ಕೆರೆಗಳ ಅಭಿವೃದ್ಧಿಗೆ ಬದ್ಧ: ಚಂದ್ರಪ್ಪ

ಕೆರೆಗಳಲ್ಲಿ ನೀರು ತುಂಬಿರುವುದರಿಂದ ಕೃಷಿ ಚಟುವಟಿಕೆಯಲ್ಲಿ ಚೇತರಿಕೆ

Team Udayavani, Nov 9, 2019, 6:05 PM IST

9-November-25

ಹೊಳಲ್ಕೆರೆ: ಪಟ್ಟಣದ ಹಿರೇಕೆರೆ ಆಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಕೆರೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸುವ ಮೂಲಕ ಕೆರೆಯಲ್ಲಿ ಶಾಶ್ವತವಾಗಿ ನೀರು ನಿಲ್ಲುವಂತೆ ಮಾಡಲಾಗುವುದು ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಹಮ್ಮಿಕೊಂಡಿದ್ದ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಪಟ್ಟಣದ ಸುತ್ತ ಇರುವ ಕೆರೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಯೋಜನೆ ರೂಪಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಕೆರೆಗಳನ್ನು ಶುದ್ಧಗೊಳಿಸುವ ಮೂಲಕ ಅಲ್ಲಿದ್ದ ಮುಳಿನ ಗಿಡಗಳನ್ನು ತೆರವುಗೊಳಿಸಲಾಗಿತ್ತು. ಕೆರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಂದಿದೆ. ಸಾಕಷ್ಟು ಮಳೆಯಾಗಿ ಕೆರೆಗಳು ಭರ್ತಿಯಾಗಿರುವುದು ಸಂತಸ ತಂದಿದೆ ಎಂದರು.

ಕಳೆದ ಹಲವಾರು ವರ್ಷಗಳಿಂದ ಮಳೆ ಇಲ್ಲದೆ ಕೆರೆಗಳು ತುಂಬಿರಲಿಲ್ಲ. ಹಿಂದಿನ ಬಾರಿ ಶಾಸಕನಾಗಿದ್ದಾಗ ಪಟ್ಟಣದ ಕೆರೆಗಳು ಭರ್ತಿಯಾಗಿದ್ದವು. ಬಾಗಿನ ಅರ್ಪಿಸಿ ಒಂಭತ್ತು ವರ್ಷಗಳು ಕಳೆದಿವೆ. ಈ ವರ್ಷ ಸುರಿದ ಮಳೆಗೆ ಕೆರೆ ಕಟ್ಟೆಗಳು ತುಂಬಿಕೊಂಡಿವೆ. ಹಾಗಾಗಿ ತಾಲೂಕಿನಲ್ಲಿರುವ ಬಹುತೇಕ ಕೆರೆಗಳಿಗೆ ಬಾಗಿನ ಸಮರ್ಪಿಸುತ್ತೇವೆ. ಕೆರೆಗಳಲ್ಲಿ ನೀರು ತುಂಬಿರುವ ಪರಿಣಾಮ ತೋಟಗಾರಿಕೆ ಮತ್ತು ಕೃಷಿಯಲ್ಲಿ ಸಾಕಷ್ಟು ಚೇತರಿಕೆ ಕಾಣಿಸಿಕೊಂಡಿದೆ ಎಂದು ತಿಳಿಸಿದರು.

ಕೆರೆಗೆ ಗಂಗಾಪೂಜೆ ಸಲ್ಲಿಸಲಾಯಿತು. ಪಟ್ಟಣದ ನೂರಾರು ರೈತರು ಸ್ವಇಚ್ಚೆಯಿಂದ ಅನ್ನಸಂತರ್ಪಣೆಗೆ ದವಸ ಧಾನ್ಯಗಳನ್ನು ನೀಡಿದ್ದರು. ಕೆರೆ ಏರಿ ಮೇಲೆ ಐದು ಸಾವಿರ ಜನರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಬಾಗಿನ ಅರ್ಪಿಸುವ ಕಾರ್ಯಕ್ರಮದ ನೇತೃತ್ವವನ್ನು ಗಂಗಾಧರಯ್ಯ ಸ್ವಾಮೀಜಿ, ರೈತ ಸಂಘದ ಅಧ್ಯಕ್ಷ ಲೋಕೇಶ್‌, ಕಾರ್ಯದರ್ಶಿ ಅಜಯ್‌, ಪಟ್ಟಣ ಪಂಚಾಯತ್‌ ಮಾಜಿ ಸದಸ್ಯರಾದ ಇಂದ್ರಪ್ಪ, ಕೆ.ಆರ್‌. ರಾಜಪ್ಪ, ಸಿದ್ರಮಣ್ಣ, ಈಶ್ವರಪ್ಪ, ಲಿಂಗರಾಜಪ್ಪ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ ಸದಸ್ಯರಾದ ಕೆ.ಸಿ. ರಮೇಶ್‌, ಪಿ.ಎಚ್‌. ಮುರುಗೇಶ್‌, ಮಲ್ಲಿಕಾರ್ಜುನ್‌, ಡಿ.ಎಸ್‌. ವಿಜಯ್‌, ಎಚ್‌.ಆರ್‌. ನಾಗರತ್ನ ವೇದಮೂರ್ತಿ, ನಾಗರಾಜ್‌, ತಾಪಂ ಸದಸ್ಯ ಶಿವಕುಮಾರ್‌, ಭಂಗಿ ಲೋಕೇಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.