ಅಂತರ್ಜಲ ವೃದ್ಧಿ ಕಾಮಗಾರಿಗಳಿಗೆ ಆದ್ಯತೆ: ಆಚಾರ್
Team Udayavani, Nov 6, 2019, 2:45 PM IST
ಯಲಬುರ್ಗಾ: ಅಂತರ್ಜಲ ಹೆಚ್ಚಳಕ್ಕೆ ಪೂರಕವಾಗುವ ಕಾಮಗಾರಿಗಳಿಗೆ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.
ನಿಲೋಗಲ್ ಗ್ರಾಮದ ಹಳ್ಳದ ಹತ್ತಿರ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಕಳೆದ ಸಾಲಿನ ಅನುದಾನದಲ್ಲಿ 160ಕ್ಕೂ ಹೆಚ್ಚು ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದೇನೆ. ಅವುಗಳು ಪ್ರಗತಿ ಹಂತದಲ್ಲಿವೆ. ಪ್ರಸಕ್ತ ಸಾಲಿನಲ್ಲಿ ಅಂತರ್ಜಲ ಸಂರಕ್ಷಣೆಗೆ ಪೂರಕವಾಗುವ ಕಾಮಗಾರಿಗಳಿಗೆ ಅನುದಾನ ನೀಡಲಾಗುವುದು ಎಂದರು.
ಚೆಕ್ ಡ್ಯಾಂ ನಿರ್ಮಾಣ, ಕೆರೆಗಳ ಜೀರ್ಣೋದ್ಧಾರದಿಂದ ಅಂತರ್ಜಲಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ಗ್ರಾಮಸ್ಥರು ಸದರಿ ಕಾಮಗಾರಿ ನಿರ್ಮಿಸಿಕೊಳ್ಳಲು ಅಧಿಕಾರಿಗಳು, ಗುತ್ತಿಗೆದಾರರಿಗೆ ಸಹಕಾರ ನೀಡುವ ಮೂಲಕ ಉತ್ತಮ ಗುಣಮಟ್ಟದಿಂದ ನಿರ್ಮಿಸಿಕೊಳ್ಳಬೇಕು ಎಂದರು.
ಈ ಗ್ರಾಮದಲ್ಲಿ ತಲಾ 25 ಲಕ್ಷದಂತೆ ಎರಡು ಚೆಕ್ ಡ್ಯಾಂ ನಿರ್ಮಿಸಲಾಗುವುದು. ಈಗಾಗಲೇ ಯರಿಭಾಗದ ಎಲ್ಲ ಕೆರೆ ಜೀರ್ಣೋದ್ಧಾರಗೊಳಿಸಲಾಗಿದೆ. ಈ ಕೆರೆಗಳು ಮಳೆ ನೀರಿನಿಂದ ತುಂಬಿ ಅಂತರ್ಜಲಮಟ್ಟ ಹೆಚ್ಚಳವಾಗಿದೆ. ಕಳಪೆ ಕಾಮಗಾರಿಯ ನಿರ್ಮಿಸದೇ ಗುಣಮಟ್ಟದ ಕಾಮಗಾರಿ ನಿರ್ಮಿಸುವಂತೆ ಸಲಹೆ ನೀಡಿದರು. ಹಿಂದಿನ ಜನಪ್ರತಿನಿಧಿಗಳು, ಸರಕಾರಗಳಾಗಲಿ ಕೆರೆಗಳನ್ನು ಜೀರ್ಣೋದ್ಧಾರಗೊಳಿಸುವ ಕಾಳಜಿ ತೋರಲಿಲ್ಲ. ಆದರೆ ನಾನು ಶಾಸಕನಾದ ಮೇಲೆ ಚೆಕ್ ಡ್ಯಾಂ, ಕೆರೆಗಳ ಅಭಿವೃದ್ಧಿ, ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಇಲಾಖೆಗೆ ಸುಮಾರು 60 ಕೋಟಿಗೂ ಅಧಿಕ ಅನುದಾನ ಸರಕಾರದಿಂದ ಬಿಡುಗಡೆ ಮಾಡಿಸಿದ್ದೇನೆ. ಈಗಾಗಲೇ ತಾಲೂಕಿನಲ್ಲಿ 53 ಕಾಮಗಾರಿ ಮುಕ್ತಾಯದ ಹಂತದಲ್ಲಿವೆ. ಮುಂದಿನ ವರ್ಷ ನಿಲೋಗಲ್, ಕಲ್ಲಬಾವಿ ಕೆರೆಗಳ ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆಗೊಳಿಸುತ್ತೇನೆ ಎಂದರು.
ಈ ವೇಳೆ ಬಿಜೆಪಿ ಮುಖಂಡರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ರತನ ದೇಸಾಯಿ, ಶಿವಕುಮಾರ ನಾಗಲಾಪೂರಮಠ, ಈರಪ್ಪ ಕುಡಗುಂಟಿ, ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಪ್ರಭುರಾಜ ಕಲಬುರ್ಗಿ, ಮಲ್ಲಣ್ಣ ಹರ್ಲಾಪೂರ, ಸಂಗನಗೌಡ ಪಾಟೀಲ, ರಾಚಪ್ಪ ಕಟಗಿಹಳ್ಳಿ, ನಾಗನಗೌಡ ಜಾಲಿಹಾಳ, ಆದೇಶ ರೊಟ್ಟಿ, ಕಳಕಪ್ಪ ತಳವಾರ, ವೆಂಕಟೇಶ ವಾಲ್ಮೀಕಿ, ಶರಣಪ್ಪ ಹೊಸ್ಕೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.