ಆರೂರು ಬಳಿ ಮೆಡಿಕಲ್ ಕಾಲೇಜು ಸ್ಥಾಪನೆ
Team Udayavani, Nov 7, 2019, 3:00 AM IST
ಚಿಕ್ಕಬಳ್ಳಾಪುರ: ವೈದ್ಯಕೀಯ ಕಾಲೇಜನ್ನು ನಗರದ ಹೊರ ವಲಯದ ಅಣಕನೂರು ಸಮೀಪವೇ ಸ್ಥಾಪನೆಗೆ ಪ್ರಯತ್ನಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟದ ಅನುಮೋದನೆ ಸಹ ಪಡೆದಿದ್ದೆ. ಆದರೆ ಕೆಲವರು ರೈತರ ಹೆಸರಿನಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ ಕಾರಣ ಅಲ್ಲಿ ಸ್ಥಾಪನೆ ಆಗಲಿಲ್ಲ. ನಗರದ ಸುತ್ತಮುತ್ತ ಸೂಕ್ತ ಸ್ಥಳವಾಕಾಶ ದೊರೆತ ಕಾರಣ ಆರೂರು ಸಮೀಪ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುತ್ತಿದೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದ ಶ್ರೀ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ತಲಾ 10 ಲಕ್ಷ ರೂ.ವೆಚ್ಚದಲ್ಲಿ ಕಳವಾರ, ದಿನ್ನೆಹೊಸಹಳ್ಳಿ ಹಾಗೂ ಹನುಮಂತಪುರ ಗ್ರಾಮಗಳಲ್ಲಿ ನಿರ್ಮಿಸಿರುವ ಅಮೃತ ಗಂಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿದ ಬಳಿಕ ಸಿದ್ದೇಶ್ವರ ಸಮುದಾಯ ಭವನದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಗರ ಸಮೀಪದ ಅಣಕನೂರು ಬಳಿ 20 ಎಕರೆ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಕನಸು ಹೊಂದಿದ್ದೆ. ಆದರೆ ಕೆಲ ಡೋಂಗಿ ನೀರಾವರಿ ಹೋರಾಟಗಾರರು ಅಣಕನೂರು ಕೆರೆ ಮುಳುಗಡೆ ಪ್ರದೇಶವೆಂದು ಲೋಕಾಯುಕ್ತಕ್ಕೆ ದೂರು ಕೊಟ್ಟ ಹಿನ್ನೆಲೆಯಲ್ಲಿ ಅಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಕೈ ಬಿಡಲಾಯಿತು. ಬಹಳಷ್ಟು ಕಡೆ ಜಾಗ ಹುಡುಕಾಟ ನಡೆಸಿದರೂ ಸಿಗಲಿಲ್ಲ.
ಸ್ವಾರ್ಥ ಇಲ್ಲ: ಆರೂರು ಬಳಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸೂಕ್ತ ಸ್ಥಳಾವಕಾಶ ಸಿಕ್ಕಿದೆ. ಆದರೂ ಕೆಲವರು ಶಾಸಕರು ಊರು ಕಡೆ ಮೆಡಿಕಲ್ ಕಾಲೇಜು ತಗೊಂಡು ಹೋಗಿದ್ದಾರೆಂಬ ಆರೋಪ ಮಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ನನ್ನ ಸ್ವಾರ್ಥ ಏನು ಇಲ್ಲ. ಜಿಲ್ಲೆಗೆ ವೈದ್ಯಕೀಯ ಕಾಲೇಜು ಆಗಬೇಕೆಂಬ ಹಠದಿಂದ ಒಬ್ಬ ವೈದ್ಯನಾಗಿ ಸರ್ಕಾರದ ಮೇಲೆ ಒತ್ತಡ ತಂದು ಮಂಜೂರು ಮಾಡಿಸಲಾಗಿದೆ ಎಂದರು.
