ರಾಷ್ಟ್ರೀಯ ಹೆದ್ದಾರಿಯ ಬದಿ ಚರಂಡಿ ಅವ್ಯವಸ್ಥೆ
Team Udayavani, Nov 12, 2019, 3:00 AM IST
ಅರಸೀಕೆರೆ: ನಗರದ ಮಧ್ಯಭಾಗ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬಿ.ಎಚ್.ರಸ್ತೆ ಅಗಲೀಕರಣದ ವೇಳೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ವೈಜ್ಞಾನಿಕವಾಗಿ ರಸ್ತೆಯ ಎರಡು ಬದಿ ಚರಂಡಿಗಳನ್ನು ನಿರ್ಮಿಸಿದ ಪರಿಣಾಮ ಪೌರ ಕಾರ್ಮಿಕರು ಪ್ರತಿನಿತ್ಯ ಶ್ರಮದಾನ ಮಾಡುವಂತಾಗಿದೆ.
ನಗರದ ಮಧ್ಯಭಾಗದ ವ್ಯಾಪ್ತಿಯಲ್ಲಿ 3.5 ಕಿ.ಮೀ. ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬಿ.ಎಚ್.ರಸ್ತೆಯನ್ನು ಕಳೆದ ದಶಕಗಳ ಹಿಂದೆ ಚತುಷ್ಪಥ ರಸ್ತೆಯನ್ನಾಗಿ ವಿಸ್ತರಿಸಲು ಮುಂದಾದ ರಾಷ್ಟ್ರೀಯ ಹೆದ್ದಾರಿ ಇಲಾಖೆ ರಸ್ತೆ ಅಭಿವೃದ್ಧಿಗೆ ನೀಡಿದ ಪ್ರಾಮುಖ್ಯತೆಯನ್ನು ರಸ್ತೆ ಎರಡೂ ಬದಿ ಚರಂಡಿಗಳ ನಿರ್ಮಾಣಕ್ಕೆ ತೋರದ ಪರಿಣಾಮ ಈ ಚರಂಡಿಗಳಲ್ಲಿ ಮಳೆಯ ನೀರು ಸರಾಗವಾಗಿ ಮುಂದೆ ಸಾಗದೇ ಕಸಕಡ್ಡಿಗಳ ತ್ಯಾಜ್ಯಗಳು ಚರಂಡಿಯಲ್ಲಿ ಸಂಗ್ರಹಣೆ ಗೊಂಡು ಅವ್ಯವಸ್ಥೆಯ ಆಗರವಾಗಿ ಸಾರ್ವಜನಿಕರಿಗೆ ಅಲ್ಲದೇ ನಗರಸಭೆ ಆಡಳಿತಕ್ಕೂ ಭಾರೀ ತಲೆನೋವಾಗಿ ಪರಿಣಮಿಸಿದೆ.
ಸೆಂಟ್ರಿಂಗ್ ಶೀಟ್ ತೆರವುಗೊಳಿಸಿಲ್ಲ: ರಸ್ತೆಯ ಎರಡೂ ಬದಿಯ ಚರಂಡಿಗಳ ಮೇಲೆ ಕಾಂಕ್ರಿಟ್ ಹಾಸು ಹಾಕಿ ಪಾದಚಾರಿಗಳು ಸಂಚರಿಸಲು ಅನುವು ಮಾಡಿಕೊಡಬೇಕೆಂಬ ಉದ್ದೇಶದಿಂದ ಚರಂಡಿಯ ಉದ್ದಕ್ಕೂ ಕಾಂಕ್ರೀಟ್ ಹಾಸುಗಳನ್ನ ಹಾಕುವ ವೇಳೆ ಒಳಭಾಗದಲ್ಲಿ ಕೊಡುವ ಸೆಟ್ರಿಂಗ್ ಶೀಟ್‌ಗಳನ್ನು ಕಾಮಗಾರಿ ಪೂರ್ಣಗೊಂಡ ಬಳಿಕ ಗುತ್ತಿಗೆದಾರರು ತೆರವು ಗೊಳಿಸದೇ ಇರುವುದರಿಂದ ಚರಂಡಿಯಲ್ಲಿ ನೀರು ಸರಾಗವಾಗಿ ಸಾಗದೇ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ.
ನಗರಸಭೆ- ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ: ಚರಂಡಿಗಳ ನಿರ್ವಹಣೆಗಳ ಜವಾಬ್ದಾರಿ ನಗರಸಭೆ ಆಡಳಿತಕ್ಕೆ ಒಳಪಟ್ಟಿದ್ದು, ಪೌರ ಕಾರ್ಮಿಕರು ತಮ್ಮ ಸೇವಾ ಅವಧಿಯ ಬಹುತೇಕ ಸಮಯವನ್ನು ಚರಂಡಿಗಳ ಹೂಳು ತೆಗೆಯುವುದರಲ್ಲೇ ಕಳೆಯುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ನಗರಸಭೆ ಆಡಳಿವಾಗಲೀ ಅಥವಾ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಾಗಲಿ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಸಾರ್ವಜನಿಕರ ಅಸಮಾಧಾನ ಹಾಗೂ ಪೌರಕಾರ್ಮಿಕರ ಶ್ರಮದಾನಕ್ಕೆ ಬೆಲೆ ಸಿಗದಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಚರಂಡಿಗಳ ಸಮಸ್ಯೆಗಳಿಗೆ ಇತಿಶ್ರೀ ಹಾಡಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಬದಿಗಳ ಚರಂಡಿಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಪೌರಕಾರ್ಮಿಕರು ನಿರಂತರವಾಗಿ ತೆರವುಗೊಳಿಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಲಾಗುವುದು.
-ಕಾಂತರಾಜ್, ಪೌರಾಯುಕ್ತ
ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿಗಳು ಸಮರ್ಪಕ ನಿರ್ವಹಣೆ ಇಲ್ಲದೇ ಕೊಳಚೆ ನೀರುಗಳ ಸಂಗ್ರಹ ತಾಣವಾಗಿದೆ. ಅಲ್ಲದೇ ಈ ಕಲುಷಿತ ನೀರಿನ ದುರ್ವಾಸನೆಯಿಂದ ಹೆದ್ದಾರಿಯಲ್ಲಿ ಸಂಚರಿಸುವ ಜನರು ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯ ವಾಗಿದೆ.
-ಜಗದೀಶ್ ನಗರದ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.