡೆಹಿಡಿದ ವೇತನ ಬಡ್ತಿಯನ್ನು ಶಿಕ್ಷಕರಿಗೆ ವಾಪಸ್‌ ನೀಡಬೇಕು. ಇದಲ್ಲದೇ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಪದಾಧಿಕಾರಿಗಳಾದ ಚಂದ್ರಶೇಖರ್‌ ಎನ್‌.ಎಸ್‌, ಅರುಣಪ್ರತಾಪ ರೆಡ್ಡಿ, ಎಸ್‌.ಡಿ. ಗಂಗಣ್ಣವರ, ಯುವರಾಜ ಕೆ, ಜಿ.ಪದ್ಮಲತಾ, ಭಾರತಿ, ವಿವಿಧ ಜಿಲ್ಲಾ ಪದಾ ಧಿಕಾರಿಗಳಾದ ಜಯಕುಮಾರ ಹೆಬಳಿ, ಮಲ್ಲಿಕಾರ್ಜುನ ಸಿದ್ದನಗೌಡ್ರ, ಸಿ.ವಿ. ಹಿರೇಮಠ, ಸದ್ದರಾಮ ಲೋಕಣ್ಣವರ, ಬಸವರಾಜ ಬಾಗೇನವರ, ಅರ್ಜುನ ಲಮಾಣಿ, ವೈ.ಎಚ್‌. ಬಣವಿ ನೂರಾರು ಶಿಕ್ಷಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.