ಎರಡು ಶಾಲೆಯಲ್ಲಿ ಬಯಲಲ್ಲೇ ಪಾಠ

570ಕ್ಕೂ ಹೆಚ್ಚು ಮಕ್ಕಳಿದ್ದರೂ ಸಮರ್ಪಕ ಕಟ್ಟಡ ಇಲ್ಲ ಹೊಸ ಕೋಣೆ ಕಾಮಗಾರಿ ವಿಳಂಬ

Team Udayavani, Nov 14, 2019, 1:29 PM IST

14-November-15

ಅನೀಲ ಬಸೂದೆ
ಯಾದಗಿರಿ:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲಾ ಕೇಂದ್ರದ ಕೂಗಳತೆ ದೂರದಲ್ಲಿರುವ ಮುಂಡರಗಿ ಗ್ರಾಮದ ಎರಡು ಶಾಲೆ ಮಕ್ಕಳಿಗೆ ಬಯಲಲ್ಲೇ ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರ ಮೂಲಸೌಕರ್ಯಗಳಿಲ್ಲದೇ ಪರಿತಪಿಸುವಂತಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಗಾಡ ನಿದ್ದೆಯಲ್ಲಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಶಾಲೆಯಲ್ಲಿ ಮುಖ್ಯ ಶಿಕ್ಷಕ ಸೇರಿ 14 ಜನ ಶಿಕ್ಷಕರಿದ್ದಾರೆ. 570ಕ್ಕೂ ಹೆಚ್ಚು ಮಕ್ಕಳಿದ್ದು ಸಮರ್ಪಕ ಕಟ್ಟಡ ವ್ಯವಸ್ಥೆಯಿಲ್ಲದೇ ಅನಿವಾರ್ಯವಾಗಿ ಶಾಲೆ ಆವರಣದಲ್ಲಿನ ಟೀನ್‌ ಶೆಡ್‌ನ‌ಲ್ಲಿ ಪಾಠ ಕೇಳುವಂತಾಗಿದೆ.

ಶಾಲೆಗೆ ಒಟ್ಟು 7 ಕೋಣೆಗಳಿವೆ. ಇದರಲ್ಲಿಯೇ ಒಂದರಲ್ಲಿ ಕಚೇರಿಗೆ ಉಪಯೋಗಿಸಿಕೊಳ್ಳುತ್ತಿದೆ. ಉಳಿದ ಚಿಕ್ಕದಾದ 6 ಕೋಣೆಯಲ್ಲಿ ಪಾಠ ಬೋಧಿಸಲಾಗುತ್ತಿದೆ. ಪಾಠದ ವೇಳೆ ಗದ್ದಲದಿಂದ ಯಾವೊಬ್ಬ ಮಗುವೂ ಸರಿಯಾಗಿ ಪಾಠ ಅರ್ಥೈಸಿಕೊಳ್ಳಲು ಆಗದ ಸ್ಥಿತಿ ನಿರ್ಮಾಣವಾಗಿದೆ.

4 ಕೋಣೆ ನಿರ್ಮಾಣ ವಿಳಂಬ: ಮೊದಲೇ ಕಟ್ಟಡದ ಕೊರತೆಯಿಂದ ನಲುಗಿರುವ ವಿದ್ಯಾರ್ಥಿಗಳಿಗೆ ಇನ್ನೂ ಹೊಸ ಕಟ್ಟಡ ಬಳಕೆಗೆ ಸಿದ್ಧವಾಗುವುದು ವಿಳಂಬವಾಗುತ್ತಿದೆ. 2017-18ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ 1 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಗ್ರಂಥಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 4 ಕೋಣೆಗಳ ಕಾಮಗಾರಿಯನ್ನು ಭೂಸೇನಾ ನಿಗಮಕ್ಕೆ ನೀಡಲಾಗಿದೆ. ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉರ್ದು ಶಾಲೆಗೆ ಒಂದೇ ಕೋಣೆ: ಗ್ರಾಮದಲ್ಲಿ 1ರಿಂದ 7ನೇ ತರಗತಿವರೆಗೆ ಸರ್ಕಾರಿ ಉರ್ದು ಮಾಧ್ಯಮ ಶಾಲೆಯೂ ಇದೆ. 5 ಜನ ಸಿಬ್ಬಂದಿಗಳಿದ್ದು. 69 ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಆಗಮಿಸುತ್ತಿದ್ದಾರೆ. ಈ ಹಿಂದೆ ಎರಡು ಕೋಣೆಗಳಲ್ಲಿ ತರಗತಿ ನಡೆಯುತ್ತಿತ್ತು. ಕಳೆದ ಜುಲೈ ತಿಂಗಳಲ್ಲಿ ಹಳೆ ಕಟ್ಟಡದ ಮೇಲ್ಛಾವಣಿ ಸಿಮೆಂಟ್‌ ಭಾಗ ಕುಸಿದು ಬಿದ್ದು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಹೆದರಿರುವ ಶಿಕ್ಷಕರು ಅದನ್ನೆ ಮುಚ್ಚಿದ್ದಾರೆ. ಸದ್ಯ ಇರುವ ಒಂದು ಚಿಕ್ಕ ಕೋಣೆಯಲ್ಲಿ ಕೆಲ ಮಕ್ಕಳನ್ನು ಕೂಡಿಸಲಾಗುತ್ತಿದ್ದು, ಉಳಿದ ಮಕ್ಕಳನ್ನು ಗ್ರಾಪಂನಿಂದ ನಿರ್ಮಿಸಲಾದ ಟೀನ್‌ ಶೆಡ್‌ನ‌ಲ್ಲಿಯೇ ಎರಡು ತರಗತಿ ನಡೆಸುವ ಅನಿವಾರ್ಯತೆ ಎದುರಾಗಿದೆ.

ಶಿಕ್ಷಣ ಇಲಾಖೆ 2018-19ನೇ ಸಾಲಿನ ರಾಜ್ಯ ವಲಯ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕೆಲ ತಿಂಗಳ ಹಿಂದೆಯಷ್ಟೇ ಸ್ಥಳ ಗುರುತಿಸಿದ್ದು, ಲೋಕೋಪಯೋಗಿ ಇಲಾಖೆಗೆ ಕಾಮಗಾರಿ ಜವಾಬ್ದಾರಿ ವಹಿಸಲಾಗಿದೆ. ಸರ್ಕಾರ ಶಿಕ್ಷಣ ಕ್ಷೇತ್ರಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದರೂ ಇನ್ನೂ ಗ್ರಾಮೀಣ ಭಾಗದ ಶಾಲೆಗಳಿಗೆ ಸಕಾಲಕ್ಕೆ ಸಮರ್ಪಕ ಮೂಲಸೌಕರ್ಯ ಒದಗಿಸುವಲ್ಲಿ ಆಡಳಿತ ವರ್ಗ ಸೂಕ್ತ ಕಾಳಜಿ ವಹಿಸಬೇಕಿದೆ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.