ಡೂಡಲ್ ಫಾರ್ ಗೂಗಲ್ ಡಿಸೈನ್ ಸ್ಪರ್ಧೆ: ಮಂಗಳೂರಿನ ಭೂಷಣ್ ಫೈನಲಿಸ್ಟ್
Team Udayavani, Nov 14, 2019, 5:31 AM IST
ಮಂಗಳೂರು: ಮಕ್ಕಳ ದಿನಾಚರಣೆಯ ಅಂಗವಾಗಿ “ಗೂಗಲ್’ ಅಂತರ್ಜಾಲ ತಾಣವು ನಡೆಸಿದ ರಾಷ್ಟ್ರ ಮಟ್ಟದ “ಡೂಡಲ್’ ವಿನ್ಯಾಸ ಸ್ಪರ್ಧೆಯಲ್ಲಿ ಮಂಗಳೂರಿನ ಕೊಡಿಯಾಲ್‌ಬೈಲ್ ಸಂತ ಅಲೋಶಿಯಸ್ ಪ್ರೌಢ ಶಾಲೆಯ ವಿದ್ಯಾರ್ಥಿ ಭೂಷಣ್ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾರೆ.
1ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗಾಗಿ 5 ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶಾದ್ಯಂತದ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ವಿನ್ಯಾಸ ಸ್ಪರ್ಧೆಗೆ “ನಾನು ಬೆಳೆದು ದೊಡ್ಡವನಾದಾಗ’ ಎಂಬ ವಿಷಯವನ್ನು ನೀಡಲಾಗಿತ್ತು. ಪ್ರೌಢಶಾಲಾ ವಿಭಾಗದಿಂದ ರಾಷ್ಟ್ರ ಮಟ್ಟದಲ್ಲಿ ಅಂತಿಮಗೊಂಡ ನಾಲ್ಕು ಚಿತ್ರಗಳಲ್ಲಿ ಭೂಷಣ್ ರಚಿಸಿದ ಚಿತ್ರವೂ ಒಂದು.
ಫೈನಲಿಸ್ಟ್‌ನ ಇಬ್ಬರಲ್ಲಿ ಭೂಷಣ್ ಒಬ್ಬರು
ಭೂಷಣ್ ಅವರು ಕಾಸರಗೋಡಿನ ಮಂಜೇಶ್ವರದ ನವೀನ್- ವಿಶಾಲಾಕ್ಷಿ ದಂಪತಿಯ ಪುತ್ರನಾಗಿದ್ದು, ಮಂಗಳೂರಿನ ಸಂತ ಅಲೋಶಿಯಸ್ ಇಂಗ್ಲಿಷ್ ಮಾಧ್ಯಮ ಹೈಸ್ಕೂಲಿನ 9ನೇ ತರಗತಿಯ ವಿದ್ಯಾರ್ಥಿ. ಕರ್ನಾಟಕದಿಂದ ಫೈನಲಿಸ್ಟ್ ಆದ ಇಬ್ಬರು ವಿದ್ಯಾರ್ಥಿಗಳಲ್ಲಿ ಭೂಷಣ್ ಒಬ್ಬರಾಗಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ.
ದಿಲ್ಲಿಯಲ್ಲಿ ಪ್ರದಾನ
ಈ ಸಾಧನೆಗಾಗಿ ವಿದ್ಯಾರ್ಥಿ ಗಳು ಮತ್ತು ಅವರ ಹೆತ್ತವರನ್ನು ಹೊಸದಿಲ್ಲಿಯಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಸಮ್ಮಾನಿಸಿ ಪ್ರಶಸ್ತಿ ವಿತರಿಸಲಾಯಿತು. ಗೂಗಲ್ ಕ್ರೋಮ್ ಲ್ಯಾಪ್‌ಟಾಪ್‌ನ್ನು ಪ್ರಶಸ್ತಿ ರೂಪದಲ್ಲಿ ನೀಡಲಾಗಿದೆ.
ಸಂತ ಅಲೋಶಿಯಸ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು 9 ವರ್ಷಗಳಿಂದ 5ನೇ ಬಾರಿ ಈ ಪ್ರಶಸ್ತಿಯನ್ನು ಪಡೆಯುತ್ತಿದ್ದು ಕಲಾ ಶಿಕ್ಷಕ ಜಾನ್‌ಚಂದ್ರನ್ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಹಿಂದೆ 2013ರಲ್ಲಿ ಈ ಶಾಲೆಯ ವಿದ್ಯಾರ್ಥಿಗೆ ಇದೇ ಪ್ರಶಸ್ತಿ ಲಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.