ಜನಮೆಚ್ಚುಗೆ ಪಡೆದ ವಾಚನಾಲಯ


Team Udayavani, Nov 13, 2019, 12:41 PM IST

GADAGA-TDY-1

ಗದಗ: ಹತ್ತಾರು ಕುಂದುಕೊರತೆ ಹೊತ್ತು ಬರುವ ಸಾರ್ವಜನಿಕರಿಗೆ ಪರಿಹಾರ ಕಲ್ಪಿಸುವ ಜಿಲ್ಲಾಡಳಿತ ತನ್ನ ಭವನದಲ್ಲೇ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸುವ ಮೂಲಕ ಪ್ರತಿನಿತ್ಯ ನೂರಾರು ಜನರಿಗೆ ಜ್ಞಾನದಾಸೋಹ ನೀಡುತ್ತಿದೆ.

ಜಿಲ್ಲಾಡಳಿತ ಭವನದಲ್ಲಿರುವ ಹತ್ತಾರು ಇಲಾಖೆಗಳಿಗೆ ನಿತ್ಯ ಬರುವ ಸಾವಿರಾರು ಜನರು ಅಧಿಕಾರಿಗಳಿಗೆ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾದರೆ ಜನರು ದಿನಪತ್ರಿಕೆ ಹಾಗೂ ಸಾಹಿತ್ಯ ಪುಸ್ತಕ ಓದುವ ಮೂಲಕ ಸಮಯ ಸದ್ವಿನಿಯೋಗ ಮಾಡಿಕೊಳ್ಳಬಹುದೆಂಬ ಉದ್ದೇಶದಿಂದ ಈ ಗ್ರಂಥಾಲಯ ಆರಂಭಿಸಲಾಗಿದೆ. 2018ರ ಮೇ 17ರಂದು ಲೋಕಾರ್ಪಣೆ ಗೊಂಡಿರುವ ವಾಚನಾಲಯಕ್ಕೆ ಪ್ರತಿನಿತ್ಯ 100ಕ್ಕೂ ಹೆಚ್ಚು ಜನರು ಭೇಟಿ ನೀಡುತ್ತಿದ್ದು, ಇಲ್ಲಿ ಗರಿಷ್ಠ 30 ಜನರಿಗೆ ಆಸನಗಳೊಂದಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸಲಾಗಿದೆ.

ಗ್ರಂಥಾಲಯದಲ್ಲಿ ಏನಿವೆ: 12 ಕನ್ನಡ ದಿನಪತ್ರಿಕೆಗಳು, 4 ಆಂಗ್ಲ ದಿನಪತ್ರಿಕೆಗಳು, ತಲಾ ಒಂದು ವಾರಪತ್ರಿಕೆ, ಮಾಸಪತ್ರಿಕೆ ಪತ್ರಿಕೆ, 8 ಇಂಗ್ಲಿಷ್‌ ಮ್ಯಾಗಜಿನ್‌ಗಳು ಬರುತ್ತಿವೆ. ಅದರೊಂದಿಗೆ ಕನ್ನಡ, ಆಂಗ್ಲ ಸಾಹಿತ್ಯಿಕ ಪುಸ್ತಕಗಳು, ರಾಷ್ಟ್ರ ನಾಯಕರ ಜೀವನ ಚರಿತ್ರೆ, ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ, ಜೀವಶಾಸ್ತ್ರ, ಸಸ್ಯಶಾಸ್ತ್ರ ಸೇರಿದಂತೆ ಸಂಗೀತ, ಕಲೆ, ಸಾಹಿತ್ಯ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತಾ ಪುಸ್ತಕಗಳು, ಜತೆಗೆ ವಿವಿಧ ಇಲಾಖೆಗಳಿಗೆ ಸಂಬಂಧಿ ಸಿದ ರೆಫರೆನ್ಸ್‌ ಪುಸ್ತಕಗಳು, ಕಾನೂನಿಗೆ ಸಂಬಂಧಿಸಿದ ಪುಸ್ತಕಗಳು ಸೇರಿದಂತೆ 1730ಕ್ಕೂ ಹೆಚ್ಚು ಪುಸ್ತಕಗಳು ಇಲ್ಲಿವೆ.

