ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಣೆ
Team Udayavani, Nov 7, 2019, 3:08 AM IST
ಬೆಂಗಳೂರು: ಟಿಪ್ಪು ಜಯಂತಿ ರದ್ದು ಪಡಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಹೈಕೋರ್ಟ್, ರದ್ದು ಆದೇಶ ಸಂಬಂಧ ಮರು ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಟಿಪ್ಪು ಜಯಂತಿ ರದ್ದುಪಡಿಸಿ 2019ರ ಜುಲೈ 30ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದು ಪಡಿಸುವಂತೆ ಕೋರಿ ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್ ಆಲಿ ಷಾ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ವಿಚಾರಣೆ ವೇಳೆ, ಸರ್ಕಾರದ ವಾದ ಹಾಗೂ ಅರ್ಜಿದಾರ ಪರ ವಕೀಲರ ಪ್ರತಿವಾದ ಆಲಿಸಿದ ನ್ಯಾಯಪೀಠ, ಟಿಪ್ಪು ಜಯಂತಿ ರದ್ದು ಆದೇಶಕ್ಕೆ ತಡೆಯಾಜ್ಞೆ ನೀಡಲು ಸ್ಪಷ್ಟವಾಗಿ ನಿರಾಕರಿಸಿತು. ಜತೆಗೆ, ರಾಜ್ಯ ಸರಕಾರ ಜಯಂತಿ ರದ್ದು ಮಾಡುವಾಗ ಹಿಂದಿನ ಸರಕಾರ ಹೊರಡಿಸಿದ್ದ ಆದೇಶದ ಎಲ್ಲ ಅಂಶಗಳನ್ನು ಪರಿಗಣಿಸಿಲ್ಲ ಎಂಬ ಅಂಶದ ಹಿನ್ನೆಲೆಯಲ್ಲಿ ಈ ಸಂಬಂಧ ರದ್ದು ಆದೇಶದ ನಿರ್ಧಾರವನ್ನು ಎರಡು ತಿಂಗಳಲ್ಲಿ ಮರು ಪರಿಶೀಲನೆ ನಡೆಸಬೇಕು.
ಅಷ್ಟೇ ಅಲ್ಲದೆ, ಟಿಪ್ಪು ಜಯಂತಿ ಮಾತ್ರವಲ್ಲದೆ ರಾಜ್ಯದಲ್ಲಿ ಸರಕಾರದ ವತಿಯಿಂದ ಅಧಿಕೃತವಾಗಿ ಆಚರಿಸುತ್ತಿರುವ ಇತರ ಎಲ್ಲ ಜಯಂತಿಗಳ ಬಗ್ಗೆ ಮತ್ತು ಆ ಕುರಿತು ಹೊರಡಿಸಿರುವ ಆದೇಶಗಳ ಬಗ್ಗೆ ಸಮಗ್ರ ವಿವರಗಳನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿಚಾರಣೆ ವೇಳೆ ನ್ಯಾಯಪೀಠ, 2016ರಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್ ಸಂಬಂಧ ಟಿಪ್ಪು ಜಯಂತಿ ಆಚರಣೆಯನ್ನು ಏಕೆ ಆಚರಿಸಲಾಗುತ್ತಿದೆ ಎಂಬ ಬಗ್ಗೆ ವಿಸ್ತ್ರತ ಅಂಶಗಳ ಆದೇಶ ಹೊರಡಿಸಿತ್ತು.
ಆದರೆ, ಇದೀಗ ಸರಕಾರ ಒಂದೇ ದಿನದಲ್ಲಿ ಕೊಡಗಿನ ಒಬ್ಬರೇ ಒಬ್ಬ ಶಾಸಕ ನೀಡಿದ ಮನವಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಅದಕ್ಕೂ ಮುನ್ನ ಯಾವ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಹಿಂದಿನ ಸರಕಾರ ನೀಡಿದ್ದ ಆದೇಶದ ಅಂಶಗಳನ್ನೂ ಸಹ ಅವಲೋಕಿಸಿಲ್ಲ ಎನಿಸುತ್ತದೆ ಎಂದು ಅಭಿಪ್ರಾಯಪಟ್ಟಿತು. ಅಷ್ಟೇ ಅಲ್ಲದೆ, ಜಾತ್ಯಾತೀತತೆ ಹಾಗೂ ಸಂವಿಧಾನದ ಕಲಂ 51ಎ ಅನ್ವಯ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕಿದೆ.
