ಅನರ್ಹರಿಗೆ ಸುಪ್ರೀಂ ತಕ್ಕ ಪಾಠ: ಗುಂಡೂರಾವ್
Team Udayavani, Nov 13, 2019, 8:33 PM IST
ರಾಯಚೂರು: ರಾಜೀನಾಮೆ ನೀಡಿದ 17 ಶಾಸಕರನ್ನು ಅನರ್ಹಗೊಳಿಸಿದ ಸುಪ್ರೀಂ ಕೋರ್ಟ್ ನಿರ್ಧಾರ ಸ್ವಾಗತಾರ್ಹ. ಸರಕಾರ ಬೀಳಿಸಬೇಕು ಎಂಬ ದುರುದ್ದೇಶದಿಂದ ಈ ಕೃತ್ಯ ಎಸಗಿದ ಅವರಿಗೆ ತಕ್ಕ ಪಾಠವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಅತೃಪ್ತ ಶಾಸಕರು ಅನರ್ಹರು ಎಂಬ ಸ್ಪೀಕರ್ ಆದೇಶಕ್ಕೆ ನ್ಯಾಯಾಲಯ ಮನ್ನಣೆ ನೀಡಿದೆ. ಆದರೆ ಚುನಾವಣೆಗೆ ಸ್ಪ ರ್ಧಿಸಲು ಅವಕಾಶ ನೀಡಿದ್ದು, ಅನರ್ಹ ಶಾಸಕರು ಸ್ಪರ್ಧಿಸಲಿ. ರಾಜ್ಯದ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಅನರ್ಹ ಶಾಸಕರಿಗೂ ನಮಗೂ ಸಂಬಂಧವಿಲ್ಲ ಎನ್ನುತ್ತಿದ್ದ ಬಿಜೆಪಿ ನಾಯಕರಿಗೆ ನೈತಿಕತೆ ಇದ್ದರೆ ಯಾವುದೇ ಕಾರಣಕ್ಕೂ ಅನರ್ಹರಿಗೆ ಟಿಕೆಟ್ ನೀಡಬಾರದು. ಟಿಕೆಟ್ ನೀಡಿದರೆ ಸಂವಿಧಾನ ಬಾಹಿರ ಕೃತ್ಯ ಎಸಗಿದಂತಾಗುತ್ತದೆ. ಅಮಿತ್ ಶಾ, ಬಿಎಸ್ವೈ ತಾವೇ ಆಪರೇಷನ್ ಕಮಲದ ಸೂತ್ರಧಾರರು ಎಂದು ಒಪ್ಪಿಕೊಂಡಂತಾಗುತ್ತದೆ ಎಂದರು.
ಸರಕಾರ ವಜಾಕ್ಕೆ ರಾಷ್ಟ್ರಪತಿಗೆ ಮನವಿ
ಅನರ್ಹರು ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ. ಸ್ವಾರ್ಥಕ್ಕೋಸ್ಕರ ಸಿದ್ಧಾಂತಗಳಿಗೆ ಧಕ್ಕೆ ತಂದಿದ್ದಾರೆ. ಇದು ಎಲ್ಲ ಪಕ್ಷಗಳಿಗೂ ಪಾಠವಾಗಿದೆ. ದೇಶದಲ್ಲಿ ಪûಾಂತರ ಕಾಯ್ದೆ ಸುಧಾರಣೆಯಾಗಬೇಕು. ರಾಜ್ಯದಲ್ಲಿ ಸರಕಾರ ರಚಿಸಿದ್ದೇ ವಾಮಮಾರ್ಗದಿಂದ. ಈ ಸರಕಾರಕ್ಕೆ ಅಸ್ತಿತ್ವವೇ ಇಲ್ಲ. ಅದನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು. ಇಂಥ ಅನೈತಿಕ ಸರಕಾರದ ಹೊಣೆ ಹೊತ್ತ ಸಿಎಂ ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಲಿ. ಅನರ್ಹರಾಗಲಿ, ಅವರ ಕುಟುಂಬದವರಾಗಲಿ ಪಕ್ಷಕ್ಕೆ ಹಿಂದಿರುಗಿದರೆ ಸೇರಿಸಿಕೊಳ್ಳುವ ಮಾತೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.