ರೈತರ ಬೆಳೆಗಳಿಗೆ ಬೆಂಬಲ ಬೆಲೆ: ಬಿ ಎಸ್ ಯಡಿಯೂರಪ್ಪ
Team Udayavani, Nov 7, 2019, 11:54 AM IST
ಹಾವೇರಿ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಯೋಜನೆ ರೂಪಿಸಿ, ನೀರಾವರಿ ಆದ್ಯತೆ ನೀಡಿ ರೈತರು ಬೆಳೆದಿರುವ ಬೆಳಗಳಿಗೆ ಬೆಂಬಲ ಬೆಲೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡರುವ ಅವರು ನಗರದ ಕೋಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿನ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ ಎರಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ. ಪ್ರಧಾನ ಮಂತ್ರಿಯವರು ಆರು ಸಾವಿರ ಹಣ ಘೋಷಿಸಿದ್ದಾರೆ. ಒಟ್ಟು ಹತ್ತು ಸಾವಿರ ಹಣ ನೀಡಲಾಗುತ್ತಿದೆ. ದೇಶದಲ್ಲೇ ಯಾವ ರಾಜ್ಯದಲ್ಲಿ ನೀಡದಷ್ಟು ಪರಿಹಾರ ರೈತರಿಗೆ ನೀಡಿಲಾಗಿದೆ. ರಾಜ್ಯದಲ್ಲಿ ರೈತಪರ ಸರ್ಕಾರವಿದ್ದು ಜನರು ಚಿಂತಿಸಬೇಕಾಗಿಲ್ಲ ಎಂದು ಆಶ್ವಾಸನೆ ನೀಡಿದರು.
ಅತಿವೃಷ್ಠಿಯಿಂದ ಹಾನಿಗಳಗಾದ ಹಾವೇರಿ ಜಿಲ್ಲೆಯ ಪರಿಹಾರ ಕಾರ್ಯಗಳು ಹಾಗೂ ಅಭಿವೃದ್ಧಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಹಾಗೂ ಹಾನಗಲ್ ಶಾಸಕ ಸಿ.ಎಂ.ಉದಾಸಿ. ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಜಿಲ್ಲಾಧಿಕಾರಿ ಕೃಷ್ಣಾ ಬಾಜಪೇಯ, ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ ದೇವರಾಜ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಬೆಂಗಳೂರಿನಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಾಳಿತದ ವತಿಯಿಂದ ಗೌರವ ರಕ್ಷೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.