ಪೌರ ಕಾರ್ಮಿಕರಿಗೆ ಬೋನಸ್‌ ನೀಡಲು ಕ್ರಮ

Team Udayavani, Nov 7, 2019, 3:06 AM IST

powrakarmika

ಬೆಂಗಳೂರು: ಬಿಬಿಎಂಪಿಯ ಪೌರ ಕಾರ್ಮಿಕರು ಎರಡು ಸಾವಿರ ರೂ. ಬೋನಸ್‌ ನೀಡುವಂತೆ ಮನವಿ ಮಾಡಿದ್ದು ಮೇಯರ್‌ರೊಂದಿಗೆ ಚರ್ಚಿಸಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಹೇಳಿದರು.

ಬಿಬಿಎಂಪಿಯ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಬಿಬಿಎಂಪಿ ಬುಧವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

“ನಮ್ಮ ಜನಾಂಗ (ಪರಿಶಿಷ್ಟ ಜಾತಿ ಮತ್ತು ಪಂಗಡ)ದವರು ಇನ್ನೂ ಶೋಷಣೆ ಮಾಡುವವರ ವಿರುದ್ಧ ಹೋರಾಡುತ್ತಿಲ್ಲ. ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ನೀಡಿರುವ ಮೀಸಲಾತಿ ಸೌಲಭ್ಯವನ್ನು ಇಂದಿಗೂ ಸಂರ್ಪೂಣವಾಗಿ ಹಿಂದುಳಿದ ವರ್ಗಗಳು ಬಳಸಿಕೊಳ್ಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕೆಲವರು ಮೀಸಲಾತಿಯನ್ನು ತೆಗೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಮೀಸಲಾತಿ ಏಕೆ ಬೇಕು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಮೀಸಲಾತಿಯ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ಇವರು ಯಾರು, ನಮಗೆ ಸಾಕು ಎಂದನಿಸಿದ ದಿನ ನಾವೇ ಮೀಸಲಾತಿ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತೇವೆ’ಎಂದರು.

“ಹಿಂದುಳಿದ ಸಮುದಾಯವನ್ನು ತುಳಿಯುವ ಶಕ್ತಿಗಳು ಹೆಚ್ಚು ಪ್ರಭಾವಿಗಳು ಅವರನ್ನು ದಾಟಿ ಮುಂದಕ್ಕೆ ಹೋಗುವುದು ಸವಾಲಿನ ಕೆಲಸ. ಅದಕ್ಕೆ ನಾವು ಶಕ್ತರಾಗಬೇಕು. ಸಂವಿಧಾನ ರಚನೆ ವೇಳೆ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಹೋರಾಟ, ಶಿಕ್ಷಣ ಮತ್ತು ಸಂಘಟನೆ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ, ಇದನ್ನು ಅಳವಡಿಸಿಕೊಳ್ಳುವಲ್ಲಿ ನಾವು ಹಿಂದುಳಿದಿದ್ದೇವೆ.

ಹಿಂದುಳಿದ ಸಮುದಾಯದಲ್ಲಿ ಇಂದಿಗೂ ಬಹುತೇಕರು ಶಿಕ್ಷಣ ಪಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಉಪ ಮೇಯರ್‌ ರಾಮ ಮೋಹನ್‌ ರಾಜ್‌ ಮಾತನಾಡಿದರು. ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಹಾಗೂ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತ ರಂದೀಪ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಪೌರಕಾರ್ಮಿಕರಿಂದ ನಗರ ಸ್ವಚ್ಛ: ಬಿಬಿಎಂಪಿಯ ಎಲ್ಲ 198 ವಾರ್ಡ್‌ಗಳ ಜನಪ್ರತಿನಿಧಿಗಳು ನೆಮ್ಮದಿಯಿಂದ ಇದ್ದಾರೆ ಎಂದರೆ ಅದಕ್ಕೆ ಪೌರ ಕಾರ್ಮಿಕರೇ ಕಾರಣ. ಅವರ ಪರಿಶ್ರಮದಿಂದಲೇ ನಗರ ಇಷ್ಟರ ಮಟ್ಟಿಗೆ ಸ್ವಚ್ಛವಾಗಿದೆ. ಪೌರ ಕಾರ್ಮಿಕರು ಒಂದು ದಿನ ಪ್ರತಿಭಟನೆಗೆ ಇಳಿದರೆ ಅಥವಾ ರಜೆ ತೆಗೆದುಕೊಂಡರೆ ನಗರ ಗಬ್ಬುನಾರುತ್ತದೆ ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.