ಚುನಾವಣಾ ಪ್ರಚಾರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷಿದ್ಧ : ಎನ್‌ಜಿಟಿ
Team Udayavani, Nov 12, 2019, 12:41 AM IST
ಹೊಸದಿಲ್ಲಿ: ಚುನಾವಣೆಯ ಸಮಯದಲ್ಲಿ ಪ್ಲಾಸ್ಟಿಕ್ ವಸ್ತುಗಳು ಅದರಲ್ಲೂ ವಿಶೇಷವಾಗಿ ಪ್ಲಾಸ್ಟಿಕ್ ಬ್ಯಾನರ್‌ಗಳು ಮತ್ತು ಪ್ರಚಾರ ಫಲಕಗಳ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ ಮತ್ತು ಅರಣ್ಯ ಸಚಿವಾಲಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಎನ್‌ಜಿಟಿ ಸಂಸ್ಥೆ ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಕ್ಕೆ ಈ ಕುರಿತು ಮಾಹಿತಿ ಕಳುಹಿಸಿದ್ದು, ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ, ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಪ್ರಚಾರಕ್ಕೆ ಪ್ಲಾಸ್ಟಿಕ್‌ನ ಬದಲು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳುವಂತೆ ಸೂಚನೆ ನೀಡಬೇಕೆಂದು ತಿಳಿಸಿದೆ.
ಎನ್.ಜಿ.ಟಿ.ಯ ಆದೇಶಕ್ಕೆ ಸಮ್ಮತಿ ಸೂಚಿಸಿರುವ ಸಚಿವಾಲಯ ಭಾರತದ ಚುನಾವಣಾ ಆಯೋಗ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಡಾಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಪ್ರಚಾರದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಿರ್ದೇಶನ ನೀಡಿದೆ.
ಪ್ಲಾಸ್ಟಿಕ್ ಬದಲಾಗಿ ಕಾಂಪೋಸ್ಟೇಬಲ್ ಪ್ಲಾಸ್ಟಿಕ್, ನೈಸರ್ಗಿಕ ಬಟ್ಟೆಗಳು, ಮರುಬಳಕೆ ಮಾಡಬಹುದಾದ ಕಾಗದ ಪತ್ರಗಳು ಮತ್ತು ಇತರ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಎನ್‌ಜಿಟಿ ಆದೇಶ ಹೊರಡಿಸಿದೆ ಎಂದು ಪರಿಸರ ಮತ್ತು ಅರಣ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.