ವೈದ್ಯರ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ಆಗ್ರಹ
Team Udayavani, Nov 8, 2019, 11:03 AM IST
ಹುಬ್ಬಳ್ಳಿ: ವೈದ್ಯರ ಮೇಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಸ್ಥಳೀಯ ಘಟಕದ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಡಾ| ಜಿ.ಬಿ.ಸತ್ತೂರ ಮಾತನಾಡಿ, ಇಂದು ಸಮಾಜದಲ್ಲಿ ಜೀವ ಉಳಿಸುವ ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದಾದರೂ ಏಕೆ ಎನ್ನುವ ಪ್ರಶ್ನೆ ನಮ್ಮೆಲ್ಲರನ್ನು ಕಾಡುತ್ತಿದೆ. ಇಂತಹ ಘಟನೆಗಳಿಂದಾಗಿ ವೈದ್ಯರು ಚಿಕಿತ್ಸೆ ನೀಡಲು ಸಹ ಹಿಂಜರಿಯುತ್ತಿದ್ದು, ನಮಗೇಕೆ ಉಸಾಬರಿ ಎಂದು ಹಿಂದೆ ಸರಿಯುತ್ತಿದ್ದಾರೆ ಎಂದರು.
ನೇತ್ರ ತಜ್ಞ ಡಾ| ಶ್ರೀನಿವಾಸ ಜೋಶಿ ಮಾತನಾಡಿ, ಮಿಂಟೊ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣೆ ಮಾಡಿರುವ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಅವಳದಲ್ಲದ ತಪ್ಪಿಗೆ ಅವಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಿದರು.
ಅಸೋಸಿಯೇಶನ್ ಅಧ್ಯಕ್ಷ ಡಾ| ಕ್ರಾಂತಿಕಿರಣ ಮಾತನಾಡಿ, ವೈದ್ಯರ ಮೇಲೆ ಹಲ್ಲೆ ಮಾಡಿರುವ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ನ. 8ರ ಬೆಳಗ್ಗೆ 6ರಿಂದ ನ. 9ರ ಬೆಳಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಓಪಿಡಿ ವಿಭಾಗ ಬಂದ್ ಮಾಡಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಡಾ| ಸಚಿನ ರೇವಣಕರ, ಡಾ| ಮಂಜುನಾಥ ನೇಕಾರ, ಡಾ| ಕದಂ, ಡಾ| ಅಭಯ ಮಟಕರ, ಎಂ.ಸಿ. ಸಿಂಧೂರ, ಡಾ| ಜಿತೂರಿ, ಡಾ| ಸುರೇಶ ಕೊರ್ಲಹಳ್ಳಿ, ಡಾ| ಬಬ್ರುವಾಡ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.