ಮಹಾಲಿಂಗಪುರ ರುದ್ರಭೂಮಿ ಅವ್ಯವಸ್ಥೆ ಆಗರ
Team Udayavani, Nov 11, 2019, 12:32 PM IST
ಮಹಾಲಿಂಗಪುರ: ಅಸಮರ್ಪಕ ನಿರ್ವಹಣೆಯಿಂದ ಪಟ್ಟಣದ ಹಿಂದೂ ಸಮಾಜದ ರುದ್ರಭೂಮಿ ಅವ್ಯವಸ್ಥೆ ಆಗರವಾಗಿದ್ದು, ಬಯಲು ಶೌಚಾಲಯವಾಗಿ ಮಾರ್ಪಟ್ಟಿದೆ.
ಅವ್ಯವಸ್ಥೆಗಳ ಆಗರ: ಹಿಂದೂ ರುದ್ರಭೂಮಿ ಅವ್ಯವಸ್ಥೆಗಳ ಆಗರವಾಗಿದೆ. ಸ್ಮಶಾನಕ್ಕೆ ಸೂಕ್ತ ಕಾಂಪೌಂಡ್, ನೀರಿನ ವ್ಯವಸ್ಥೆ, ವಿದ್ಯುತ್ ದ್ವೀಪಗಳಿಲ್ಲ. ಒಂದೇ ಚಿತಾಗಾರ ಇರುವುದರಿಂದ ಶವ ಸಂಸ್ಕಾರಕ್ಕೆ ಬಂದವರು ಕುಳಿತುಕೊಳ್ಳಲು ನಿರ್ಮಿಸಿದ್ದ ಶೆಡ್ಡು ಹಾಳಾಗಿದೆ. ಕಸಕಡ್ಡಿ, ಮುಳ್ಳಿನ ಕಂಟಿಗಳು ಬೆಳೆದಿವೆ. ಸ್ಮಶಾನ ಗೇಟ್‌ನಿಂದ ಚಿತಾಗಾರಕ್ಕೆ ಹೋಗುವ ದಾರಿಯನ್ನೇ ಸಾರ್ವಜನಿಕರು ಬಯಲು ಶೌಚಾಲಯವನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸ್ಮಶಾನದೊಳಗೆ ಹೋಗಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದಲ್ಲಿನ ಅಸಮರ್ಪಕ ಚರಂಡಿಯಿಂದಾಗಿ ಕೊಳಚೆ ನೀರು ಸಹ ಸ್ಮಶಾನದೊಳಗೆ ಶೇಖರಣೆಯಾಗುತ್ತಿದೆ. ಸ್ಮಶಾನ ತ್ಯಾಜ್ಯ ಘಟಕವೋ? ಸಂಪೂರ್ಣ ಬಯಲು ಶೌಚಾಲಯವೋ ? ಎನ್ನುವಷ್ಟರ ಮಟ್ಟಿಗೆ ಹದಗೆಟ್ಟಿದೆ.
ಸಂಸ್ಕಾರಕ್ಕೆ ಬಂದಾಗ ಮಾತ್ರ ಅಭಿವೃದ್ಧಿ ಚಿಂತೆ: ಪ್ರತಿ ಬಾರಿಯು ಶವಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಬಂದಾಗ ಮಾತ್ರ ಅಭಿವೃದ್ಧಿ ಚಿಂತನೆ-ಚರ್ಚೆ ನಡೆಯುತ್ತದೆ. ಸ್ಮಶಾನದಿಂದ ಹೊರಬಂದು ಮತ್ತೇ ತಮ್ಮ ತಮ್ಮ ಕಾಯಕಗಳಲ್ಲಿ ನಿರತರಾಗಿ, ಸ್ಮಶಾನದ ಅಭಿವೃದ್ಧಿಯನ್ನೇ ಮರೆಯುತ್ತಿದ್ದಾರೆ.
