ಸರ್ಕಾರಗಳ ನೀತಿ ರೈತಪರ ಇರಲಿ
ರೈತರ ಸಮಸ್ಯೆಗೆ ಸ್ಪಂದಿಸಲು ಸಂಘಟನೆ ಮನವಿನಷ್ಟದ ಪರಿಹಾರ ನೀಡದೇ ಮಲತಾಯಿ ಧೋರಣೆ
Team Udayavani, Nov 9, 2019, 2:23 PM IST
ದೇವದುರ್ಗ: ಬರ ಮತ್ತು ನೆರೆಗೆ ತುತ್ತಾದ ರೈತರ ಪರ ಕೆಲಸ ಮಾಡದ ಸರಕಾರಗಳ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳು ಈಡೇರಿಕೆಗಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಪದಾಧಿಕಾರಿಗಳು ಶುಕ್ರವಾರ ಉಪತಹಶೀಲ್ದಾರ್ ಶ್ರೀನಿವಾಸ ಚಾಪಲ್ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಮತ್ತು ತಾಲೂಕು ಆಡಳಿತ ಗಾಡ್‌ನಿದ್ರೆಗೆ ಜಾರಿದ್ದು, ರೈತರು ಸಂಕಷ್ಟ ಅನುಭವಿಸಬೇಕಾಗಿದೆ. ಪ್ರವಾಹ ನೆರೆಯಿಂದ ಸಾವಿರಾರ ರೂ. ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾನಿಯಾಗಿದ್ದು, ಇಲ್ಲಿವರೆಗೆ ರೈತರಿಗೆ ನಷ್ಟದ ಪರಿಹಾರ ನೀಡದೇ ಮಲತಾಯಿ ಧೋರಣೆ ತಾಳಿದ್ದಾರೆ ಎಂದು ದೂರಿದರು.
ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 10ವರೆಗೆ ನೀರು ಹರಿಸಬೇಕು. ಬಲದಂಡೆ ಮುಖ್ಯ ಕಾಲುವೆಗಾಗಿ ಭೂಮಿ ಕಳೆದುಕೊಂಡ ಆಗ್ರಹಾರ, ಮಸೀದಿಪುರ, ಶಾಂವತಗಲ್ ಸೇರಿ ನೊಂದ ರೈತರಿಗೆ ಸಮಪರ್ಕವಾಗಿ ಭೂ ಪರಿಹಾರ ಒದಗಿಸಬೇಕು. ತಾಲೂಕಿನ ಎಲ್ಲಾ ರೈತರಿಗೂ 2018 ಹಿಂಗಾರು ಹಂಗಾಮಿನ ಬೆಳೆನಷ್ಟ ಪರಿಹಾರ ನೀಡಬೇಕು.
ಫಸಲ್ ಭೀಮಾ ಯೋಜನೆಯಡಿ ವಿಮೆ ಕಂತು ತುಂಬಿದ ರೈತರಿಗೆ ಪರಿಹಾರ ಒದಗಿಸಬೇಕು. ನೆರೆ ಸಂತ್ರಸ್ತರ ಗ್ರಾಮಗಳಲ್ಲಿ ಪುನರ್ವಸತಿ ಕಲ್ಪಿಸಬೇಕು. ಬೆಳೆ ನಷ್ಟಕ್ಕೆ ಎಕರೆಗೆ 20 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ನೋಂದಣಿ ಕಚೇರಿಯಲ್ಲಿ ಎರಡನೇ ಮಹಡಿಯಲ್ಲಿದ್ದು, ವೃದ್ಧರಿಗೆ ಸೇರಿ ಇತರೆರಿಗೆ ತೊಂದರೆ ಉಂಟಾಗುತ್ತಿದೆ. ಕಳೆಗಡೆ ಕಚೇರಿ ಸ್ಥಳಾಂತರ ಮಾಡಬೇಕು. ಸರಕಾರದ ನಿರ್ಬಂಧವಿದ್ದರೂ ತಾಲೂಕಿನ್ಯಾದಂತ ಬಯೋ ರಾಸಾಯನಿಕ ಕ್ರಿಮಿನಾಶಕಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ. ಮಳೆಯಿಂದಾಗಿ ಬಹುತೇಕ ಗ್ರಾಮಗಳ ರಸ್ತೆಗಳ ತೀರ ಹದಗೆಟ್ಟು ಹೋಗಿದ್ದು, ದುರಸ್ತಿ ಕಾರ್ಯದ ಕೆಲಸ ಅಧಿಕಾರಿಗಳು ಬೇಗನೆ ಆರಂಭಿಸಬೇಕು. ಬ್ಯಾಂಕ್ ಗಳಲ್ಲಿ ರೈತರಿಗೆ ಸಾಲ ಸಿಗುತ್ತಿಲ್ಲ. ತಾಲೂಕು ಆಡಳಿತ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಸರಳ ಸಾಲ ದೊರಕುವಂತೆ ಮಾಡಬೇಕು.
ಕ್ಯಾದಿಗೇರಾ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ಹೊಸ ಖಾತೆ ತೆರೆಯುತ್ತಿಲ್ಲ. ಹೀಗಾಗಿ ರೈತರು ಜನಸಾಮಾನ್ಯರು ಬ್ಯಾಂಕಿಗೆ ಅಲೆದಾಡುವಂತಾಗಿದೆ. ಇಲ್ಲಿನ ಸಮಸ್ಯೆ ಕುರಿತು ಬಗೆಹರಿಸಲು ಪ್ರತ್ಯೇಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಬೂದೆಯ್ಯಸ್ವಾಮಿ ಗಬ್ಬೂರ, ಬೆಟ್ಟನಗೌಡ ಅಗ್ರಹಾರ, ಮಲ್ಲಪ್ಪಗೌಡ ಗಬ್ಬೂರ, ಬಸನಗೌಡ ಅಗ್ರಹಾರ, ಉಮಾಪತಿಗೌಡ ನಗರಗುಂಡ, ರಾಮನಗೌಡ ಗಣೇಕಲ್, ಆಂಜನೇಯ್ಯ, ಮಸ್ತಾನ್, ಉಮ್ಮಣ್ಣ ನಾಯಕ, ಶಿವುಕುಮಾರ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.