ನಿಶ್ಯಬ್ದದಲ್ಲೆ ಅನುಷ್ಕಾ ಸದ್ದು!


Team Udayavani, Nov 15, 2019, 5:18 AM IST

ff-21

ಇತ್ತೀಚೆಗೆ ನಟಿ ಅನುಷ್ಕಾ ಶೆಟ್ಟಿ ಯಾವ ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿಲ್ಲವಲ್ಲ ಎಂದು ಬೇಸರಿಸಿಕೊಳ್ಳುತ್ತಿದ್ದ ಅಭಿಮಾನಿಗಳ ಮುಂದೆ ಅನುಷ್ಕಾ ಶೆಟ್ಟಿ ಹೊಸಲುಕ್‌ನಲ್ಲಿ ಎಂಟ್ರಿ ಕೊಡೋಕೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ತಮ್ಮ ಮಾತಿಗೆ ಬ್ರೇಕ್‌ ಹಾಕಿರುವ ಅನುಷ್ಕಾ ಎಲ್ಲವನ್ನೂ ಹಾವ-ಭಾವದಲ್ಲೇ ಹೇಳುತ್ತಿದ್ದಾರೆ.

ಹೌದು, ಅನುಷ್ಕಾ ಶೆಟ್ಟಿ ಸದ್ಯ ನಿಶ್ಯಬ್ದಂ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಇತ್ತೀಚೆಗೆ ಅನುಷ್ಕಾ ಬರ್ತ್‌ಡೇ ಸಂದರ್ಭದಲ್ಲೇ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನುಷ್ಕಾ ಮಾತು ಬಾರದ ಯುವತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅನುಷ್ಕಾ ಕೇವಲ ಮೂಕಾಭಿನಯದಲ್ಲಿ ನಟಿಸಿ¨ªಾರೆ. ನಿಶ್ಯಬ್ದಂ ಹಾರರ್‌ ಚಿತ್ರವಾಗಿದ್ದು, ಟೀಸರ್‌ನಲ್ಲಿ ಅನುಷ್ಕಾಗೆ ಜೋಡಿಯಾಗಿ ನಟ ಮಾಧವನ್‌ ಕಾಣಿಸಿಕೊಂಡಿದ್ದಾರೆ.

ಒಂದು ನಿಮಿಷ 14 ಸೆಕೆಂಡ್‌ ಇರುವ ಈ ವಿಡಿಯೋ ನೋಡಿ ಅನುಷ್ಕಾ ಅಭಿಮಾನಿಗಳು ಫ‌ುಲ್‌ ಖುಷಿಯಾಗಿದ್ದಾರೆ. ಟೀಸರಿನಲ್ಲಿ ಅನುಷ್ಕಾ ತುಂಬಾನೇ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಅನುಷ್ಕಾ ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡಿದ್ದರು. ಚೇರ್‌ ಮೇಲೆ ಕುಳಿತುಕೊಂಡು ಪೇಂಟಿಂಗ್‌ ಮಾಡುತ್ತಿರುವ ಪೋಸ್ಟರನ್ನು ಅನುಷ್ಕಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಈ ಪೋಸ್ಟರ್‌ ಐದು ಭಾಷೆಯಲ್ಲಿ ರಿಲೀಸ್‌ ಆಗಿದೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.

ಅಂದ ಹಾಗೆ, ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ಮಾಧವನ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿಶಬ್ದಂ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್‌ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸು vತ್ತಿರುವುದು ವಿಶೇಷವಾಗಿದೆ. ಹೇಮಂತ್‌ ಮಧುಕರ್‌ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ. ಒಟ್ಟಾರೆ ಇಲ್ಲಿಯವರೆಗೆ ಅನುಷ್ಕಾ ಮಾತು ಕೇಳಿದವರು ಈ ಚಿತ್ರದಲ್ಲಿ ಅವರ ಮೌನವನ್ನು ಎಷ್ಟರ ಮಟ್ಟಿಗೆ ಇಷ್ಟಪಡುತ್ತಾರೆ ಅನ್ನೋದು ನಿಶ್ಯಬ್ದಂ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.