ಶೂನ್ಯ ಬಂಡವಾಳದಲ್ಲಿ ಸ್ಥಾಪನೆ:ಈ ಹಿಂದೆ ಜಿಲ್ಲಾಡಳಿತ ಭವನದಲ್ಲಿ ಬಿಕೋ ಎನ್ನುತ್ತಿದ್ದ ಸಾರ್ವಜನಿಕ ನಿರೀಕ್ಷಣಾಲಯವನ್ನೇ ಗ್ರಂಥಾಲಯವನ್ನಾಗಿ ಪರಿವರ್ತಿಸಲಾಗಿದೆ. ಧಾರವಾಡದ ಕೇಂದ್ರ ಗ್ರಂಥಾಲಯದಲ್ಲಿ ಹೆಚ್ಚುವರಿಯಾಗಿದ್ದ ರ್ಯಾಕ್‌ಗಳನ್ನು ತರಿಸಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಮೂಲೆ ಸೇರಿದ್ದ 30ಕ್ಕೂ ಹೆಚ್ಚು ಕುರ್ಚಿಗಳನ್ನು ದುರಸ್ತಿಗೊಳಿಸಿ ಆಸನ ವ್ಯವಸ್ಥೆ ಮಾಡಲಾಗಿದೆ. ಗ್ರಂಥಾಲಯ ಇಲಾಖೆಯಿಂದ ಲಭ್ಯವಿರುವ ನೂರಾರು ಪುಸ್ತಕಗಳನ್ನೇ ಇಲ್ಲಿಗೆ ಸರಬರಾಜು ಮಾಡಲಾಗಿದೆ. ಶೂನ್ಯ ಬಂಡವಾಳದಲ್ಲಿಯೇ ಗ್ರಂಥಾಲಯ ಸ್ಥಾಪಿಸಲಾಗಿದೆ ಎನ್ನುತ್ತಾರೆ ಗ್ರಂಥಾಲಯ ಅಧಿಕಾರಿಗಳು.

ಜಿಲ್ಲಾಡಳಿತ ಭವನದಲ್ಲಿ ವಾಚನಾಲಯ ಸ್ಥಾಪನೆಯಾದಾಗಿನಿಂದ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲೂ ಓದುವ ಆಸಕ್ತಿ ಹೆಚ್ಚಿದೆ. ಅದಕ್ಕಾಗಿ ಅನೇಕರು ಕಾರ್ಡ್‌ ಕೂಡಾ ಮಾಡಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಹೆಚ್ಚು ಪುಸ್ತಕಗಳನ್ನು ಸರಬರಾಜು ಮಾಡಿದರೆ ಓದುಗರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ.

ಗ್ರಂಥಾಲಯಕ್ಕೆ ಪ್ರತಿನಿತ್ಯ ನೂರಾರು ಜನರು ಭೇಟಿ ನೀಡುತ್ತಾರೆ. ಬಹುತೇಕರು ಪತ್ರಿಕೆಗಳನ್ನು ಕಣ್ಣಾಡಿಸುತ್ತಾರೆ. ಆದರೆ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರು ತಮ್ಮ ಬಿಡುವಿನ ವೇಳೆ ಬಂದು ತಮಗೆ ಬೇಕಾದ ಪುಸ್ತಕಗಳನ್ನು ಓದುತ್ತಾರೆ. ಹಿಂದಿಗಿಂತ ಈಗ ಓದುಗರ ಸಂಖ್ಯೆ ಹೆಚ್ಚಿದೆ.  –ಮುತ್ತಣ್ಣ ಹೊಸಹಳ್ಳಿ, ಗ್ರಂಥಾಲಯ ಸಿಬ್ಬಂದಿ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Waqf

Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.