ಟಿಕೆಟ್‌ಗಾಗಿ ಪಟ್ಟು, ನಿಗಮ ಅಧ್ಯಕ್ಷ ಗಿರಿಗಿಲ್ಲ ಆಸಕ್ತಿ

ಬಿಜೆಪಿ ಮುಖಂಡರಿಗೆ ಗವಿಯಪ್ಪ ಅಸಮಾಧಾನದ ಸಂದೇಶ ರವಾನೆ

Team Udayavani, Nov 13, 2019, 3:46 PM IST

Udayavani Kannada Newspaper

„ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ವಿಜಯನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಘೋಷಣೆಯಾದಾಗಿನಿಂದಲೂ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಎಚ್‌.ಆರ್‌. ಗವಿಯಪ್ಪ ತಮ್ಮ ನಿರ್ಧಾರವನ್ನು ಮತ್ತಷ್ಟು ಗಟ್ಟಿ ಮಾಡಿದ್ದಾರೆ.

ಇದೇ ಕಾರಣಕ್ಕೆ ತಮಗೆ ನೀಡಿದ್ದ ಬೆಂಗಳೂರಿನ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನೂ ಪರೋಕ್ಷವಾಗಿ ತಿರಸ್ಕರಿಸಿದ್ದಾರೆ. ನಿಗಮ ಸ್ಥಾನ ಘೋಷಣೆಯಾಗಿ ತಿಂಗಳಾದರೂ ಅಧಿ ಕಾರ ಸ್ವೀಕರಿಸದ ಗವಿಯಪ್ಪ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಹೊರತುಪಡಿಸಿ ಬೇರೇನೂ ಬೇಡ ಎಂದಿದ್ದು, ಅನರ್ಹ ಶಾಸಕರ ಪ್ರಕರಣದ ಸುಪ್ರೀಂಕೋರ್ಟ್‌ ಆದೇಶಕ್ಕಾಗಿ ಕಾದು ಕುಳಿತಿದ್ದಾರೆ. ಆದರೆ ಪಕ್ಷ ಅಧಿಕಾರ ಹಿಡಿಯಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನರ್ಹ ಶಾಸಕರ ಪೈಕಿ ಆನಂದ ಸಿಂಗ್‌ ಅವರಿಗೆ ಈ ಕ್ಷೇತ್ರದ ಟಿಕೆಟ್‌ ನೀಡಲು ಸಿಎಂ ಯಡಿಯೂರಪ್ಪ ಸೇರಿದಂತೆ ಬಿಜೆಪಿ ತೀರ್ಮಾನಿಸಿದೆ ಎನ್ನಲಾಗುತ್ತಿದೆ.

ಇದು ಪಕ್ಷದಲ್ಲೇ ಗೊಂದಲಕ್ಕೆ ಕಾರಣವಾಗಿದೆ. ಈ ಭಿನ್ನಮತ ಸರಿಪಡಿಸಲು ಯಡಿಯೂರಪ್ಪ ಕಳೆದ ಅ.9ರಂದು ಗವಿಯಪ್ಪ ಅವರಿಗೆ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಿ ಸಮಾಧಾನಪಡಿಸುವ ಯತ್ನ ಮಾಡಿದ್ದರೂ ಅದನ್ನು ನಯವಾಗಿ ತಿರಸ್ಕರಿಸಿರುವ ಗವಿಯಪ್ಪ ಇನ್ನೂ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳದೆ ಅಸಮಾಧಾನ ಹೊರಹಾಕಿದ್ದಾರೆ.

243 ಕೋಟಿ ರೂ.ಅನುದಾನ: ಮತ್ತೊಂದೆಡೆ ಯಡಿಯೂರಪ್ಪ ಕ್ಷೇತ್ರದ ಅಭಿವೃದ್ಧಿಗೆ ಕಳೆದ ನ.8ರಂದು 243 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದು ಕುತೂಹಲ ಮೂಡಿಸಿದೆ. ತುಂಗಭದ್ರಾ ನದಿಯಿಂದ ಪಾಪಿನಾಯಕನಹಳ್ಳಿ ಸೇರಿ ಗಣಿಪ್ರದೇಶ ವ್ಯಾಪ್ತಿಯ 18 ಕೆರೆ ಹಾಗೂ ನಾಲ್ಕು ಚೆಕ್‌ ಡ್ಯಾಂಗಳನ್ನು ತುಂಬಿಸುವ ಯೋಜನೆಗೆ ಅನುದಾನ ನೀಡಲಾಗಿದೆ. ಅಲ್ಲದೇ, ಇತ್ತೀಚೆಗಷ್ಟೇ 40.85 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸೇರಿ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು.

ಭೂಮಿಪೂಜೆ ವೇಳೆ ಅನರ್ಹ ಶಾಸಕ ಆನಂದ್‌ ಸಿಂಗ್‌ ಸಂಬಂ ಧಿಕರು ಕಾಣಿಸಿಕೊಂಡು ಗಮನ ಸೆಳೆದಿದ್ದರು. ಅಲ್ಲದೇ ಉಪಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ರಾಜ್ಯ ಸರ್ಕಾರ 243 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಪರೋಕ್ಷವಾಗಿ ಆನಂದ್‌ ಸಿಂಗ್‌ ಬೆನ್ನಿಗೆ ನಿಂತಿದೆ ಎಂಬ ಸಂದೇಶ ರವಾನಿಸಿದೆ.

ಸುಪ್ರೀಂಕೋರ್ಟ್‌ ಆದೇಶ ಅನರ್ಹರ ಪರವಾಗಿ ಬಂದರೆ ಬಿಜೆಪಿ ಟಿಕೆಟ್‌ ಆನಂದ್‌ಸಿಂಗ್‌ಗೆ ಇಲ್ಲದಿದ್ದರೆ ಅವರ ಬೆಂಬಲಿಗರಿಗೆ ಲಭಿಸುವುದು ಬಹುತೇಕ ಖಚಿತ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿಟ್ಟಿರುವ ಗವಿಯಪ್ಪ ಸುಪ್ರೀಂಕೋರ್ಟ್‌ ತೀರ್ಪಿಗಾಗಿ ಎದುರು ನೋಡುತ್ತಿದ್ದು, ಟಿಕೆಟ್‌ ದೊರೆಯುವ ವಿಶ್ವಾಸದಲ್ಲಿದ್ದಾರೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.