ಸಮಸ್ಯೆಗಳ ಸುಳಿಯಲ್ಲಿ ಹೊಸ ಬಸ್ ನಿಲ್ದಾಣ
Team Udayavani, Nov 10, 2019, 6:12 PM IST
ಕನಕಪುರ: ಬಹುತೇಕ ಸೌಲಭ್ಯಗಳನ್ನು ಒಳಗೊಂಡಿದ್ದ ಹಳೆ ಬಸ್ ನಿಲ್ದಾಣವನ್ನು ತೆರವುಗೊಂಡು ಬಣ ಗೂಡುತ್ತಿದರೆ, ಪಕ್ಕದಲ್ಲಿ ನಿರ್ಮಾಣಗೊಂಡಿರುವ ಹೊಸ ಬಸ್ ನಿಲ್ದಾಣ ಸಮಸ್ಯೆಗಳ ಗೂಡಾಗಿದೆ.
ಈ ಹಿಂದೆ ಇದ್ದ ಬಸ್ ನಿಲ್ದಾಣವನ್ನು ತೆರವುಗೊಳಿಸಿ ಆ ಜಾಗದಲ್ಲಿ ಶಾಪಿಂಗ್ ಮಾಲ್ ಸಿನಿಮಾ ಥಿಯೇಟರ್ ಅಂಗಡಿ ಮಳಿಗೆಗಳು ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಯೋಜನೆ ರೂಪಿಸಿ ಹಳೆಯದರ ಪಕ್ಕದ ಹೊಸ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಮೈತ್ರಿ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ಹೈಟೆಕ್ ಮಾಲ್ ಯೋಜನೆಗೆ ಗ್ರಹಣ ಹಿಡಿದಿದೆ.
ಸೌಲಭ್ಯ ತೆರವು: ಹಳೆ ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಹೋಟೆಲ್ ಎಟಿಎಂ ದ್ವಿಚಕ್ರವಾಹನದ ನಿಲುಗಡೆ ನೀರಿನ ವ್ಯವಸ್ಥೆ ಮಹಿಳೆಯರ ವಿಶ್ರಾಂತಿ ಕೊಠಡಿ ಉಚಿತ ವೈಫೈ ಸೇವೆ ಸೇರಿದಂತೆ ಪೊಲೀಸ್ ಇಲಾಖೆಯಿಂದ ಕಾನೂನು ತಿಳುವಳಿಕೆ ನೀಡಲು ಮತ್ತು ಅಪರಾಧಗಳನ್ನು ತಡೆಗಟ್ಟುವ ದೃಷ್ಟಿಯಿಂದ ಎಲ್‌ಇಡಿ ಸ್ಕ್ರೀನ್ ಅಳವಡಿಸಲಾಗಿತ್ತು. ಈ ಎಲ್ಲಾ ಸೌಲಭ್ಯಗಳನ್ನು ತೆರವುಗೊಳಿಸಲಾಗಿದೆ.
ಹಳೆ ಬಸ್ ನಿಲ್ದಾಣದ ಪಕ್ಕದಲ್ಲೇ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿರುವ ಹೊಸ ಬಸ್ ನಿಲ್ದಾಣ ಸಾರ್ವಜನಿಕ ಸೌಲಭ್ಯಗಳಿಂದ ವಂಚಿತವಾಗಿದೆ. ಶುದ್ಧ ಕುಡಿಯುವ ನೀರು, ಮಹಿಳೆಯರ ವಿಶ್ರಾಂತಿ ಕೊಠಡಿ, ಹೋಟೆಲ್, ಎಟಿಎಂ, ಸಿಸಿಟಿವಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಸಾರಿಗೆ ಇಲಾಖೆ ನೀಗಿಸಿಲ್ಲ.
ಬೆಳಕೆಗೆ ಬಾರದ ಪ್ರಕರಣಗಳು: ಕೆಲ ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಗೆ ಯುವಕ ಬಸ್ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಘಟನೆಯನ್ನು ಸಹ ಯುವಕರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಅಳವಡಿಕೆ ಇಲ್ಲದಿರುವುದರಿಂದ ಇಂತಹ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಮೂತ್ರ ವಿಸರ್ಜನೆ ಉಚಿತವಾಗಿದ್ದು, ಮೂತ್ರ ವಿಸರ್ಜನೆ ಮಾಡಲು ಹೋದ ಮಹಿಳೆ 5 ರೂ ಕೊಡಲಿಲ್ಲ. ಎಂಬ ಕಾರಣಕ್ಕೆ ಮೂತ್ರ ವಿಸರ್ಜನೆಗೆ ಅವಕಾಶ ಕೊಡದೆ ಶೌಚಾಲಯದ ಗುತ್ತಿಗೆದಾರ ಹೊರದಬ್ಬಿದ ಘಟನೆಯು ನಡೆದಿದೆ.
