ಅನರ್ಹರು ಕಳಂಕ ಹೊತ್ತು ಚುನಾವಣೆ ಎದುರಿಸಬೇಕು: ಸಿದ್ದರಾಮಯ್ಯ
Team Udayavani, Nov 14, 2019, 8:04 PM IST
ಬೆಂಗಳೂರು: ಅನರ್ಹ ಶಾಸಕರು ಮತ್ತು ಬಿಜೆಪಿಯವರು ತಮಗೆ ಸಂಬಂಧವಿಲ್ಲ ಎಂದು ಇಷ್ಟು ದಿನ ನಾಟಕ ಆಡಿದ್ದಾರೆ. ಈಗ ಅವರೆಲ್ಲ ಅನರ್ಹರಾಗಿ ಕಳಂಕ ಹೊತ್ತುಕೊಂಡು ಚುನಾವಣೆಗೆ ಹೋಗಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿ¨ªಾರೆ.
ಕೆಪಿಸಿಸಿ ಕಚೇರಿಯಲ್ಲಿ ಜವಾಹರ ಲಾಲ… ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಅವರು ಅನರ್ಹರು ಎಂಬ ಹಣೆಪಟ್ಟಿ ಇಟ್ಟುಕೊಂಡು ಮತ ಕೇಳಬೇಕು. ಕಳಂಕ ಹೊತ್ತವರನ್ನು ಜನರು ಗೆಲ್ಲಿಸುವುದಿಲ್ಲ ಎಂದು ಹೇಳಿದರು.
ನೆಹರೂ ಅವರು ಸ್ವಾತಂತ್ರಾéನಂತರ ದೇಶದ ಮೊದಲ ಪ್ರಧಾನಿಯಾಗಿದ್ದವರು. ಸುದೀರ್ಘ 17 ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದ್ದರು. ಪ್ರಜಾಪ್ರಭುತ್ವ ಇಂದಿನವರೆಗೂ ಯಶಸ್ವಿಯಾಗಿ ನಡೆದುಕೊಂಡು ಬರಲು ನೆಹರೂ ಅವರೇ ಭದ್ರ ಬುನಾದಿ ಹಾಕಿದರು ಎಂದವರು ಹೇಳಿದರು.
ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಕೃಷಿ, ಗ್ರಾಮೀಣಾಭಿವೃದ್ಧಿ ಸಹಿತ ಎಲ್ಲ ಕ್ಷೇತ್ರಗಳ ಬೆಳವಣಿಗೆಗೆ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರುವಲ್ಲಿ ನೆಹರೂ ಪ್ರಮುಖ ಪಾತ್ರ ವಹಿಸಿದ್ದರು. ಇಂದು ಬಿಜೆಪಿ ಸಹಿತ ಪ್ರತಿಯೊಂದೂ ರಾಜಕೀಯ ಪಕ್ಷಗಳು ಸ್ವಾತಂತ್ರÂವನ್ನು ಅನುಭವಿಸುತ್ತಿದ್ದರೆ ಅದಕ್ಕೆ ಮಹಾತ್ಮಾ ಗಾಂಧಿ ಮತ್ತು ನೆಹರೂ ಅವರಂಥ ವ್ಯಕ್ತಿಗಳೇ ಕಾರಣ. ದೇಶದಲ್ಲಿ ಒಂದು ವ್ಯವಸ್ಥಿತ ಬೆಳವಣಿಗೆ ಆಗಬೇಕು ಎಂಬ ನಿಟ್ಟಿನಲ್ಲಿ ನೆಹರೂ ಅವರು ಪಂಚವಾರ್ಷಿಕ ಯೋಜನೆ, ಯೋಜನಾ ಆಯೋಗದ ರಚನೆ ಮತ್ತು ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.