ಕಬ್ಬೂರಿಗೆ ಬೇಕು ಬಸ್ ನಿಲ್ದಾಣ
Team Udayavani, Nov 13, 2019, 11:46 AM IST
ಚಿಕ್ಕೋಡಿ: ಸುತ್ತಮುತ್ತ ಹತ್ತಾರು ಹಳ್ಳಿಗಳಿಗೆ ಕೇಂದ್ರ ಸ್ಥಾನವಾದ ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ಬಸ್ ನಿಲ್ದಾಣ ಇಲ್ಲದೇ ಪ್ರಯಾಣಿಕರು ನೆತ್ತಿ ಸುಡುವ ಬಿಸಿಲಿನ ಮಧ್ಯೆ ಹೈರಾಣಾಗುತ್ತಿದ್ದು, ಬಸ್ ತಂಗುದಾಣ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರುತ್ತಿಲ್ಲ.
ಪಟ್ಟಣ ಪಂಚಾಯತ್ ಹೊಂದಿರುವ ತಾಲೂಕಿನ ಕಬ್ಬೂರ ಪಟ್ಟಣದ ಸಾರ್ವಜನಿಕರಿಗೆ ಸುಸಜ್ಜಿತ ಬಸ್ ನಿಲ್ದಾಣ ಅವಶ್ಯಕವಾಗಿದೆ. ಪಟ್ಟಣದ ಮಧ್ಯೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಹಾದು ಹೋಗಿದೆ. ಆದರೆ ಪ್ರಯಾಣಿಕರು ಬಸ್ ನಿಲ್ದಾಣ ಇಲ್ಲದೇ ಹೆದ್ದಾರಿ ಪಕ್ಕದಲ್ಲಿಯೇ ಬಸ್‌ಗಾಗಿ ಕಾಯಬೇಕಾಗಿದೆ.
ಪಟ್ಟಣದಲ್ಲಿ ಸುಮಾರು 25ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು, ಆಡಳಿತ ದೃಷ್ಟಿಯಿಂದಾಗಿ ಕಳೆದ ನಾಲ್ಕೈದು ವರ್ಷದ ಹಿಂದೆ ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಆದರೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಳ್ಳದೇ ಇರುವುದು ವಿಪರ್ಯಾಸ.
ಪಟ್ಟಣದ ಮಾರ್ಗ ಮಧ್ಯ ಹಾದು ಹೋಗಿರುವ ರಾಜ್ಯ ಹೆದ್ದಾರಿ ಮೇಲೆ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳಿಗೆ ಹೋಗುವ ಪ್ರಯಾಣಿಕರು ನಿಪ್ಪಾಣಿ, ಕೊಲ್ಲಾಪುರ, ಪುಣೆ, ಮುಂಬೈ, ಸಾಂಗಲಿ, ಗೋಕಾಕ, ಸವದತ್ತಿ, ಯಲ್ಲಮ್ಮನಗುಡ್ಡ, ಧಾರವಾಡ, ಬೆಂಗಳೂರ, ಬೆಳಗಾವಿ ಮುಂತಾದ ಕಡೆಗೆ ಈ ಬಸ್ ನಿಲ್ದಾಣದಿಂದ ಪ್ರಯಾಣಿಸುವುದರಿಂದ ಅಂದಾಜು 175ಕ್ಕೂ ಅಧಿ ಕ ಬಸ್‌ಗಳು ಪ್ರತಿನಿತ್ಯ ಸಂಚರಿಸುತ್ತವೆ. ಇಂತಹ ದೊಡ್ಡ ಪಟ್ಟಣದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಕಬ್ಬೂರ ಪಟ್ಟಣದಿಂದ ಸುತ್ತಮುತ್ತಲಿನ ಗ್ರಾಮಗಳಾದ ಬೆಲ್ಲದ ಬಾಗೇವಾಡಿ, ಜಾಗನೂರ, ವಿಜಯನಗರ, ಕೆಂಚ್ಚನಟ್ಟಿ, ಬೆಳಗಲಿ, ಮಾಡಲಗಿ, ಜೋಡಹಟ್ಟಿ, ಮಿರಾಪುರಹಟ್ಟಿ ಅಲ್ಲದೆ ಸಮೀಪದಲ್ಲಿ ಚಿಕ್ಕೋಡಿ ರೈಲು ನಿಲ್ದಾಣವಿದ್ದು, ರೈಲಿನಲ್ಲಿ ಬರುವಂತಹ ಪ್ರಯಾಣಿಕರು ತಮ್ಮ ಪಟ್ಟಣ, ಗ್ರಾಮ, ನಗರಗಳಿಗೆ ಹೋಗುವವರು ಕಬ್ಬೂರ ಪಟ್ಟಣದಿಂದ ಪ್ರಯಾಣ ಮುಂದುವರಿಸಬೇಕಾಗುತ್ತದೆ. ಆದರೆ ಇಲ್ಲಿ ಬಿಸಿಲು, ಮಳೆಗೆ ಆಸರೆ ಪಡೆಯಲು ತಂಗುದಾಣ ಇಲ್ಲದಂತಾಗಿದೆ.
