ಬೊಲ್ಲಾರ್ಡ್ ಕಣ್ಮರೆ ವಿರುದ್ಧ ಪಾಲಿಕೆ ದೂರು
Team Udayavani, Nov 7, 2019, 3:03 AM IST
ಬೆಂಗಳೂರು: ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿನ ಎಂಟು ಬೊಲ್ಲಾರ್ಡ್ (ಬಿಗಿಗಂಬ)ಗಳು ಕಾಣೆಯಾಗಿರುವ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಬಿಬಿಎಂಪಿ ದೂರು ದಾಖಲಿಸಿದೆ. ಬಿಬಿಎಂಪಿಯು ಟೆಂಡರ್ ಶ್ಯೂರ್ ಕಾಮಗಾರಿ ಅಡಿ ಸೇಂಟ್ ಮಾರ್ಕ್ಸ್ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮುಂಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಿತ್ತು.
ಈ ಮಾರ್ಗದಲ್ಲಿ ಮಾರ್ಚ್‌ನಲ್ಲೂ ಮೂರು ಬೊಲ್ಲಾರ್ಡ್‌ಗಳು ಕಾಣೆಯಾಗಿದ್ದವು. ಇತ್ತೀಚೆಗೆ 8 ಬೊಲ್ಲಾರ್ಡ್‌ಗಳು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ಬಿಬಿಎಂಪಿಯ ಅಧಿಕಾರಿಗಳು ದೂರು ದಾಖಲಿಸಿದ್ದರು. “ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮುಂಭಾಗದ ರಸ್ತೆಯಲ್ಲಿ ಅ.28ಕ್ಕೆ ಟಾಟಾಎಸ್ ಮತ್ತು ಬುಲೆರೋ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ 8 ಬೊಲ್ಲಾರ್ಡ್‌ಗಳಿಗೆ ಹಾನಿಯಾಗಿತ್ತು ಹಾಗೂ ಬೊಲ್ಲಾರ್ಡ್‌ಗಳಿಂದ ವಾಹನ ಸಂಚಾರಕ್ಕೂ ತೊಂದರೆ ಆಗುತ್ತಿತ್ತು.
ಹೀಗಾಗಿ, ಬೊಲ್ಲಾರ್ಡ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಬಿಬಿಎಂಪಿಯ ಅಧಿಕಾರಿಗಳು ದೂರು ನೀಡಿದ ಮೇಲೆ 8 ಬೊಲ್ಲಾರ್ಡ್‌ಗಳನ್ನು ಈ ರಸ್ತೆಯ ನಿರ್ವಹಣೆ ಜವಾಬ್ದಾರಿ ಹೊಂದಿರುವ ಪ್ರಸ್ಟೀಜ್ ಸಂಸ್ಥೆಗೆ ಹಸ್ತಾಂತರಿಸಲಾಗಿದ್ದು, ಸಂಸ್ಥೆ ಎಲ್ಲ ಬೊಲ್ಲಾರ್ಡ್‌ಗಳನ್ನು ಮರಳಿ ಅಳವಡಿಸಿದೆ’ ಎಂದು ಕಬ್ಬನ್‌ಪಾರ್ಕ್ ಠಾಣೆಯ ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.