ಹಣ ಮಾಡಲು ಶ್ರೀಮಂತರಿಗೆ ಬೆದರಿಕೆ ಪತ್ರ

Team Udayavani, Nov 12, 2019, 3:06 AM IST

hana-madalu

ಬೆಂಗಳೂರು: ಯು ಟ್ಯೂಬ್‌ ಹಾಗೂ ಖಾಸಗಿ ವಾಹಿನಿಗಳಲ್ಲಿ ಬರುವ ಕ್ರೈಂ ಕಾರ್ಯಕ್ರಮಗಳಿಂದ ಪ್ರಭಾವಿತನಾಗಿ ಹಣವಂತರ ಮನೆಗಳಿಗೆ ಬಾಂಬ್‌ ಬೆದರಿಕೆ ಪತ್ರಗಳನ್ನು ರವಾನಿಸಿ ವಸೂಲಿಗೆ ಮುಂದಾಗಿದ್ದ ಸ್ನಾತಕೋತ್ತರ ಪದವಿಧರನೊಬ್ಬ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರ ಅತಿಥಿಯಾಗಿದ್ದಾನೆ. ಆಂಧ್ರಪ್ರದೇಶ ಮೂಲದ ದೇವೇಂದ್ರ ಕುಮಾರ್‌ (24) ಬಂಧಿತ. ಕಿರಣ್‌ ಮತ್ತು ನಿವೃತ್ತಿ ಉದ್ಯೋಗಿ ಈಶ್ವರ್‌ ಭಟ್‌ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆಂಧ್ರದ ಖಾಸಗಿ ಕಾಲೇಜಿನಲ್ಲಿ ಎಂಸಿಎ ಸ್ನಾತಕೋತ್ತರ ಪದವಿ ಪಡೆದಿರುವ ಆರೋಪಿ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ. ನಾನಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಕೆಲಸ ಸಿಕ್ಕಿರಲಿಲ್ಲ. ಕೊನೆಗೆ ಹೆಬ್ಟಾಳದಲ್ಲಿರುವ ಕಾಲ್‌ಸೆಂಟರ್‌ವೊಂದರಲ್ಲಿ 10 ಸಾವಿರ ರೂ. ಸಂಬಳಕ್ಕೆ ಸೇರಿದ್ದ. ಆದರೆ, ತನ್ನ ಓದಿಗೆ ತಕ್ಕಂತೆ ಕೆಲಸಕ್ಕೆ ಸಿಗದಕ್ಕೆ ಬೇಸರಗೊಂಡಿದ್ದ ಆರೋಪಿ, ಬರುವ ಹಣದಲ್ಲಿ ಪೋಷಕರನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ನೊಂದಿದ್ದ.

ಈ ಮಧ್ಯೆ ಕೆಲಸ ತೊರೆದು ಊರಿಗೆ ಹೋಗಿದ್ದ ದೇವೇಂದ್ರ, ಕೆಲ ದಿನಗಳ ಬಳಿಕ ಮತ್ತೆ ಬೆಂಗಳೂರಿಗೆ ಬಂದು ಕಾರು ಖರೀದಿ ಮಾಡಿ ಊಬರ್‌ ಸಂಸ್ಥೆ ಜತೆ ಒಪ್ಪಂದ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಈ ಕೆಲಸದಲ್ಲೂ ತೃಪ್ತಿಕಾಣದ ಆರೋಪಿ, ಹೊಸ ರೀತಿಯಲ್ಲಿ ಹಣ ಸಂಪಾದಿಸಲು ಮುಂದಾಗಿದ್ದ ಎಂದು ಪೊಲೀಸರು ಹೇಳಿದರು.

ಅಪರಾಧ ಕಾರ್ಯಕ್ರಮಗಳ ವೀಕ್ಷಣೆ: ಯುಟ್ಯೂಬ್‌ ನೋಡುವ ಹವ್ಯಾಸ ಹೊಂದಿದ್ದ ದೇವೇಂದ್ರ, ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿ ನಡೆದ ಅಪರಾಧ ಪ್ರಕರಣವನ್ನು ಯುಟ್ಯೂಬ್‌ ನೋಡಿದ್ದ. ಆರೋಪಿಯೊಬ್ಬ ಶ್ರೀಮಂತರ ಮನೆಗಳನ್ನು ಗುರುತಿಸಿ ಅಂತಹವರ ಮನೆ ಮುಂದೆ ಬೆದರಿಕೆ ಪತ್ರ ಎಸೆಯುತ್ತಿದ್ದ. ಆ ಪತ್ರದಲ್ಲಿ ನಾನು ಕೇಳಿದಷ್ಟು ಹಣ ನೀಡದಿದ್ದರೆ, ಮನೆಗೆ ಬಾಂಬ್‌ ಹಾಕುವುದಾಗಿ ಬೆದರಿಸುತ್ತಿದ್ದ.

ಆತಂಕಗೊಂಡ ಶ್ರೀಮಂತರು ಆರೋಪಿ ನೀಡಿದ್ದ ಇ-ಮೇಲ್‌ ವಿಳಾಸದ ಮೂಲಕ ಆರೋಪಿಯನ್ನು ಸಂಪರ್ಕ ಮಾಡಿ, ಆರೋಪಿ ಕೊಟ್ಟ ಖಾತೆಗೆ ಹಣ ಜಮೆ ಮಾಡುತ್ತಿದ್ದರು. ಈ ಸ್ಟೋರಿಯಿಂದ ಪ್ರಭಾವಿತನಾದ ಆರೋಪಿ, ನ 1ರಂದು ಬೆಳಗ್ಗೆ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಈಶ್ವರ್‌ ಭಟ್‌ ಹಾಗೂ ಕಿರಣ್‌ ಅವರ ಮನೆಗಳ ಆವರಣದೊಳಗೆ ನಾಲ್ಕು ಪುಟಗಳ ಪತ್ರಗಳನ್ನು ಎಸೆದು ಹೋಗಿದ್ದ. ಅದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಮನೆ ಮಾಲೀಕರಿಗೆ ನೀಡಿದ್ದರು.

ಮಧ್ಯಾಹ್ನ 12.30ರೊಳಗಾಗಿ ಐದು ಲಕ್ಷ ರೂ. ನೀಡದಿದ್ದರೆ, ನಿಮ್ಮ ಮನೆಯಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಕೂಡಲೇ ಈಶ್ವರ್‌ಭಟ್‌ ಮತ್ತು ಕಿರಣ್‌ ಪೊಲೀಸರಿಗೆ ವಿಷಯ ತಿಳಿಸಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ದೂರುದಾರರ ಸೋಗಿನಲ್ಲಿ ಈ ಮೇಲ್‌ ಮೂಲಕ ಆರೋಪಿಗೆ ಹಣ ನೀಡುವುದಾಗಿ ಸಂದೇಶ ಕಳುಹಿಸಿದ್ದರು. ಬಳಿಕ ಆರೋಪಿ ಕೊಟ್ಟ ಬ್ಯಾಂಕ್‌ ಖಾತೆಯ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.