ಅನುದಾನ ಕೊಡಲಿಲ್ಲ: ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲೂ ಕೂಡ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲ. ಆದರೆ ಸತತ ಪ್ರಯತ್ನದಿಂದ ಸರ್ಕಾರ ಈಗ ಜಿಲ್ಲೆಗೆ ವೈದ್ಯಕೀಯ ಕಾಲೇಜಿಗೆ ಮಂಜೂರು ನೀಡಿದೆ ಎಂದರು.
ಜಿಲ್ಲಾಸ್ಪತ್ರೆ ಮೇಲ್ದರ್ಜೇಗೆ: ನಾನು ಯಾರ ಮೇಲೆಯು ವೈಯಕ್ತಿಕವಾಗಿ ದ್ವೇಷ ಸಾಧನೆ ಮಾಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತ್ಯಾಗಕ್ಕೂ ಸಿದ್ಧ. ರಾಜ್ಯಕ್ಕೆ ಮಾದರಿಯಾಗಿ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುವುದು. ಸಾವಿರ ಹಾಸಿಗೆಗಳ ಆಸ್ಪತ್ರೆಯಾಗಿ ಜಿಲ್ಲಾಸ್ಪತ್ರೆಯನ್ನು ಮೇಲ್ದಜೇìಗೇರಿಸಲಾಗುವುದು. ಮೆಡಿಕಲ್ ಕಾಲೇಜು ಮಾತ್ರವಲ್ಲದೇ ಸಂಶೋಧನಾ ಕೇಂದ್ರವನ್ನು ಸಹ ಸ್ಥಾಪಿಸಲಾಗುವುದು ಎಂದರು.
ಸಿಎಂ ಕಾರ್ಯಕ್ರಮ ಯಶಸ್ವಿಗೊಳಿಸಿ: ನ.8 ರಂದು ಸಿಎಂ ಯಡಿಯೂರಪ್ಪ ಜಿಲ್ಲೆಗೆ ಆಗಮಿಸಿ ಮೆಡಿಕಲ್ ಕಾಲೇಜು, ಮಂಚೇನಹಳ್ಳಿ ತಾಲೂಕು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು. ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ನಿರ್ದೇಶಕರಾದ ಕೃಷ್ಣಮೂರ್ತಿ, ಗ್ರಾಪಂ ಅಧ್ಯಕ್ಷ ಲಲಿತಾಮೂರ್ತಿ, ಮುಖಂಡರಾದ ಮರಳಕುಂಟೆ ಕೃಷ್ಣಮೂರ್ತಿ, ದಿನ್ನೆಹೊಸಹಳ್ಳಿ ರೆಡ್ಡಿ, ರಾಜಣ್ಣ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿಯಿಂದ ಅನುಕೂಲ: ಕಾಂಗ್ರೆಸ್ ಪಕ್ಷ ಒಳ್ಳೆಯ ಅಭ್ಯರ್ಥಿಯನ್ನು ಈಗಾಗಲೇ ಪ್ರಕಟಿಸಿ ನಮಗೆ ಅನುಕೂಲ ಮಾಡಿಕೊಟ್ಟಿದೆ. ಉಪ ಚುನಾವಣೆಗೆ ನಂದಿ ಅಂಜನಪ್ಪರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದಕ್ಕೆ ಅನರ್ಹ ಶಾಸಕ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದರು. ಕಾಂಗ್ರೆಸ್ ಅಭ್ಯರ್ಥಿಯದ್ದು ಬೈಯುವುದೇ ಕೆಲಸ. ಅವರನ್ನು ಅಭ್ಯರ್ಥಿ ಮಾಡಿರುವುದು ನಮಗೆ ಅನುಕೂಲವಾಗಲಿದೆ. ಕಳೆದ ಬಾರಿ 30 ಸಾವಿರ ಮಂತಗಳ ಅಂತರದಿಂದ ಗೆದ್ದೆ. ಈ ಬಾರಿ ಅಂತರ ಎರಡು ಪಟ್ಟು ಹೆಚ್ಚಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.