ಡಿ.15ರಿಂದ ಸಿಗಂದೂರು ಸೇತುವೆ ಕಾಮಗಾರಿ ಶುರು
Team Udayavani, Nov 9, 2019, 4:00 PM IST
ಸಾಗರ: ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅನುದಾನ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಗುತ್ತಿಗೆದಾರ ಸಂಸ್ಥೆ ಸಹ ನೇಮಕ ಮಾಡಲಾಗಿದೆ. ಡಿ. 15ರೊಳಗೆ ಅಂಬಾರಗೊಡ್ಲು- ಕಳಸವಳ್ಳಿ ನಡುವಿನ ಸಿಗಂದೂರು ಸೇತುವೆ ಕಾಮಗಾರಿ ಕಾರ್ಯಾರಂಭವಾಗಲಿದೆ ಎಂದು ಶಾಸಕ ಎಚ್.ಹಾಲಪ್ಪ ತಿಳಿಸಿದ್ದಾರೆ.
ತಾಲೂಕಿನ ಕೋಳೂರು ಗ್ರಾಪಂ ವ್ಯಾಪ್ತಿಯ ಅಂಬಾರಗೊಡ್ಲು ಭಾಗದಲ್ಲಿನ ಸೇತುವೆ ನಿರ್ಮಾಣದ ಉದ್ದೇಶಿತ ಸ್ಥಳಕ್ಕೆ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ನಿಗಮದ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಲಾಖೆ ಸೇತುವೆ ನಿರ್ಮಾಣ ಸಂಬಂಧ ಡಿಪಿಆರ್ ತಯಾರಿಸಿ, ಮಣ್ಣು ಪರೀಕ್ಷೆ ಸಂಬಂಧ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಮುಂದಿನ 15 ದಿನಗಳ ಕಾಲ ಸೇತುವೆ ನಿರ್ಮಾಣ ಪ್ರದೇಶ ವ್ಯಾಪ್ತಿಯಲ್ಲಿ ಮಣ್ಣು ಪರೀಕ್ಷೆ ನಡೆಸಿ ವರದಿ ನೀಡಲಿದ್ದಾರೆ.
ಈಗಾಗಲೇ ಕಾಮಗಾರಿ ಪ್ರಾರಂಭ ಮಾಡಲು ಅಗತ್ಯವಾದ ಎಲ್ಲ ಸಾಮಗ್ರಿಗಳನ್ನು ಸ್ಥಳದಲ್ಲಿ ಸಂಗ್ರಹಿಸಲಾಗಿದೆ. ಮಣ್ಣು ಪರೀಕ್ಷೆ
ವರದಿ ನಂತರ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ತುಮರಿ ಸೇತುವೆ ನಿರ್ಮಾಣಕ್ಕೆ ಕೇಂದ್ರದ ಭಾರತ್ ಮಾಲಾ ಯೋಜನೆಯಡಿ 423 ಕೋಟಿ ರೂ. ಹಣ ಮಂಜೂರಾಗಿದೆ. ಸ್ಥಳೀಯ ಜನರ ಅಹವಾಲಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸೇತುವೆ ನಿರ್ಮಾಣಕ್ಕೆ ಮುಂದಾಗಿದೆ. ಸೇತುವೆ ನಿರ್ಮಾಣದ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದರಾದ ರಾಘವೇಂದ್ರ ಅವರ ಪಾತ್ರ ಅತ್ಯಂತ ಗಮನಾರ್ಹವಾದದ್ದು ಎಂದು ಹೇಳಿದರು.
ಸೇತುವೆ 2.1 ಕಿಮೀ ಉದ್ದ ಹಾಗೂ 18 ಮೀಟರ್ ಅಗಲದಲ್ಲಿ ನಿರ್ಮಾಣಗೊಳ್ಳಲಿದೆ. ಇದರ ಜೊತೆಗೆ ಅಂಬಾರಗೊಡ್ಲು ದಡದಿಂದ 2 ಕಿಮೀ ಮತ್ತು ಕಳಸವಳ್ಳಿ ದಡದಿಂದ 3 ಕಿಮೀ ರಸ್ತೆ ನಿರ್ಮಾಣಗೊಳ್ಳಲಿದೆ. ಇದರ ಜೊತೆಗೆ ಸಾಗರ ನಗರದ ಶಿವಪ್ಪ ನಾಯಕ ವೃತ್ತದಿಂದ ಮರಕುಟಿಗ ಗ್ರಾಮದವರೆಗೆ ಸುಮಾರು 69 ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ದವಾಗುತ್ತಿದೆ. ತಕ್ಷಣ ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡುವಂತೆ ಸಂಸದರಿಗೆ ಮನವಿ ಮಾಡಲಾಗಿದೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಪ್ರಸನ್ನ ಕೆರೆಕೈ, ರಾಷ್ಟ್ರೀಯ ಹೆದ್ದಾರಿ ನಿಗಮದ ಮುಖ್ಯ ಅಭಿಯಂತರ ಗೋವಿಂದರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ಪೀರ್‌ಪಾಷಾ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.