ಹೆಸರಿಗೆ ಮಾತ್ರ ಸಹಾಯವಾಣಿ: ನಿಲ್ದಾಣದಲ್ಲಿ ಸಮಸ್ಯೆಗಳು ಕಂಡು ಬಂದಾಗ ಸಹಾಯವಾಣಿಗೆ ಕರೆ ಮಾಡಿ ಎಂದು ಬೊಬ್ಬೆ ಹೊಡೆಯುವ ಸಾರಿಗೆ ಇಲಾಖೆ ಈ ಸಂಬಂಧ ದೂರು ನೀಡಲು ಸಹಾಯವಾಣಿಗೆ ಕರೆ ಮಾಡಿದ ಮಹಿಳೆಗೆ ಸಾರಿಗೆ ಇಲಾಖೆ ಸಮಸ್ಯೆ ಬಗೆಹರಿಸುವುದು ಇರಲಿ ಕರೆಯನ್ನೇ ಸ್ವೀಕರಿಸುವ ಸೌಜನ್ಯವನ್ನೂ ತೋರಲಿಲ್ಲ. ಶೌಚಾಲಯ ನಿರ್ವಹಣೆಗೆ ಸ್ಥಳೀಯರಿಗೆ ಅವಕಾಶ ನೀಡಿದೆ ಸ್ಥಳೀಯ ಭಾಷೆ ತಿಳಿಯದ ಅನ್ಯ ಭಾಷಿಕರಿಗೆ ಗುತ್ತಿಗೆ ನೀಡಿ ಸಾರಿಗೆ ಇಲಾಖೆಗೆ ಸಾರ್ವಜನಿಕರ ಸಮಸ್ಯೆ ಗಳನ್ನು ಆಲಿಸುವ ಸೌಜನ್ಯವೂ ಇಲ್ಲದಂತಾಗಿದೆ.
ಬಸ್ ಕೊರತೆ: ಪ್ರಯಾಣಿಕರಿಗೆ ನಿಲ್ದಾಣದ ಸಮಸ್ಯೆಗಿಂತ ಬಸ್ಸಿನ ಸಮಸ್ಯೆ ಹೆಚ್ಚಾಗಿದ್ದು ಪ್ರತಿದಿನ ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳುವ ನೂರಾರು ಸಾರ್ವಜನಿಕರು ಎರಡು ತಾಸು ನಿಂತು ಪ್ರಯಾಣಿಸಲು ಆಗದೆ ಬಸ್ಸಿನ ಹಿಂದೆ ಓಡಿಹೋಗಿ ಸೀಟು ಹಿಡಿದುಕೊಳ್ಳುವು ಸಾಹಸ ಪಡಬೇಕು ಸರ್ಕಾರಿ ರಜಾ ದಿನಗಳು ಬಂದರಂತೂ ಪ್ರಯಾಣಿಕರ ಪಾಡು ಹೇಳತೀರದು ಬೆಂಗಳೂರಿಗೆ ಖಾಸಗಿ ಬಸ್‌ಗಳ ವ್ಯವಸ್ಥೆ ಇಲ್ಲದೆ ಅನ್ಯಮಾರ್ಗವಿಲ್ಲದೆ. ಪ್ರತಿನಿತ್ಯ ಕಾರ್ಯ ನಿಮಿತ್ತ ತೆರಳುವ ಪ್ರಯಾಣಿಕರು ಸಾರಿಗೆ ಇಲಾಖೆಯ ಬಸ್‌ಗಳನ್ನೇ ಅವಲಂಬಿಸಿದ್ಧಾರೆ. ಎಲ್ಲವನ್ನೂ ತಿಳಿದಿರುವ ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿದು ತಿಳಿಯದಂತೆ ವರ್ತಿಸುತ್ತಿರುವುದು ತಾಲೂಕಿ ನಲ್ಲಿ ಸಾರಿಗೆ ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಂತಿದೆ.
ಸುರಕ್ಷತೆ ಇಲ್ಲ: ಹಳೆ ಬಸ್ ನಿಲ್ದಾಣದಲ್ಲಿ ಇದ್ದ ಎಲ್ಲಾ ಸೌಲಭ್ಯಗಳನ್ನು ತೆರವುಗೊಳಿಸಲಾಗಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮಾತ್ರ ಸೀಮಿತವಾಗಿದ್ದ ಹಳೆ ಬಸ್ ನಿಲ್ದಾಣದಲ್ಲಿ ವಿದ್ಯುತ್ ದೀಪಗಳು ಕೆಟ್ಟು ನಿಂತಿದ್ದು, ರಾತ್ರಿ ವೇಳೆ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ. ಬೆಂಗಳೂರು ಮತ್ತು ಇತರೆ ಭಾಗ ಗಳಿಂದ ಬಂದು ತಮ್ಮ ಪೋಷಕರ ಬರುವಿಕೆಗಾಗಿ ಕಾದು ಕುಳಿತುಕೊಳ್ಳುವ ಮಹಿಳೆಯರು ವಿದ್ಯಾರ್ಥಿ ನಿಯರಿಗೆ ಹಳೆ ಬಸ್ ನಿಲ್ದಾಣದಲ್ಲಿ ಸುರಕ್ಷತೆ ಇಲ್ಲದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.