ಸರ್ಕಾರ ಕೊಟ್ಟರೂ ಸಿಗದ ಸೌಲಭ್ಯ

ಪೂರ್ಣಗೊಳ್ಳದ ಹಿರೇಬಾಗೇವಾಡಿ ಕಾಲೇಜು ಕಟ್ಟಡಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹಿನ್ನಡೆ

Team Udayavani, Nov 7, 2019, 5:38 PM IST

7-November-116

„ಶಿವಾನಂದ ಮೇಟಿ
ಹಿರೇಬಾಗೇವಾಡಿ:
ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಕಲ್ಪಿಸುವಲ್ಲಿ ಆಡಳಿತ ವ್ಯವಸ್ಥೆಯು ವಿಫಲವಾಗಿದ್ದರಿಂದ ಗ್ರಾಮದಲ್ಲಿ ಶಿಕ್ಷಣ ಹಿನ್ನಡೆ ಅನುಭವಿಸುವಂತಾಗಿದೆ.

ಇದಕ್ಕೆ ಹಿರೇಬಾಗೇವಾಡಿಯ ಸರ್ಕಾರಿ ಪದವಿ ಪೂರ್ವ ವಿದ್ಯಾಲಯವೇ ನಿದರ್ಶನ. ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅವಲಂಬಿಸಿದ ಗ್ರಾಮಕ್ಕೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಕಾಲೇಜುಗಳು ಬೇಕೆನ್ನುವುದು ಸ್ಥಳೀಯ ಕೆಲ ಶಿಕ್ಷಣ ಪ್ರೇಮಿಗಳ ಆಶಯವಾಗಿತ್ತು. ಈ ದಿಸೆಯಲ್ಲಿ ಕೆಲ ಉತ್ಸಾಹಿಗಳು ಪ್ರಯತ್ನಿಸಿದ್ದರಿಂದ ಹಂತ-ಹಂತವಾಗಿ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜು ಅಸ್ತಿತ್ವಕ್ಕೆ ಬಂದಿವೆ. ಆದರೆ ಸರ್ಕಾರದ ಅನುದಾನ ಲಭ್ಯವಿದ್ದರೂ ಸಕಾಲದಲ್ಲಿ ಸದ್ಬಳಕೆಯಾಗದೇ ವಿದ್ಯಾರ್ಥಿಗಳಿಗೆ ಕಟ್ಟಡ ಸೌಲಭ್ಯ ಸಿಗುತ್ತಿಲ್ಲ.

ಗ್ರಾಮದಲ್ಲಿ 2007ರಲ್ಲಿ ಸರ್ಕಾರಿ ಪಿ.ಯು. ಕಾಲೇಜು ಮಂಜೂರು ಮಾಡಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳನ್ನು ಪ್ರಾರಂಭಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಸದ್ಯ ಒಟ್ಟು 149 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಭೌತಶಾಸ್ತ್ರ ಉಪನ್ಯಾಸಕರನ್ನು ಹೊರತು ಪಡಿಸಿ, ಉಳಿದ ಒಟ್ಟು 10 ಉಪನ್ಯಾಸಕರು ಶಿಕ್ಷಣ ಸೇವೆಯಲ್ಲಿದ್ದಾರೆ.

ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯವನ್ನು ಕಲ್ಪಿಸಲು ಸರ್ಕಾರ 2016-17ನೇ ಸಾಲಿನಲ್ಲಿ ಐ.ಆರ್‌.ಡಿ.ಎಫ್‌-19, ಯೋಜನೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಿದೆ. ನಾಲ್ಕು ಕೊಠಡಿಗಳು ಹಾಗೂ ಹೈಟೆಕ್‌ ಶೌಚಾಲಯಗಳ ನಿರ್ಮಾಣ ಕಾರ್ಯಕ್ಕೆ ಒಟ್ಟು 88.65 ಲಕ್ಷ ರೂ. ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಿದೆ.

ಟೆಂಡರ್‌ ಆದ ಈ ಕಾಮಗಾರಿಯ ಕೆಲಸ 2017-18 ರಿಂದಲೂ ಆಮೆಗತಿಯಲ್ಲಿ ಸಾಗಿದ್ದು, ನಿಗದಿ ಪಡಿಸಿದ ಕಾಲಾವಧಿ ಮುಗಿದಿದ್ದು ಇನ್ನೂ ಕೆಲಸ ಪೂರ್ಣಗೊಂಡಿಲ್ಲ. ಈ ಬಗ್ಗೆ ವಿಚಾರಿಸಲು ದೂರವಾಣಿ ಕರೆ ಮಾಡಿದರೆ ಗುತ್ತಿಗೆದಾರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎನ್ನುವುದು ಕಾಲೇಜಿನ ಪ್ರಾಚಾರ್ಯರು ಹಾಗೂ ಭೂಸೇನಾ ಸಹಾಯಕ ಎಂಜಿನಿಯರ ದೂರು.

ಸರ್ಕಾರ ಅನುದಾನ ನೀಡಿ ಎರಡು ವರ್ಷವಾದರೂ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೇ ನೂತನ ಕಟ್ಟಡದಲ್ಲಿ ಕಲಿಯುವ ಭಾಗ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ಕೂಡಿ ಬಂದಿಲ್ಲ. ಈ ಬಗ್ಗೆ ಕಾಲೇಜಿನ ಅಧ್ಯಕ್ಷರಾಗಿರುವ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಗಮನ ಹರಿಸಿ ಕಟ್ಟಡ ಹಸ್ತಾಂತರ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕೆಂಬುದು ಸ್ಥಳೀಯರ ಅಗ್ರಹವಾಗಿದೆ.

ಟಾಪ್ ನ್ಯೂಸ್

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.