ಉಪ ಸಮರ ಶುರು: ಅತೃಪ್ತಿ, ಆತಂಕ

ಕಾಂಗ್ರೆಸ್‌ನಲ್ಲಿ ಅತೃಪ್ತಿ; ಬಿಜೆಪಿಯಲ್ಲಿ ಆತಂಕ ಅನರ್ಹತೆ: ಸುಪ್ರೀಂ ತೀರ್ಪು ನಿರ್ಣಾಯಕ

Team Udayavani, Nov 11, 2019, 6:15 AM IST

vidhana-soudha-750

ಬೆಂಗಳೂರು: ಅನರ್ಹಗೊಂಡ ಶಾಸಕರ ಪ್ರಕರಣ ಇನ್ನೂ ಸುಪ್ರೀಂ ಕೋರ್ಟಿನಲ್ಲಿರುವಂತೆಯೇ 15 ಕ್ಷೇತ್ರಗಳ ಉಪಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೂರೂ ಪಕ್ಷಗಳಲ್ಲಿ ತಳಮಳ ಶುರುವಾಗಿದೆ.

ಒಂದೆಡೆ ಬುಧವಾರ ಪ್ರಕಟವಾಗುವ ಸುಪ್ರೀಂ ಕೋರ್ಟ್‌ ತೀರ್ಪು ವ್ಯತಿರಿಕ್ತವಾಗಿ ಬಂದರೆ ಯಾರನ್ನು ಕಣಕ್ಕಿಳಿಸುವುದು ಎಂದು ಬಿಜೆಪಿ ಚಿಂತೆಗೀಡಾಗಿದೆ. ಮತ್ತೂಂದೆಡೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ಶರತ್‌ ಬಚ್ಚೇಗೌಡ ಪಕ್ಷೇತರರಾಗಿ ಕಣಕ್ಕಿಳಿಯುವ ಚಿಂತನೆಯಲ್ಲಿದ್ದರೆ, ರಾಜು ಕಾಗೆ ಹಾಗೂ ಅಶೋಕ್‌ ಪೂಜಾರಿ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳೆರಡಕ್ಕೂ ತಲೆನೋವಾಗಿ ಪರಿಣಮಿಸಿದೆ. ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿರುವ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಕಾಂಗ್ರೆಸ್‌ನಲ್ಲಿ ಅಸಮಾಧಾನ
ತರಾತುರಿಯಲ್ಲಿ ಅಭ್ಯರ್ಥಿ ಘೋಷಿಸಿರುವ ಬಗ್ಗೆ ರವಿವಾರ ನಡೆದ ಕಾಂಗ್ರೆಸ್‌ ನಾಯಕರ ಸಭೆಯಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಕೆ.ಆರ್‌. ಪುರ ಹಾಗೂ ಹೊಸಕೋಟೆ ಕ್ಷೇತ್ರದ ಅಭ್ಯರ್ಥಿಗಳನ್ನು ತರಾತುರಿಯಲ್ಲಿ ಘೋಷಿಸಿರುವುದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಡಿ.ಕೆ.ಶಿ. ಪ್ರವೇಶ
ಚುನಾವಣೆಗೆ ದಿನಗಣನೆ ಆರಂಭವಾಗಿರು ವಂತೆಯೇ, ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ ರಂಗ ಪ್ರವೇಶಿಸಿರುವುದು ವಿಶೇಷ. ಕಾಗವಾಡ‌ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ರಾಜು ಕಾಗೆ, ಗೋಕಾಕ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಅಶೋಕ್‌ ಪೂಜಾರಿ ರವಿವಾರ ಕಾಂಗ್ರೆಸ್‌ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಆದರೆ ಈ ಬಗ್ಗೆ ಪಕ್ಷದಲ್ಲಿ ಅಪಸ್ವರ ಕೇಳಿಬಂದಿದೆ ಎನ್ನಲಾಗಿದೆ.

ಬಿಜೆಪಿಗೆ ಅತೃಪ್ತಿ ಭೀತಿ
ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಹೊಸಕೋಟೆ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಶರತ್‌ ಬಚ್ಚೇಗೌಡ ಅವರು ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಶರತ್‌ ಬಚ್ಚೇಗೌಡ ಅವರ ಮನವೊಲಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಾಕಷ್ಟು ಪ್ರಯತ್ನ ನಡೆಸಿದರೂ ಫ‌ಲ ನೀಡಿದಂತಿಲ್ಲ. ಹಾಗಾಗಿ ಕ್ಷೇತ್ರದ ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಯಾದಂತಿದೆ. ಇನ್ನೊಂದೆಡೆ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ರಾಜು ಕಾಗೆ, ಅಶೋಕ್‌ ಪೂಜಾರಿ ಅವರು ಡಿ.ಕೆ.ಶಿ.ಭೇಟಿಯಾಗಿರುವುದು ಬಿಜೆಪಿ ನಾಯಕರಿಗೆ ತಲೆನೋವಾಗಿದೆ.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.