ಮೊಬೈಲ್ ಆ್ಯಪ್ ತಂದ ಸಂಕಷ್ಟ
Team Udayavani, Nov 9, 2019, 10:12 AM IST
ಬೆಂಗಳೂರು: ಮೊಬೈಲ್ ಆ್ಯಪ್ನಲ್ಲಿ ಪರಿಚಯವಾದ ಅಪರಿಚಿತ ಯುವತಿಯೊಬ್ಬರು ಖಾಸಗಿ ವಿಡಿಯೋಗಳನ್ನು ಇಟ್ಟು ಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಸಾಫ್ಟ್ವೇರ್ ಎಂಜಿನಿಯರ್ವೊಬ್ಬರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿತ ಯುವತಿ ಯಾರು ಎಂಬುದನ್ನು ಪತ್ತೆಹಚ್ಚುತ್ತಿದ್ದು ತನಿಖೆ ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ದೂರುದಾರ ಟೆಕ್ಕಿ ಹೊಸ ಸ್ನೇಹಿತರಾಗುವ ಮೊಬೈಲ್ ಆ್ಯಪ್ವೊಂದನ್ನು ತಮ್ಮ ಮೊಬೈಲ್ಗೆ ಇನ್ಸ್ಟಾಲ್ ಮಾಡಿಕೊಂಡಿದ್ದರು. ಈ ಆ್ಯಪ್ನಲ್ಲಿ ಪರಿಚಯವಾದ ಪ್ರಿಯಾಸಿಂಗ್ ಎಂಬಾಕೆ ಅ. 28ರಂದು ಸಂದೇಶ ಕಳುಹಿಸಿದ್ದಳು. ವಾಪಸ್ ವಿಡಿಯೋ ಕರೆ ಮಾಡಿಸಿಕೊಂಡಿದ್ದ ಆಕೆ ಪ್ರಚೋದಿಸಿ ಮಾತನಾಡಿದ್ದಳು. ಇದಾದ ಕೆಲ ದಿನಗಳಲ್ಲಿಯೇ ವಿಡಿಯೋ ಕರೆಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಸಂದೇಶ ಕಳುಹಿಸಿ 30 ಸಾವಿರ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಹಣ ನೀಡದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ದೂರುದಾರರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.