ಬಾಲ್ಯ ವಿವಾಹದ ವಿರುದ್ಧ ಭಾಗ್ಯಶ್ರೀ ಹೋರಾಟ

ಕಾದಂಬರಿ ಆಧರಿತ ಸಿನಿಮಾ

Team Udayavani, Nov 15, 2019, 5:33 AM IST

ff-29

ಸುಮಾರು ಮೂರು ವರ್ಷಗಳ ಹಿಂದೆ ಪ್ರಕಟವಾದ “ಭಾಗ್ಯ’ ಕಾದಂಬರಿ, ಈಗ “ಭಾಗ್ಯಶ್ರೀ’ ಎನ್ನುವ ಹೆಸರಿನಲ್ಲಿ ಚಲನಚಿತ್ರ ರೂಪದಲ್ಲಿ ತೆರೆಗೆ ಬರುತ್ತಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸೆಟ್ಟೇರಿದ್ದ ಈ ಚಿತ್ರ ಸದ್ಯ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಮಕ್ಕಳ ದಿನಾಚರಣೆಯ ಪ್ರಯುಕ್ತ ಇದೇ ನವೆಂಬರ್‌ 15ರಂದು ತೆರೆಗೆ ಬರುತ್ತಿದೆ. “ಶ್ರೀಬನಶಂಕರಿ ಆರ್ಟ್‌ ಕಂಬೈನ್ಸ್‌ ಬೀಳಗಿ’ ಬ್ಯಾನರ್‌ನಲ್ಲಿ ಶ್ರೀಮತಿ ಆಶಾ ಶಾಹೀರ ಬೀಳಗಿ ಈ ನಿರ್ಮಿಸಿರುವ ಈ ಚಿತ್ರವನ್ನು ಎಸ್‌. ಮಲ್ಲೇಶ್‌ ನಿರ್ದೇಶಿಸಿದ್ದಾರೆ. ಚಿತ್ರದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ಭಾಗ್ಯಶ್ರೀ’ ಚಿತ್ರದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾತನಾಡಿದೆ.

“ಚಿತ್ರದ ಹೆಸರೇ ಹೇಳುವಂತೆ, “ಭಾಗ್ಯಶ್ರೀ’ ಎಂಬ ಹುಡುಗಿಯ ಸುತ್ತ ಈ ಚಿತ್ರದ ಕಥೆ ನಡೆಯುತ್ತದೆ. ಶಾಲೆಯಲ್ಲಿ ಓದುತ್ತಿರುವ “ಭಾಗ್ಯಶ್ರೀ’ ಎಂಬ ಹುಡುಗಿ ಹೇಗೆ ಬಾಲ್ಯ ವಿವಾಹದ ವಿರುದ್ಧ ಹೋರಾಡುತ್ತಾಳೆ. ಆಕೆಯ ಹೋರಾಟದ ಹಾದಿಯಲ್ಲಿ ಎದುರಾಗುವ ಸವಾಲುಗಳೇನು, ಇದನ್ನೆಲ್ಲ ಆಕೆ ಹೇಗೆ ಎದುರಿಸುತ್ತಾಳೆ. ಇತರೆ ಹೆಣ್ಣುಮಕ್ಕಳಿಗೆ ಹೇಗೆ ಮಾದರಿಯಾಗುತ್ತಾಳೆ ಅನ್ನೋದು ಚಿತ್ರದ ಕಥಾಹಂದರ. ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿಗೂ ಬಾಲ್ಯವಿವಾಹ ಪದ್ದತಿ ಆಚರಣೆಯಲ್ಲಿದೆ. ಎಷ್ಟೋ ಬಾಲ್ಯವಿವಾಹಗಳು ಹೊರ ಜಗತ್ತಿಗೆ ಗೊತ್ತಾಗದಂತೆಯೇ ನಡೆದು ಹೋಗುತ್ತವೆ. ಇದೆಲ್ಲದರ ಸುತ್ತ ಬೆಳಕು ಚೆಲ್ಲುವ ಪ್ರಯತ್ನ ಈ ಚಿತ್ರದಲ್ಲಿ ನಡೆದಿದೆ’ ಎಂದು ಚಿತ್ರದ ಬಗ್ಗೆ ವಿವರಣೆ ಕೊಡುತ್ತಾರೆ ನಿರ್ದೇಶಕ ಎಸ್‌. ಮಲ್ಲೇಶ್‌.

