‘ನಮಗೆ ಜನಾದೇಶವಿಲ್ಲ ; ನಾವು ಸರಕಾರ ರಚಿಸುವುದಿಲ್ಲ, ಶಿವ ಸೇನೆಗೆ ಆಲ್ ದಿ ಬೆಸ್ಟ್’: ಬಿಜೆಪಿ
Team Udayavani, Nov 10, 2019, 6:47 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಕಗ್ಗಂಟು ಬಗೆಹರಿಯುವ ಲಕ್ಷಣ ಸದ್ಯಕ್ಕಂತೂ ಕಾಣಿಸುತ್ತಿಲ್ಲ. ರಾಜ್ಯದ ವಿಧಾನಸಭೆಯ ಅವಧಿ ಎರಡು ದಿನಗಳ ಹಿಂದೆಯೇ ಮುಕ್ತಾಯಗೊಂಡಿದ್ದರೂ, ಇದಕ್ಕೂ ಮೊದಲೇ ಚುನಾವಣಾ ಫಲಿತಾಂಶ ಹೊರಬಿದ್ದಿದ್ದರೂ ಇಲ್ಲಿ ನೂತನ ಸರಕಾರ ಅಸ್ತಿತ್ವಕ್ಕೇ ಬಂದಿಲ್ಲ.
ಈ ನಡುವೆ ರಾಜ್ಯಪಾಲರು ಶನಿವಾರದಂದು ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಅತೀದೊಡ್ಡ ಪಕ್ಷವಾಗಿ ಮೂಡಿಬಂದಿರುವ ಭಾರತೀಯ ಜನತಾ ಪಕ್ಷವನ್ನು ಸರಕಾರ ರಚನೆಗೆ ಆಹ್ವಾನಿಸಿದ್ದಾರೆ.
ರಾಜ್ಯಪಾಲರ ಆಹ್ವಾನಕ್ಕೆ ಉತ್ತರವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ, ‘ತನಗೆ ಸರಕಾರ ರಚನೆ ಮಾಡಲು ಅಗತ್ಯವಿರುವಷ್ಟು ಸಂಖ್ಯಾಬಲ ಇಲ್ಲದಿರುವುದರಿಂದ ನಾವು ಸರಕಾರ ರಚಿಸುವುದಿಲ್ಲ’ ಎಂದು ಘೋಷಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವ ಚಂದ್ರಕಾಂತ್ ಪಾಟೀಲ್ ಅವರು ಪಕ್ಷದ ಈ ನಿರ್ಧಾರವನ್ನು ಬಹಿರಂಗಪಡಿಸಿದರು. ‘ಮಹಾರಾಷ್ಟ್ರದ ಜನತೆ ಬಿಜೆಪಿ-ಶಿವಸೇನಾ ಮೈತ್ರಿಗೆ ತಮ್ಮ ತೀರ್ಪನ್ನು ನೀಡಿದ್ದಾರೆ. ಆದರೆ ಉದ್ಭವ್ ಠಾಕ್ರೆ ಅವರ ನೇತೃತ್ವದ ಆ ಪಕ್ಷ ಸರಕಾರ ರಚನೆಯಲ್ಲಿ ನಮಗೆ ಬೆಂಬಲ ನೀಡಲು ಸಿದ್ಧರಿಲ್ಲ’ ಎಂದು ಹೇಳಿದ್ದಾರೆ.
‘ನಮ್ಮ ಮೈತ್ರಿಗೆ ಉತ್ತಮ ಜನಾದೇಶ ನೀಡಿದ್ದರು, ನಾವು ಯಾವುದೇ ಸಮಸ್ಯೆ ಇಲ್ಲದೇ ಸರಕಾರವನ್ನು ರಚಿಸಬಹುದಾಗಿತ್ತು’ ಎಂದು ಪಾಟೀಲ್ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
‘ಮಹಾಯುತಿಗೆ ಜನಾದೇಶ ಸಿಕ್ಕಿದೆ. ಆದರೆ ಶಿವಸೇನೆ ನಮ್ಮನ್ನು ಬೆಂಬಲಿಸಲು ಒಪ್ಪುತ್ತಿಲ್ಲ. ಹಾಗಾಗಿ ನಾವು ರಾಜ್ಯದಲ್ಲಿ ನೂತನ ಸರಕಾರ ರಚಿಸುತ್ತಿಲ್ಲ ಎಂಬ ವಿಚಾರವನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ’ ಎಂದು ಚಂದ್ರಕಾಂತ್ ಪಾಟೀಲ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಶಿವಸೇನೆಯು ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಜೊತೆ ಸೇರಿಕೊಂಡು ಸರಕಾರ ರಚಿಸುವುದಾದರೆ ನಾವು ಅವರಿಗೆ ‘ಆಲ್ ದಿ ಬೆಸ್ಟ್’ ಹೇಳಲು ಇಚ್ಛಿಸುತ್ತೇವೆ ಎಂದು ಚಂದ್ರಕಾಂತ್ ಪಾಟೀಲ್ ಅವರು ಹೇಳಿದರು.
‘ಜನರು ನಮ್ಮ ಮೈತ್ರಿಗೆ ಜನಾದೇಶ ನೀಡಿದ್ದರು, ಆದರೆ ಶಿವಸೇನೆ ಈಗ ಅದನ್ನು ಧಿಕ್ಕರಿಸಿ ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಜೊತೆ ಸರಕಾರ ರಚಿಸುವುದಾದರೆ ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ನಾವು ಹೇಳಬಯಸುತ್ತೇವೆ’ ಎಂದು ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.