ತಂಬಾಕಿಗೆ ಯೋಗ್ಯ ಬೆಲೆ ನೀಡದಿದ್ದರೆ ಅಹೋರಾತ್ರಿ ಧರಣಿ

Team Udayavani, Nov 12, 2019, 3:00 AM IST

tambakige

ಹುಣಸೂರು: ಈ ಭಾಗದ ಪ್ರಮುಖ ವಾಣಿಜ್ಯ ಬೆಳೆ ತಂಬಾಕಿನ ಬೆಲೆ ದಿನೇ ದಿನೆ ಕುಸಿಯುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಸರ್ಕಾರ ಇನ್ನು 15 ದಿನದೊಳಗೆ ಕೇಂದ್ರ ವಾಣಿಜ್ಯ ಮಂತ್ರಿಗಳನ್ನು ಇಲ್ಲಿಗೆ ಕರೆತಂದು ಉತ್ತಮ ಬೆಲೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ವಹಿಸದಿದ್ದರೆ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸತ್ಯ ಫೌಂಡೇಷನ್‌ ಅಧ್ಯಕ್ಷ ಸತ್ಯಪ್ಪ ಎಚ್ಚರಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಎಚ್‌.ಡಿ.ಕೋಟೆ, ಕೆ.ಆರ್‌. ನಗರ, ಹಾಸನ ಜಿಲ್ಲೆಯ ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕುಗಳಲ್ಲಿ 85 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ತಂಬಾಕು ಬೆಳೆಯಲಾಗುತ್ತಿದೆ. ಈ ಭಾಗದಲ್ಲಿ ತಂಬಾಕು ಬೆಳೆಯೇ ಪ್ರಮುಖವಾಗಿದ್ದು, ಸುಮಾರು 56 ಸಾವಿರ ಲೈಸೆನ್ಸ್‌ದಾರು, 36 ಸಾವಿರ ಅನಧಿಕೃತ ಬೆಳೆಗಾರರು ಇದ್ದಾರೆ.

ಈ ಕುಟುಂಬಗಳು ತಂಬಾಕು ಬೆಳೆಯನ್ನೇ ಅವಲಂಬಿಸಿದ್ದು, ಪ್ರತಿವರ್ಷ ಉತ್ಪಾದನಾ ವೆಚ್ಚ ಹೆಚ್ಚುತ್ತಲೇ ಇದೆ. ಬೆಲೆ ಮಾತ್ರ ಏರಿಳಿಕೆಯಾಗುತ್ತಿದೆ. ಮೈಸೂರು ಭಾಗದ ತಂಬಾಕಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆ ಇದೆ. ಆದರೆ ಬೆಲೆ ಮಾತ್ರ ಹೆಚ್ಚುತ್ತಿಲ್ಲ, ಮಾರುಕಟ್ಟೆಯಲ್ಲಿ ದರ ಸಿಗದೆ ಬೆಳೆಗಾರರು ಕಂಗಾಲಾಗಿದ್ದಾರೆಂದು ತಿಳಿಸಿದರು.

ಸ್ಪಂದಿಸದ ಸಂಸದ: ಕಳೆದ ಲೋಕಸಭಾ ಚುನಾವಣೆ ವೇಳೆ ಎಲ್ಲಾ ಬೆಳೆಗಾರರಿಗೆ ಲೈಸೆನ್ಸ್‌ ಕೊಡಿಸುವ ಹಾಗೂ ಉತ್ತಮ ಬೆಲೆ ಕೊಡಿಸುವುದಾಗಿ ಹಾಗೂ ವಿದೇಶಿ ಕಂಪನಿಗಳ ನೇರ ಖರೀದಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದ ಸಂಸದ ಪ್ರತಾಪ್‌ ಸಿಂಹ, ತಂಬಾಕು ಬೆಲೆ ಕುಸಿದಿದ್ದರೂ ಹರಾಜು ಮಾರುಕಟ್ಟೆಗಳಿಗೆ ಭೇಟಿ ನೀಡಿ ರೈತರಿಗೆ ಕನಿಷ್ಠ ಸ್ಪಂದನೆ ತೋರಿಲ್ಲ. ಇದಕ್ಕೂ ತಮಗೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿದರು.

ಸರಾಸರಿ 200 ರೂ. ಬೆಲೆ ಕಲ್ಲಿಸಿ: ಇಡೀ ಕುಟುಂಬದ ಮಂದಿ ದುಡಿದು ಬೆಳೆಯುವ ತಂಬಾಕಿಗೆ ಸರಾಸರಿ ಕೆ.ಜಿ.ಗೆ 200 ರೂ. ಸಿಕ್ಕರೆ ಹಾಗೂ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಕಂಪನಿಗಳವರು ಹರಾಜಿನಲ್ಲಿ ಭಾಗವಹಿಸಿದರೆ ಮಾತ್ರ ಬೆಳೆಗಾರರು ಸಂಕಷ್ಟದಿಂದ ಪಾರಾಗಬಹುದು. ಹುಣಸೂರು ಕ್ಷೇತ್ರದಲ್ಲಿ ಸುಮಾರು 50 ಸಾವಿರ ತಂಬಾಕು ಬೆಳೆಗಾರರ ಕುಟುಂಬವಿದ್ದು,

ಇಲ್ಲಿಗೆ ವಾಣಿಜ್ಯ ಮಂತ್ರಿಗಳನ್ನು ಕರೆ ತಂದು ಉತ್ತಮ ಬೆಲೆ ಕೊಡಿಸುವ ಹಾಗೂ ಭರವಸೆಯಂತೆ ಕಾರ್ಡ್‌ ದಾರರಿಗೆ ಲೈಸೆನ್ಸ್‌ ಕೊಡಿಸದಿದ್ದಲ್ಲಿ ಫೌಂಡೇಷನ್‌ ಬೆಳೆಗಾರರೊಂದಿಗೆ ಸೇರಿ ಆಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಗೋಷ್ಟಿಯಲ್ಲಿ ರಾಕೇಶ್‌ರಾವ್‌, ಬೆಳೆಗಾರರಾದ ಗೋವಿಂದೇಗೌಡ, ಅರವಿಂದ್‌ ಕುಮಾರ್‌, ಸ್ವಾಮಿಗೌಡ, ಯೋಗೇಂದ್ರ ಇತರರಿದ್ದರು.

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.