ಅನರ್ಹರ ವಿಚಾರ ಸುಪ್ರೀಂ ತೀರ್ಪಿನ ಬಳಿಕವೇ ನಿರ್ಧಾರ
Team Udayavani, Nov 7, 2019, 3:08 AM IST
ಬೆಂಗಳೂರು: ಮುಂಬರುವ ಉಪಚುನಾವಣೆಗೆ ಸಿದ್ಧವಾಗುತ್ತಿರುವ ಬಿಜೆಪಿ, ಅನರ್ಹರ ಕುರಿತಾಗಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿನತ್ತ ಚಿತ್ತ ಹರಿಸಿದೆ. ಅನರ್ಹ ಶಾಸಕರ ಪರ ಹಾಗೂ ವಿರುದ್ಧವಾಗಿ ಸುಪ್ರೀಂ ತೀರ್ಪು ಬಂದರೆ, ಪಕ್ಷದಿಂದ ತುರ್ತಾಗಿ ಏನು ಕ್ರಮ ಕೈಗೊಳ್ಳಬೇಕು ಮತ್ತು ಅಂತರ ಕಾಯ್ದು ಕೊಳ್ಳಬೇಕು ಎಂಬ ಗಂಭೀರ ಚಿಂತನೆ ಬಿಜೆಪಿ ವರಿಷ್ಠರ ವಲಯದಲ್ಲಿ ಆರಂಭವಾಗಿದೆ.
ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಸಹಿತವಾಗಿ ವರಿಷ್ಠರ ಸಭೆ ಕೂಡ ನಡೆಯಲಿದೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ. ಬಿಜೆಪಿ ಕಾರ್ಯಕರ್ತರನ್ನು ಉಪಚುನಾವಣೆ ಯಲ್ಲಿ ಸಂಘಟಿತಗೊಳಿಸಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಸರ್ಕಾರವನ್ನು ಮುಂದಿನ ಮೂರು ವರ್ಷಕ್ಕೆ ಭದ್ರಪಡಿ ಸಿಕೊಳ್ಳಲು ಅಗತ್ಯವಿರುವ ಕಾರ್ಯತಂತ್ರ ಸಿದ್ಧವಾಗುತ್ತಿದೆ.
ಬಿಜೆಪಿ ವರಿಷ್ಠರು, ಸುಪ್ರೀಂ ತೀರ್ಪು ಬಂದ ನಂತರವಷ್ಟೇ ಸ್ಪಷ್ಟ ನಿಲುವಿಗೆ ಬರಲಿದ್ದಾರೆ. ನ್ಯಾಯಾಲಯದಲ್ಲಿ ಅನರ್ಹ ಶಾಸಕರ ಪರವಾಗಿ ತೀರ್ಪು ಬಂದಲ್ಲಿ, ಪಕ್ಷದ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಯಾವ ರೀತಿಯಲ್ಲಿ ಮನ ವೊಲಿಸಬೇಕು ಎಂಬುದರ ಚರ್ಚೆಯೂ ಪಕ್ಷದಲ್ಲಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಅನರ್ಹ ಶಾಸಕರ ವಿರುದ್ಧವಾಗಿ ತೀರ್ಪು ಬಂದರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿ, ಅವರನ್ನು ಗೆಲ್ಲಿಸಲು ಯಾವ ಮಾದರಿ ಸಿದ್ಧತೆ ಮಾಡ ಬೇಕು ಎಂಬುದರ ಚರ್ಚೆಯೂ ನಡೆಯುತ್ತಿದೆ.
ಪಕ್ಷದ ವರಿಷ್ಠರ ಸೂಚನೆಯಂತೆ ಉಪಚುನಾವಣೆ ನಡೆಯ ಲಿರುವ ಕೆಲವೊಂದು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಚುನಾವಣೆ ಕಾರ್ಯ ಆರಂಭಿಸಿದ್ದಾರೆ. ಬೆಂಗಳೂರು ಮಹಾನಗರು ಮಹಾನಗರ ಸಹಿತವಾಗಿ ಕೆಲವು ಕ್ಷೇತ್ರದಲ್ಲಿ ಅನರ್ಹ ಶಾಸಕರ ಮತ್ತು ಬಿಜೆಪಿ ಪರಾಜಿತ ಅಭ್ಯರ್ಥಿಗಳ ಬೆಂಬಲಿಗರನ್ನು ಸಮಾಧಾನ ಮಾಡುವುದೇ ನಾಯಕರಿಗೆ ದೊಡ್ಡ ಸವಾಲಾಗಿದೆ.
ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ, ಬಿಜೆಪಿ ಸರ್ಕಾರದಿಂದ 8 ರಿಂದ 10 ಅನರ್ಹ ಶಾಸಕರನ್ನು ಸಚಿವರನ್ನಾಗಿ ಮಾಡಿ ನಂತರ ಉಪಚುನಾವಣೆ ಎದುರಿಸುವ ಮಾತು ಕೂಡ ಕೇಳಿಬರುತ್ತಿದೆ. 15 ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಉಳಿಸಿಕೊಳ್ಳಬೇಕಾದರೆ ಕನಿಷ್ಠ 8 ರಿಂದ 10 ಸ್ಥಾನ ಗೆಲ್ಲಬೇಕಿದೆ. ಹೀಗಾಗಿ ಅನರ್ಹರಿಗೆ ಸಚಿವ ಸ್ಥಾನದ ಪಟ್ಟ ನೀಡಿ ಅತಿ ಸುಲಭವಾಗಿ ಗೆಲ್ಲಬಹುದು ಎಂಬ ತಂತ್ರ ಅಳವಡಿಸಿಕೊಳ್ಳಲು ಚಿಂತನೆ ಬಿಜೆಪಿ ವಲಯದಲ್ಲಿ ಆರಂಭವಾಗಿದೆ.