ಸುಪ್ರೀಂಕೋರ್ಟ್ ಇಂತಹ ನಿರ್ಧಾರಗಳನ್ನು ಕೈಗೊಳ್ಳು ವಾಗ ಏಕಪಕ್ಷೀಯವಾಗಿ ಕೈಗೊಳ್ಳುವಂತಿಲ್ಲ ಎಂದು ಹೇಳಿದೆ. ಹಾಗಾಗಿ, ಸರಕಾರ ಮತ್ತೂಮ್ಮೆ ತನ್ನ ನಿರ್ಧಾರ ವನ್ನು ಸಮರ್ಪಕ ರೀತಿಯಲ್ಲಿ ಮರು ಪರಿಶೀಲನೆ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು. ಸೂಕ್ತ ಭದ್ರತೆ: ಸರಕಾರ ವೈಯಕ್ತಿಕವಾಗಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಹೀಗಾಗಿ, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ನ.10ರಂದು ಟಿಪ್ಪು ಜಯಂತಿ ಆಚರಿಸಬಹುದು. ಅದಕ್ಕೆ ಸರಕಾರ ಸೂಕ್ತ ಭದ್ರತೆಯನ್ನು ಒದಗಿಸಲಿದೆ ಎಂದು ನ್ಯಾಯಪೀಠ ಆದೇಶ ನೀಡಿದೆ.
ಸರ್ಕಾರದ ವಾದ ಏನು?: ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸರಕಾರದಿಂದ ಟಿಪ್ಪು ಜಯಂತಿ ಆಚರಿಸುವುದಿಲ್ಲ. ಖಾಸಗಿ ಸಂಸ್ಥೆಗಳು ಆಚರಿಸುವುದಕ್ಕೆ ಸರಕಾರದ ಅಭ್ಯಂತರವಿಲ್ಲ. ಇದು ಸರಕಾರದ ಆಡಳಿತಾತ್ಮಕ ನಿರ್ಧಾರ. ಇದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು. ಸರಕಾರ ಗುಪ್ತಚರ ದಳ ಮತ್ತಿತರ ವಿಭಾಗಗಳಿಂದ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಜಯಂತಿ ಆಚರಿಸಿದರೆ ಶಾಂತಿ ಕದಡುತ್ತದೆ ಎಂಬ ಕಾರಣಕ್ಕೆ ಜಯಂತಿಯನ್ನು ರದ್ದುಗೊಳಿಸುವ ತೀರ್ಮಾನ ಮಾಡಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಅಲ್ಲದೆ, ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಿಸಿದಾಗ ಕೊಡಗಿನಲ್ಲಿ ಹಿಂಸಾಚಾರ ನಡೆದಿತ್ತು. ಓರ್ವ ವ್ಯಕ್ತಿ ಕೊಲೆಗೀಡಾದ. ಹಾಗಾಗಿ, ಕೋಮು ಸಾಮರಸ್ಯ ಕಾಪಾಡಲು ಜಯಂತಿ ರದ್ದುಪಡಿಸಲಾಗಿದೆ. ಇಲ್ಲಿ ಯಾವುದೇ ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗಿಲ್ಲ. ಹಕ್ಕುಗಳ ಉಲ್ಲಂಘನೆಯೂ ಆಗಿಲ್ಲ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಏನೂ ಇಲ್ಲ. ಹಾಗಾಗಿ, ಅರ್ಜಿಯನ್ನು ಮಾನ್ಯ ಮಾಡಬಾರದು ಎಂದು ಕೋರಿದರು.
ಅರ್ಜಿದಾರರ ವಾದ ಏನು?: ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ವಾದಿಸಿ, ಜು.26ರಂದು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, 27ರಂದು ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಿದರು. 29ರಂದು ಕೊಡಗಿನ ಓರ್ವ ಜನಪ್ರತಿ ನಿಧಿ ನೀಡಿದ ಮನವಿ ಆಧರಿಸಿ ಯಾವುದೇ ಅಭಿಪ್ರಾಯಗಳನ್ನು ಪಡೆಯದೆ, ಸಂಪುಟದಲ್ಲಿ ಚರ್ಚೆ ನಡೆಸದೆ, ಸಿಎಂ ಒಬ್ಬರೇ ಒಂದೇ ದಿನದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಲು ತೀರ್ಮಾನಿಸಿದರು.
ಆ ತೀರ್ಮಾನ ಏಕಪಕ್ಷೀಯವಾದುದು ಎಂದು ವಿವರಿಸಿದರು. ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿ ಟ್ಟುಕೊಂಡು ಟಿಪ್ಪು ಜಯಂತಿ ರದ್ದುಗೊಳಿ ಸಲಾಗಿದೆ. ಇದು ಕಾನೂನು ಬಾಹಿರ ಮತ್ತು ತಾರತಮ್ಯದಿಂದ ಕೂಡಿದ ಕ್ರಮ. ಸರಕಾರ ತನ್ನ ನೀತಿ ನಿರ್ಧಾರಗಳನ್ನು ಬದಲಿಸುವಾಗ ಕಾರಣಗಳನ್ನು ನೀಡ ಬೇಕು. ಆದರೆ, ಸರಕಾರ ಯಾವುದೇ ಕಾರಣ ನೀಡಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.