ರೈತರ ವಿರುದ್ಧ ಮೊಕದ್ದಮೆ ದಾಖಲಿಸದಿರಿ
Team Udayavani, Nov 13, 2019, 3:07 AM IST
ಬೆಂಗಳೂರು: ರೈತರು, ನೆರೆ ಸಂತ್ರಸ್ತರಿಗೆ ನೆರವಾಗುವ ಸಂಬಂಧ ನೀಡಿರುವ ಸಲಹೆ, ಸೂಚನೆ ಬಗ್ಗೆ ಪರಿಗಣಿಸಲಾಗುವುದು ಹಾಗೂ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ರೈತರ ವಿರುದ್ಧ ಮೊಕದ್ದಮೆ ದಾಖಲಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಮುಖಂಡರಿಗೆ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ, ರೈತ ಮುಖಂಡರ ಸಲಹೆ, ಸೂಚನೆಯನ್ನು ಪರಿಗಣಿಸಲಾಗುವುದು. ಸರ್ಕಾರದ ಇತಿಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಸಾಧ್ಯವಾದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮೊದಲು ರೈತ ಮುಖಂಡರ ನಿಯೋಗ ಪ್ರಮುಖ ಬೇಡಿಕೆಗಳನ್ನು ಪ್ರಸ್ತಾಪಿಸಿ, ನೆರೆಯಿಂದ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ.ಗಿಂತ ಕಡಿಮೆಯಿಲ್ಲದಂತೆ ಗುಣಮಟ್ಟದ ಮನೆ ನಿರ್ಮಿಸಬೇಕು. ನೆರೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ನೆರೆಯಿಂದಾದ ಬೆಳೆ ನಷ್ಟಕ್ಕೆ ಡಾ.ಸ್ವಾಮಿನಾಥನ್ ವರದಿಯನ್ವಯ ನಷ್ಟ ಭರಿಸಬೇಕು. ಪ್ರವಾಹದಿಂದ ಪ್ರತಿ ಬಾರಿ ಮುಳುಗಡೆಯಾಗುವ ಹಳ್ಳಿಗಳನ್ನು ಸ್ಥಳಾಂತರಿಸಬೇಕು ಎಂದು ನಿಯೋಗ ಮನವಿ ಮಾಡಿತು.
ನೆರೆಯಿಂದ ಸಂಪೂರ್ಣ ಹಾಳಾಗಿರುವ ಭೂಮಿಗೆ ಪರ್ಯಾಯ ಭೂಮಿ ನೀಡಬೇಕು. ಬರ, ನೆರೆಯಿಂದ ತತ್ತರಿಸಿರುವ ಹೊತ್ತಿನಲ್ಲಿ ಹಣಕಾಸು ಸಂಸ್ಥೆಗಳ ಕಿರು ಸಾಲ ವಸೂಲಾತಿಗೆ ಕಡಿವಾಣ ಹಾಕಬೇಕು. ಬರಪೀಡಿತ ಪ್ರದೇಶದ ರೈತರ ಜಮೀನುಗಳಿಗೆ ಎಕರೆಗೆ 25,000 ರೂ. ನೀಡಬೇಕು. ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು. ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂ. ಅನುದಾನ ಕಾಯ್ದಿರಿಸಬೇಕು ಎಂದು ಆಗ್ರಹಿಸಿತು.
ಕೆಪಿಸಿಎಲ್ ವಿಧಾನ ಅಳವಡಿಕೆಗೆ ಕೆಪಿಟಿಸಿಎಲ್ ಒಪ್ಪಿಗೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನೇಮಕಾತಿಗೆ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಅನುಸರಿಸುವ ವಿದ್ಯಾರ್ಹತೆ ಹಾಗೂ ಇತರೆ ಮಾನದಂಡ ಅನುಸರಿಸುವ ಕುರಿತು ಒಪ್ಪಿಗೆ ನೀಡಲಾಗಿದೆ. ರೇಸ್‌ಕೋರ್ಸ್ ರಸ್ತೆಯ ಕೆಪಿಸಿಎಲ್‌ನ ಶಕ್ತಿ ಭವನದಲ್ಲಿ ನಡೆದ ಕೆಪಿಟಿಸಿಎಲ್ ನಿರ್ದೇಶಕರ ಮಂಡಳಿ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನೇಮಕಕ್ಕೆ ಸಂಬಂಧಪಟ್ಟಂತೆ ಕೆಪಿಸಿಎಲ್ ವಿಧಿಸುವ ವಿದ್ಯಾರ್ಹತೆ, ಪ್ರಮಾಣ ಇತರೆ ಮಾನದಂಡಗಳನ್ನು ಕೆಪಿಟಿಸಿಎಲ್‌ನಲ್ಲಿ ಅಳವಡಿಸಿಕೊಳ್ಳಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಅದರಂತೆ ಇನ್ನು ಮುಂದೆ ಕೆಪಿಟಿಸಿಎಲ್‌ನಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನೇಮಕದಲ್ಲಿ ಕೆಪಿಸಿಎಲ್‌ನಲ್ಲಿ ಅನುಸರಿಸುತ್ತಿರುವ ಮಾನದಂಡಗಳು ಜಾರಿಗೆ ಬರಲಿವೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.