ಕಳೆದ ನಾಲ್ಕೈದು ವರ್ಷಗಳ ಹಿಂದೆ ರಾಜ್ಯ ಹೆದ್ದಾರಿ ನಿರ್ಮಾಣವಾಗುವ ಮುನ್ನ ಚಿಕ್ಕದಾದ ಬಸ್ ನಿಲ್ದಾಣ ಇತ್ತು. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಕಾಮಗಾರಿ ಆರಂಭವಾದಾಗ ಚಿಕ್ಕ ಬಸ್ ನಿಲ್ದಾಣ ತೆರವುಗೊಳಿಸಿದರು. ಈಗ ಹೆದ್ದಾರಿ ನಿರ್ಮಾಣವಾಗಿ ಎರಡು ವರ್ಷ ಕಳೆಯುತ್ತಾ ಬಂದಿದೆ. ಪಟ್ಟಣದ ಜನರಿಗೆ ಅನುಕೂಲವಾಗಲು ಬಸ್ ನಿಲ್ದಾಣವನ್ನು ಯಾಕೆ ನಿರ್ಮಿಸಿಲ್ಲ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ. ಹಳೆ ಬಸ್ ನಿಲ್ದಾಣದ ಜಾಗದಲ್ಲಿ ಈಗಾಗಲೇ ಬೀದಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಇಟ್ಟು ವ್ಯಾಪಾರ -ವಹಿವಾಟು ಆರಂಭಿಸಿದ್ದಾರೆ. ಬಸ್‌ಗಾಗಿ ಪ್ರಯಾಣ ಬೆಳೆಸುವ ಸಾರ್ವಜನಿಕರು ಮಾತ್ರ ನಿಲ್ಲಲು ಸ್ಥಳವಿಲ್ಲದಂತಾಗಿದೆ.
ಮಹಿಳೆಯರು, ವಯೊವೃದ್ಧರು, ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ನಿಲ್ಲಲು ಸ್ಥಳವಿಲ್ಲದಾಗಿದೆ. ರಸ್ತೆಯ ಪಕ್ಕದಲ್ಲಿ ನಿಂತಾಗ ಅನೇಕ ಬಾರಿ ಅಪಘಾತ ಸಂಭವಿಸಿ ಜನರು ಕೈಕಾಲು ಕಳೆದುಕೊಂಡ ಉದಾಹರಣೆಗಳು ಇವೆ.
ಶೌಚಾಲಯವಿಲ್ಲದೆ ಪರದಾಟ: ಬಸ್ ನಿಲ್ದಾಣ ಇಲ್ಲದೇ ಪರದಾಡುತ್ತಿರುವ ಜನರಿಗೆ ಶೌಚಾಲಯ ಇಲ್ಲದೇ ಇರುವುದು ಮತ್ತೂಂದು ಸಂಕಷ್ಟ ತಂದಿದೆ. ದೂರದ ಗ್ರಾಮಗಳಿಂದ ಬಸ್‌ಗಾಗಿ ಕಾಯ್ದು ಕುಳಿತುಕೊಳ್ಳುವ ಪ್ರಯಾಣಿಕರು ಶೌಚಾಲಯಕ್ಕೆ ಹೋಗಲು ಕಿ.ಮೀ. ನಷ್ಟು ದೂರ ಹೋಗಬೇಕು. ಕುಡಿಯುವ ನೀರಿನ ಸಮಸ್ಯೆಯಂತೂ ಹೇಳತೀರದಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಟ್ಟಣದಲ್ಲಿ ಹೈಟೆಕ್ ಬಸ್ ನಿಲ್ದಾಣ, ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯ ಒದಗಿಸಬೇಕು ಎನ್ನುತ್ತಾರೆ ಸ್ಥಳೀಯರು.
ರಾಜ್ಯ ಹೆದ್ದಾರಿ ನಿರ್ಮಾಣ ಮಾಡುವ ಮುನ್ನ ಕೆಶಿಪ್‌ನವರು ಗುರುತಿಸಿದ ಜಾಗವನ್ನು ಪಟ್ಟಣ ಪಂಚಾಯತಿಗೆ ಹಸ್ತಾಂತರಿಸದ ಕಾರಣ ಬಸ್ ತಂಗುದಾಣ ನಿರ್ಮಿಸಲು ತೊಂದರೆಯಾಗಿದೆ. ಶೀಘ್ರ ಕೆಶಿಪ್ ಅಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಲಾಗುತ್ತದೆ. – ಎಂ.ಬಿ.ಭೃಂಗಿಮಠ, ಮುಖ್ಯಾಧಿಕಾರಿ
-ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.