ಮುಂಜಾನೆ ಒಬ್ಬಳೇ ರೂಮಿಗೆ ಬಾ ಎಂದ ಖ್ಯಾತ ನಟ: ಅದಕ್ಕೆ ನಟಿ ಇಶಾ ಕೊಟ್ಟ ಉತ್ತರವೇನು ಗೊತ್ತಾ ?
Team Udayavani, Nov 10, 2019, 2:30 PM IST
ಮುಂಬೈ: ಬಾಲಿವುಡ್ ನಲ್ಲಿ ಮತ್ತು ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಇಶಾ ಕೋಪ್ಪಿಕರ್ ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಸಿನಿಮಾ ಶೂಟಿಂಗ್ ವೇಳೆ ತಮಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದು , ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ್ದು ಮಾತ್ರವಲ್ಲದೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ತಮಿಳು, ಕನ್ನಡ , ತೆಲುಗು , ಮರಾಠಿ ಸೇರಿದಂತೆ ಬಹುಭಾಷೆಗಳಲ್ಲಿ ನಾಯಕಿಯಾಗಿ ನಟಿಸಿರುವ ಇಶಾ ಕೋಪ್ಪಿಕರ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಸಿನಿಮಾ ರಂಗದಲ್ಲಿ ಕಾಸ್ಟಿಂಗ್ ಕೌಚ್ ಭಾರೀ ಸದ್ದು ಮಾಡುತ್ತಿರುವ ವಿಚಾರ. ಇತ್ತೀಚಿಗೆ ಹಲವು ನಟಿಯರು ಈ ಕುರಿತು ಮುಕ್ತವಾಗಿ ಮಾತನಾಡಿ ಆಕ್ರೋಶ ವ್ಯಕತಪಡಿಸಿದ್ದರು. ಈಗ ಇಶಾ ಕೋಪ್ಪಿಕರ್ ಕೂಡ ತಮಗೂ ಕೂಡ ಕಾಸ್ಟಿಂಗ್ ಕೌಚ್ ಅನುಭವವಾಗಿತ್ತು ಎಂದು ತಿಳಿಸಿದ್ದಾರೆ. ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ವೇಳೆ ಕೆಲವು ಸಹನಟರು ಲೈಂಗಿಕ ಸಂಬಂಧಕ್ಕೆ ಸಹಕರಿಸುವಂತೆ ಒತ್ತಾಯಿಸಿದ್ದರು ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಸಹನಟನೊಬ್ಬನನ್ನು ಮುಂಜಾನೆ ಭೇಟಿಯಾಗುವಂತೆ ನನಗೆ ತಿಳಿಸಲಾಗಿತ್ತು. ಅದನ್ನು ನಾನು ಕೂಡ ಒಪ್ಪಿಕೊಂಡಿದ್ದೆ. ಆದರೇ ಆತ ನಂತರ ಫೋನ್ ಮಾಡಿ ಯಾರ ಜೊತೆ ಬರುತ್ತಿದ್ದೀರಾ ಎಂದು ಪ್ರಶ್ನಿಸಿದ್ದರು. ನಾನು ಡ್ರೈವರ್ ಜೊತೆಗೆ ಬರುತ್ತಿದ್ದೇನೆ ಎಂದು ಉತ್ತರಿಸಿದ್ದೆ. ಅದಕ್ಕೆ ಆತ ಅವರೆಲ್ಲಾ ಬರುವುದು ಬೇಡ. ಸುಮ್ಮನೆ ವದಂತಿ ಸೃಷ್ಟಿಸುತ್ತಾರೆ ಎಂದರು. ನಾನು ವಿರೋಧ ವ್ಯಕಪಡಿಸಿ ನಾನ್ಯಾಕೆ ಒಬ್ಬಳೆ ಬರಲಿ ಎಂದು ವಿಚಾರಿಸಿದ್ದೆ. ಆತ ಯಾಕೆ ಕರೆಯುತ್ತಿದ್ದಾನೆಂದು ನನಗೆ ಅವಾಗ ತಿಳಿಯಿತು. ಅದಕ್ಕೆ ನಾನೀಗ ಫ್ರೀ ಇಲ್ಲಾ, ಇನ್ನೊಮ್ಮೆ ಭೇಟಿಯಾಗೋಣ ಎಂದು ಪೋನ್ ಕಟ್ ಮಾಡಿದೆ.
ಕೂಡಲೇ ನಾನು ನಿರ್ಮಾಪಕರಿಗೆ ಕರೆ ಮಾಡಿ, ನಿಮಗೆ ಪ್ರತಿಭೆ ಮುಖ್ಯವೆಂದಾದರೆ ಮಾತ್ರ ನಾನಿಲ್ಲಿ ಇರುತ್ತೇನೆ. ನನ್ನಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದರೆ ನಾನು ಮಾಡಬಾರದ್ದನ್ನು ಮಾಡಲು ಸಿದ್ಧಳಿಲ್ಲ. ಒಂದು ಪಾತ್ರಕ್ಕಾಗಿ ಹೀಗೆಲ್ಲ ಇರಲು ಸಾಧ್ಯವೇ ಇಲ್ಲವೆಂದು ಹೇಳಿದೆ. ಕೆಲವು ನಟರಿಗೆ ಇದೇ ಮಾತನ್ನು ಹೇಳಿದ್ದೇನೆ. ಓರ್ವ ಮಹಿಳೆ ‘ಇಲ್ಲ’ ಎಂದು ಹೇಳಿದರೆ ಅದನ್ನು ಅವರು ಒಪ್ಪುವುದಿಲ್ಲ ಎಂದು ಇಶಾ ತಮಗಾದ ಅನುಭವಗಳನ್ನು ಬಿಚ್ಚಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.