ಮೀನು ಉತ್ಪಾದನೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಿ
ಮೀನುಗಾರಿಕೆ ಅಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
Team Udayavani, Nov 7, 2019, 12:46 PM IST
ಬಳ್ಳಾರಿ: ವಿವಿಧ ಪ್ರದೇಶಗಳಲ್ಲಿ ವಿವಿಧ ರೀತಿಯ ಮೀನುಗಳ ಬೇಡಿಕೆಯಿದ್ದು ಅದಕ್ಕೆ ತಕ್ಕ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಜರಾಯಿ ಮತ್ತು ಮೀನುಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಲಭ್ಯವಿರುವ ಜಲಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಪೌಷ್ಠಿಕ ಆಹಾರದ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಮತ್ತು ಬಡ ವರ್ಗದವರಿಗೂ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಬೇಡಿಕೆಗೆ ತಕ್ಕ ಮೀನುಗಳ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದರು.
ಸಂಘದ ಸದಸ್ಯರಿಗೆ ಇಲಾಖೆಯಿಂದ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಲು ಸಹಾಯಧನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಮೀನುಗಾರರ ಸಹಕಾರ ಸಂಘಗಳಲ್ಲಿ ಸಭೆ, ಸದಸ್ಯತ್ವ, ಸಾಮಾನ್ಯ ಸಭೆಯನ್ನು ನಿಬಂಧನೆಗಳ ಅನುಸಾರವಾಗಿ ನಡೆಸಬೇಕು ಎಂದರು.
ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳು ಇಲಾಖೆಗಳಲ್ಲಿ ಹೊಸ ಯೋಜನೆಗಳನ್ನು ಚಿಂತನೆ ಮಾಡಿ ಅದರ ಕಾರ್ಯರೂಪಕ್ಕೆ ತರುವುದರ ಮೂಲಕ ಜನರಿಗೆ ಸೌಲಭ್ಯ ದೊರಕುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸ್ತುತ 100ಕ್ಕೂ ಹೆಚ್ಚು ದೊಡ್ಡ ಕೆರೆ, 50ಕ್ಕೂ ಹೆಚ್ಚು ಸಣ್ಣ ಕೆರೆಗಳು ಹಾಗೂ 20 ಸಾವಿರ ಹೇಕ್ಟರ್ ನೀರಾವರಿ ಪ್ರದೇಶಗಳಲ್ಲಿ 2 ಕೋಟಿ ಮೀನು ಉತ್ಪಾದನೆ ಆಗುತ್ತಿದ್ದು, ಇದನ್ನು 4-5 ಕೋಟಿ ಉತ್ಪಾದನೆ ಮಾಡಲು ಹೊಸ ಯೋಜನೆಗಳನ್ನು ರೂಪಿಸಬೇಕು ಎಂದರು.
ಹಂಪಿ ಉತ್ಸವದಲ್ಲಿ ಮತ್ಸ್ಯ ಮೇಳ: ಜ. 11 ಮತ್ತು 12 ರಂದು ಹಂಪಿಯಲ್ಲಿ ನಡೆಯಲಿರುವ ಹಂಪಿ ಉತ್ಸವದಲ್ಲಿ ಮತ್ಸ್ಯ ಮೇಳವನ್ನು ಆಯೋಜಿಲಾಗುತ್ತದೆ. ಈ ಮೇಳದಲ್ಲಿ ಅಲಂಕಾರಿಕವಾದ ಮತ್ಸ್ಯಗಳನ್ನು ಪ್ರದರ್ಶನ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.
ನಂತರ ಧಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಎಲ್ಲ ಎ-ಶ್ರೇಣಿ, ಬಿ-ಶ್ರೇಣಿ ದೇವಸ್ಥಾನಗಳಲ್ಲಿ ಪಾರದರ್ಶಕವಾದ ಆಡಳಿತವನ್ನು ನಡೆಸಬೇಕು. ಕಾನೂನಿನ ಚೌಕಟ್ಟಿನಲ್ಲಿ ದೇವಸ್ಥಾನದ ಅನುದಾನವನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಠಾಧಿಧೀಶರು ಹಾಗೂ ಇತರೆ ಗಣ್ಯವ್ಯಕ್ತಿಗಳ ಸಮಕ್ಷಮದಲ್ಲಿ ಬೃಹತ್ ಸಾಮೂಹಿಕ ಮದುವೆ ಕಾರ್ಯಕ್ರಮ ಏರ್ಪಡಿಸುವ ಉದ್ದೇಶವಿದೆ ಎಂದರು.
ಎಲ್ಲ ದೇವಸ್ಥಾನದಲ್ಲಿ ಪ್ಲಾಸ್ಟಿಕ್‌ನ್ನು ಉಪಯೋಗಿಸಬಾರದು. ಪ್ಲಾಸ್ಟಿಕ್ ಬ್ಯಾನ್ ಕುರಿತು ದೇವಸ್ಥಾನಗಳಲ್ಲಿ ಫಲಕಗಳನ್ನು ಹಾಕಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎ, ಬಿ ಮತ್ತು ಸಿ-ಶ್ರೇಣಿಯ ದೇವಸ್ಥಾನಗಳ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೇರಿದಂತೆ ಮೀನುಗಾರಿಕೆ, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.