ನೇಪಾಳದ ನೂರಾರು ಹೆಕ್ಟೇರ್ ಪ್ರದೇಶ ಅತಿಕ್ರಮಣ; ಚೀನಾ ವಿರುದ್ಧ ಆಕ್ರೋಶ, ಪ್ರತಿಭಟನೆ
Team Udayavani, Nov 12, 2019, 12:56 PM IST
ಕಾಠ್ಮಂಡು: ನೇಪಾಳದ ಚುಂಕ್ ಪ್ರದೇಶವನ್ನು ಅತಿಕ್ರಮಣ ಮಾಡಿರುವ ಚೀನಾದ ವಿರುದ್ಧ ನೇಪಾಳ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದೆ.
ನೇಪಾಳದ ಸಪ್ತಾರಿ, ಬಾರ್ಡಿಯಾ, ಕಪಿಲವಸ್ತು ಜಿಲ್ಲೆಗಳಲ್ಲಿ ಸೋಮವಾರದಿಂದ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಚೀನಾದ ವಿರುದ್ಧ ಘೋಷಣೆ ಕೂಗುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪ್ರತಿಭಟನಾಕಾರರು ಬ್ಯಾನರ್ ಹಿಡಿದು ಗೋ ಬ್ಯಾಕ್ ಚೀನಾ, ನಮ್ಮ ಭೂಮಿಯನ್ನು ವಾಪಸ್ ಕೊಡಿ ಎಂದು ಪ್ರತಿಭಟಿಸುತ್ತಿದ್ದಾರೆ. ಚೀನಾದ ವಿರುದ್ಧ ಪ್ರತಿಭಟನೆ ತೀವ್ರವಾಗುತ್ತಿರುವುದಾಗಿ ವರದಿ ವಿವರಿಸಿದೆ.
ಚೀನಾದ ದುರಾಸೆ ಬಯಲಾಗಿದ್ದು ಹೇಗೆ?
ಇತ್ತೀಚೆಗೆ ಚೀನಾದ ಸರ್ವೇ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ, ಚೀನಾ ನೇಪಾಳದ 36 ಹೆಕ್ಟೇರ್ ಪ್ರದೇಶವನ್ನು ಅತಿಕ್ರಮಣ ಮಾಡಿಕೊಂಡಿರುವುದು ಬೆಳಕಿಗೆ ಬಂದ ನಂತರ ಪ್ರತಿಭಟನೆ ಆರಂಭವಾಗಿತ್ತು.
ಹುಮ್ಲಾ ಜಿಲ್ಲೆಯ ಭಾಗ್ದಾರೆ ನದಿ ಪ್ರದೇಶದ ಆರು ಹೆಕ್ಟೇರ್ ಪ್ರದೇಶ ಹಾಗೂ ಕರ್ನಾಲಿ ಜಿಲ್ಲೆಯಲ್ಲಿ ನಾಲ್ಕು ಹೆಕ್ಟೇರ್ ಪ್ರದೇಶವನ್ನು ಚೀನಾ ಅತಿಕ್ರಮಣ ಮಾಡಿಕೊಂಡಿದೆ ಇದು ಟಿಬೆಟ್ ನ ಫುರಾಂಗ್ ಪ್ರದೇಶಕ್ಕೆ ಸೇರಿದೆ ಎಂದು ಸರ್ವೆಯಲ್ಲಿದೆ. ಅದೇ ರೀತಿ ಸನ್ಜೆನ್ ಸರೋವರ ಪ್ರದೇಶದ ಮತ್ತು ರಾಸುವಾದ ಜಂಭು ಖೋಲಾದಲ್ಲಿ ಆರು ಹೆಕ್ಟೇರ್ ಇದು ದಕ್ಷಿಣ ಟಿಬೆಟ್ ನ ಕೇರುಂಗ್ ಪ್ರದೇಶಕ್ಕೆ ಸೇರಿರುವುದಾಗಿ ಹೇಳಿದೆ.
ಅಲ್ಲದೇ ಸಿಂಧುಪಾಲ್ ಚೌಕ್ ಜಿಲ್ಲೆಯ ಭೋಟೆಕೋಶಿ ಮತ್ತು ಖಾರಾನೆಖೋಲಾ ಪ್ರದೇಶದಲ್ಲಿ ಚೀನಾ ಹತ್ತು ಹೆಕ್ಟೇರ್ ಗಿಂತಲೂ ಹೆಚ್ಚು ಜಾಗವನ್ನು ಅತಿಕ್ರಮಣ ಮಾಡಿಕೊಂಡಿದೆ. ಈ ಪ್ರದೇಶ ಈಗ ಟಿಬೆಟ್ ನ ನ್ಯಾಲಾಂ ಪ್ರದೇಶಕ್ಕೆ ಸೇರಿರುವುದಾಗಿ ವರದಿ ತಿಳಿಸಿದೆ. ನೇಪಾಳದ ಸಚಿವಾಲಯದ ಡಾಟಾ ಪ್ರಕಾರ ನೇಪಾಳದ ನೂರಾರು ಹೆಕ್ಟೇರ್ ಪ್ರದೇಶ ಚೀನಾ ವಶಪಡಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.