ಜನಶಕ್ತಿ ಮಹಾ ಪ್ರದರ್ಶನಕ್ಕೆ ಸಾಕ್ಷಿ ಆಗಲಿದೆಯೇ ಕೃತಜ್ಞತಾ ಸಮಾವೇಶ?


Team Udayavani, Nov 7, 2019, 3:12 PM IST

Udayavani Kannada Newspaper

„ಎಚ್‌.ಕೆ. ನಟರಾಜ
ಹಾವೇರಿ:
ಸಿಎಂ ಯಡಿಯೂರಪ್ಪ ಅವರ ಭೇಟಿ ಹಿರೇಕೆರೂರು ಕ್ಷೇತ್ರದ ಉಪಚುನಾವಣಾ ಕಣ ರಂಗೇರಿಸಲಿದ್ದು ಕಾರ್ಯಕರ್ತರ ಉತ್ಸಾಹ, ಚಟುವಟಿಕೆ ಚುರುಕುಗೊಳ್ಳಲಿದೆ. ರಾಜಕೀಯ ಬದ್ಧವೈರಿಗಳಾಗಿದ್ದ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ಇದಕ್ಕೆ ಸಿಎಂ ಯಡಿಯೂರಪ್ಪ ಸಾಕ್ಷಿಯಾಗಲಿದ್ದಾರೆ.

ಅವರ ಈ ಭೇಟಿಯಿಂದ ಕ್ಷೇತ್ರದಲ್ಲಿ ಉಪಚುನಾವಣೆ ಕಾವು ಪಡೆಯುವ ಸಾಧ್ಯತೆ ಇದೆ. ರಾಜಕಾರಣದ ಪ್ರತಿ ಹಂತದಲ್ಲೂ ಪ್ರತ್ಯೇಕವಾಗಿ ಸಮಾವೇಶ, ಕಾರ್ಯಕ್ರಮಗಳನ್ನು ಮಾಡಿ ಜನಶಕ್ತಿ ಪ್ರದರ್ಶಿಸುತ್ತಿದ್ದ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಅವರು ಈಗ ಸಿಎಂ ಯಡಿಯೂರಪ್ಪ ಆಗಮನ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರೂ ಸೇರಿ ಜಂಟಿಯಾಗಿ ಕೃತಜ್ಞತಾ ಸಮಾವೇಶ ಸಂಘಟಿಸಿದ್ದಾರೆ.

ಈ ಸಮಾವೇಶದಲ್ಲಿ ಇಬ್ಬರ ನಾಯಕರ ಜನಶಕ್ತಿ ಒಂದುಗೂಡಲಿದೆ. ಈ ಶಕ್ತಿ ಉಪಚುನಾವಣೆಯಲ್ಲಿ ಲಾಭ ತಂದುಕೊಡಲಿದೆ ಎಂಬ ಲೆಕ್ಕಾಚಾರ ನಾಯಕರದ್ದಾಗಿದೆ. ಉಪಚುನಾವಣೆಯಲ್ಲಿ ಬಿ.ಸಿ. ಪಾಟೀಲ ಬಿಜೆಪಿಯಿಂದ ಸ್ಪರ್ಧಿಸುತ್ತಾರೆಂಬ ವಿಚಾರ ಖಚಿತವಾಗುತ್ತಿದ್ದಂತೆ ಇದಕ್ಕೆ ಮಾಜಿ ಶಾಸಕ ಯು.ಬಿ. ಬಣಕಾರ ಹಾಗೂ ಅವರ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು ಆಗ ಬಣಕಾರ ಅವರನ್ನು ಮನವೊಲಿಸಲು ಪಕ್ಷ ಅವರಿಗೆ ನಿಗಮವೊಂದರ ಅಧ್ಯಕ್ಷ ಸ್ಥಾನ ನೀಡಿತು. ಆದರೆ, ಬಣಕಾರ ಇದನ್ನು ಒಪ್ಪಿಕೊಳ್ಳದೇ ನಿಗಮ ಅಧ್ಯಕ್ಷ ಸ್ಥಾನ ನಿರಾಕರಿಸಿದರು. ಉಪ ಚುನಾವಣೆಯಲ್ಲಿ ತಮಗೇ ಟಿಕೆಟ್‌ ಸಿಗಬೇಕೆಂಬ ಸಂದೇಶವನ್ನು ಕಾರ್ಯಕರ್ತರ ಮೂಲಕ ಹೈಕಮಾಂಡ್‌ಗೆ ಕಳುಹಿಸಿದ್ದರು. ಬಳಿಕ ಹೈಕಮಾಂಡ್‌ ಎರಡನೇ ಬಾರಿ ಬಣಕಾರ ಅವರ ಮನವೊಲಿಸುವ ಪ್ರಯತ್ನ ನಡೆಸಿ, ಅದರಲ್ಲಿ ಯಶಸ್ವಿಯಾಯಿತು. ಇದರ ಪರಿಣಾಮ ಬಣಕಾರ ನಿಗಮದ ಅಧ್ಯಕ್ಷ ಸ್ಥಾನ ಅಲಂಕರಿಸಿದರು.

ತಮ್ಮ ಮಾತಿನ ವರಸೆ ಬದಲಾಯಿಸಿ ಅಭಿವೃದ್ಧಿ ಹೆಸರಲ್ಲಿ ಒಪ್ಪಿಗೆಯ ತಂತ್ರ-ಒಗ್ಗಟ್ಟಿನ ಮಂತ್ರ ಪಠಿಸಲು ಆರಂಭಿಸಿದ್ದರು. ಎರಡು ದಿನಗಳ ಹಿಂದಷ್ಟೇ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಇಬ್ಬರೂ ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಇಬ್ಬರೂ ಒಂದಾಗಿದ್ದೇವೆ’ ಎಂಬ ಸಂದೇಶವನ್ನೂ ಕ್ಷೇತ್ರದ ಜನತೆಗೆ ಸಾರಿದ್ದರು. ಒಟ್ಟಾರೆ ಕ್ಷೇತ್ರದ ನಾಯಕರ ಈ ದೋಸ್ತಿಗೆ ಸಿಎಂ ಭೇಟಿ ಇನ್ನಷ್ಟು ಪುಷ್ಟಿ ತುಂಬುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.