ಬಸ್ ಸಂಚಾರ ಸ್ಥಗಿತ-ಪರದಾಟ
Team Udayavani, Nov 10, 2019, 4:17 PM IST
ಬಾದಾಮಿ: ಅಯ್ಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಬಾದಾಮಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿತ್ತು.
ಶಾಲಾ-ಕಾಲೇಜು ರಜೆ ಘೋಷಿಸಲಾಗಿತ್ತು. ಮಾರುಕಟ್ಟೆಯ ಅಂಗಡಿ-ಮುಂಗಟ್ಟು ಬಂದ್ ಆಗಿದ್ದರಿಂದ ಸಾರ್ವಜನಿಕರು ಮತ್ತು ವ್ಯಾಪಾರಿಗಳಿಲ್ಲದೇ ಶಾಂತ ವಾತಾವರಣ ನಿರ್ಮಾಣವಾಗಿತು. ಬೆಳಿಗ್ಗೆ ಪಿಎಸ್ಐ ಪ್ರಕಾಶ ಬಣಕಾರ ಹಾಗೂ ಪೊಲೀಸ್ ಸಿಬ್ಬಂದಿ ವಾಹನದ ಸಾರ್ವಜನಿಕರಿಕೆ ಎಚ್ಚರಿಕೆ ಮತ್ತು ಶಾಂತಿ ಕಾಪಾಡಲು ಮನವಿ ಮಾಡಿದ್ದರು. ಜತೆಗೆ ಬೀದಿ ವ್ಯಾಪಾರಿಗಳಿಗೂ ತಡೆ ಮಾಡುವ ಮೂಲಕ ಮುಖ್ಯ ರಸ್ತೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಂಡಿದ್ದರು.
ಜನತೆ ಪರದಾಟ: ತಾಲೂಕಿನ ವಿವಿಧ ಗ್ರಾಮಗಳಿಗೆ ಮತ್ತು ಬಾದಾಮಿ ನಗರಕ್ಕೆ ಆಗಮಿಸುವ ಮತ್ತು ತೆರಳುವ ಜನತೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವೆರೆಗೆ ಬಸ್ ಸಂಚಾರ ಸ್ಥಗಿತಗೊಂಡಿದ್ದ ಕಾರಣ ಪ್ರಯಾಣಿಕರು ಮಧ್ಯಾಹ್ನದವರೆಗೂ ಪರದಾಡಿದರು. ಕೆಲ ಖಾಸಗಿ ವಾಹನಗಳು ದಿನದ ದರಕ್ಕಿಂತ ಹೆಚ್ಚಿನ ದರದೊಂದಿಗೆ ಪ್ರಯಾಣಿಕರಿಗೆ ಸೇವೆ ನೀಡಿದರು. ಸ್ಥಳೀಯವಾಗಿ ಆಸ್ಪತ್ರೆಗಳಿಗೆ ತೆರಳುವವರು ಬಾಡಿಗೆ ವಾಹನಗಳ ಮೂಲಕ ಬಾಗಲಕೋಟೆ, ಗದಗ, ಹುಬ್ಬಳ್ಳಿ ನಗರಗಳಿಗೆ ಪ್ರಯಾಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.