ರಮೇಶ್ ಜಾರಕಿಹೋಳಿ, ಎಚ್.ವಿಶ್ವನಾಥ್, ಎಂ.ಟಿ.ಬಿ.ನಾಗರಾಜ್, ಬೈರತಿ ಬಸವರಾಜು, ಶಿವ ರಾಮ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ. ಸೋಮಶೇಖರ್ ಮೊದಲಾದವರನ್ನು ಸಚಿವರನ್ನಾಗಿ ಮಾಡಿ ಚುನಾವಣೆ ಎದುರಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ. ಆದರೆ, ನ್ಯಾಯಾಲಯದ ತೀರ್ಪು ಹೇಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಬಿಜೆಪಿ ಹಿರಿಯ ಮುಖಂಡ ರೊಬ್ಬರು ಮಾಹಿತಿ ನೀಡಿದರು.
ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡುವುದು ಬಹುತೇಕ ಖಚಿತ ಎಂದು ಬಿಜೆಪಿಯ ಮೂಲಗಳೇ ಹೇಳುತ್ತಿವೆ. ಆದರೆ, ಸುಪ್ರೀಂ ತೀರ್ಪು ಅನರ್ಹರಿಗೆ ವಿರುದ್ಧವಾಗಿ ಬಂದು, ಚುನಾವಣೆ ಸ್ಪರ್ಧೆಗೆ ಅವಕಾಶ ನೀಡದೇ ಇದ್ದರೆ ಬಿಜೆಪಿ ತಟಸ್ಥ ನಿಲುವು ಹೊಂದುವ ಜತೆಗೆ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಿ, ಜಯಿಸಿಕೊಳ್ಳಲು ಕ್ಷೇತ್ರವಾರು ಸಂಘಟನೆ ಕಾರ್ಯ ಆರಂಭವಾಗಿದೆ. ರಾಜ್ಯಬಿಜೆಪಿ ಅಧ್ಯಕ್ಷರು ಈಗಾಗಲೇ ಎಲ್ಲ ಜಿಲ್ಲೆಗಳ ಪ್ರವಾಸ ಪೂರ್ಣಗೊಳಿಸಿ ದ್ದು, ಚುನಾವಣಾ ತಯಾರಿ ಆರಂಭಿಸಿದ್ದಾರೆ.
ಪಕ್ಷಕ್ಕೆ ಆಹ್ವಾನ: ವಿವಿಧ ಕಾರಣಗಳಿಂದ ಪಕ್ಷ ಬಿಟ್ಟು ಹೋಗಿರುವ ಹಿರಿಯ ಮುಖಂಡರನ್ನು ಪುನಃ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಬಿಜೆಪಿ ಸತತ ಪ್ರಯತ್ನ ನಡೆಯುತ್ತಿದೆ. ಉಪಚುನಾವಣೆ ಯಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿಕೊಳ್ಳುವ ದೃಷ್ಟಿಯಿಂದ ವಿವಿಧ ಪಕ್ಷದ ಮುಖಂಡರನ್ನು ಬಿಜೆಪಿಗೆ ಸೇರ್ಪಡೆ ಮಾಡಿ ಕೊಳ್ಳುವ ಕಾರ್ಯವೂ ಸತತವಾಗಿ ನಡೆಯುತ್ತಿದೆ. ಮಾಜಿ ಸಂಸದ ವಿಜಯ್‌ಶಂಕರ್ ಎರಡು ದಿನಗಳ ಹಿಂದಷ್ಟೇ ಮರಳಿ ಬಿಜೆಪಿಗೆ ಸೇರಿದರು. ಹೀಗೆ ಇನ್ನು ಅನೇಕ ನಾಯಕರು ಬಿಜೆಪಿಗೆ ಸೇರುವವರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಮ್ಮದು ಕೇಡರ್ ಆಧಾರಿತ ಪಕ್ಷ. ಯಾವುದೇ ಸಂದರ್ಭದಲ್ಲಿ ಉಪಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಸಂಘಟನೆ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ನಮ್ಮಲ್ಲಿ ಅಭ್ಯರ್ಥಿಗಳ ಆಧಾರದಲ್ಲಿ ಚುನಾವಣೆ ನಡೆಯುತ್ತದೆ. ಆದರೆ, ಕೆಲವು ಪಕ್ಷದಲ್ಲಿ ಅಭ್ಯರ್ಥಿಗಳು ಕೇವಲ ಉತ್ಸವ ಮೂರ್ತಿಗಳಂತೆ ಇರುತ್ತಾರೆ.
-ಸಿ.ಟಿ.ರವಿ, ಸಚಿವ
* ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.