ಸಂಘ-ಸಂಸ್ಥೆಗಳಿಂದ ಸ್ವಚ್ಛತೆ: ಕಳೆದ ಹಲವಾರು ವರ್ಷಗಳಿಂದ ಪಟ್ಟಣದಲ್ಲಿನ ಹಿಂದೂಪರ ವಿವಿಧ ಸಂಘಟನೆ-ಸಂಸ್ಥೆಗಳ ಪದಾ ಧಿಕಾರಿಗಳು ಹಿಂದೂ ರುದ್ರಭೂಮಿಯಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಂಡಿದ್ದಾರೆ. ಆದರೆ, ಸ್ವಚ್ಛತೆ ಮತ್ತು ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಪುರಸಭೆ ನಿರ್ಲಕ್ಷ್ಯ ವಹಿಸಿದೆ.
ಒಗ್ಗಟ್ಟಿನ ಕೊರತೆ: ರುದ್ರಭೂಮಿಯ ಕಾಯಕಲ್ಪ ಮತ್ತು ಅಭಿವೃದ್ಧಿ ವಿಷಯದಲ್ಲಿಹಿಂದೂ ಸಮಾಜದಲ್ಲಿ ಒಗ್ಗಟ್ಟಿನ ಕೊರತೆ ಹಾಗೂ ನಿರಾಸಕ್ತಿಯೇ ಅವ್ಯವಸ್ಥೆಗೆ ಮೂಲ ಕಾರಣವಾಗಿದೆ. ಹಿಂದೂ ಸ್ಮಶಾನ ಅಭಿವೃದ್ಧಿ ಸಮಿತಿ ಸ್ಮಶಾನದಲ್ಲಿ ಶಿವರಾತ್ರಿ ಕಾರ್ಯಕ್ರಮ, ಪುರಸಭೆಗೆ ಮನವಿ ಸಲ್ಲಿಕೆಗೆ ಮಾತ್ರ ಸೀಮಿತವಾಗಿದೆ ಎಂಬಂತೆ ತೋರುತ್ತಿದೆ.
ಸ್ಮಶಾನ ಅಭಿವೃದ್ಧಿಗೆ ಕ್ರಿಯಾಯೋಜನೆ ಈ ವರ್ಷ ಸತತ ಮಳೆಯ ಪರಿಣಾಮ ಸ್ಮಶಾನದಲ್ಲಿ ಕಸ-ಗಿಡಗಂಟಿ ಬೆಳೆದಿದೆ. ಕಸವನ್ನು ಸ್ವತ್ಛತೆ ಮಾಡುತ್ತೇವೆ. ಜೊತೆಗೆ ಸ್ಮಶಾನದ ಕಾಂಪೌಂಡ್, ಗರಸು ಹಾಕಲು, ಇನ್ನೊಂದು ಚಿತಾಗಾರ, ಒಂದು ಶೆಡ್ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ವಿಶೇಷ ಅನುದಾನದಲ್ಲಿ ಒಂದು ಕೋಟಿ ರೂ ವೆಚ್ಚದ ಕಾಮಗಾರಿಗೆ ಕ್ರಿಯಾಯೋಜನೆ ಮತ್ತು ಅಂದಾಜು ಪತ್ರಿಕೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸುತ್ತಿದ್ದೇವೆ. ಜತೆಗೆ ಪುರಸಭೆ ಅನುದಾನದಲ್ಲಿ ಸ್ಮಶಾನದಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ 10 ಲಕ್ಷ ರೂ.ಕ್ರಿಯಾಯೋಜನೆಯಲ್ಲಿ ಸೇರಿಸಿದ್ದೇವೆ. –ಬಾಬುರಾವ್ ಕಮತಗಿ, ಮುಖ್ಯಾಧಿಕಾರಿಗಳು, ಪುರಸಭೆ
-ಚಂದ್ರಶೇಖರ ಮೋರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.