ಚಿತ್ರದ ನಿರ್ಮಾಪಕಿ ಆಶಾ ಶಾಹೀರ ಬೀಳಗಿ, ಒಂದೊಳ್ಳೆ ಸಾಮಾಜಿಕ ಸಂದೇಶವನ್ನು ಜನರಿಗೆ ಕೊಡಬೇಕು ಎಂಬ ಉದ್ದೇಶದಿಂದ ಭಾಗ್ಯಶ್ರೀ ಚಿತ್ರವನ್ನು ನಿರ್ಮಿಸಿದ್ದಾರಂತೆ. ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕರು, “ಉತ್ತರ ಕರ್ನಾಟಕದ ಗ್ರಾಮೀಣ ಸಮಸ್ಯೆಗಳ ಚಿತ್ರಣ ಈ ಚಿತ್ರದಲ್ಲಿದೆ. ಉತ್ತರ ಕರ್ನಾಟಕದಲ್ಲಿ ಇಂದಿಗೂ ಸಾರ್ವಜನಿಕವಾಗಿಯೇ ಸಾಮೂಹಿಕ ವಿವಾಹದಲ್ಲಿ ಬಾಲ್ಯವಿವಾಹ ನಡೆಯುತ್ತದೆ. ಅನೇಕ ಕಡೆಗಳಲ್ಲಿ ಈ ಅನಿಷ್ಟ ಪದ್ದತಿ ಆಚರಣೆಯಾಗಿ ನಡೆದುಕೊಂಡು ಬಂದಿದೆ. ಇದನ್ನು ಇನ್ನೂ ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗಿಲ್ಲ. ನಮ್ಮ ಚಿತ್ರದ ಮೂಲಕ ಬಾಲ್ಯವಿವಾಹದ ಪರಿಣಾಮಗಳ ಬಗ್ಗೆ ಹೇಳಿದ್ದೇವೆ. ಬಾಲ್ಯವಿವಾಹ ತಡೆಯುವ ಕಥಾಹಂದರ ಈ ಚಿತ್ರದಲ್ಲಿದೆ. ನಮ್ಮ ಚಿತ್ರವನ್ನು ನೋಡಿ ಕೆಲವರಾದರೂ ಬದಲಾದರೆ ನಮ್ಮ ಪ್ರಯತ್ನ ಸಾರ್ಥಕ’ ಎನ್ನುತ್ತಾರೆ.

“”ಭಾಗ್ಯಶ್ರೀ’ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಅದರಲ್ಲಿ ಮಹಿಳೆಯರಿಗೆ ಸ್ಫೂರ್ತಿ ತುಂಬುವ ಸಲುವಾಗಿಯೇ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೇಲೆ ವಿಶೇಷ ಗೀತೆಯೊಂದನ್ನು ಮಾಡಲಾಗಿದೆ. ಈ ಗೀತೆ ಎಲ್ಲಾ ಕಾಲಕ್ಕೂ ಮಹಿಳೆಯರಿಗೆ ಪ್ರೇರಣೆಯಾಗುತ್ತದೆ’ ಅನ್ನೋದು ಸಂಗೀತ ನಿರ್ದೇಶಕ ಕಾರ್ತಿಕ್‌ ವೆಂಕಟೇಶ್‌ ಅವರ ಮಾತು. ಈ ಹಾಡುಗಳಿಗೆ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ, ವಿಶ್ವನಾಥ ಅವರ ಸಾಹಿತ್ಯವಿದೆ.

ಇನ್ನು “ಭಾಗ್ಯಶ್ರೀ’ ಚಿತ್ರದಲ್ಲಿ, ಬಾಲನಟಿ ಹೀರಾ ಭಾಗ್ಯಶ್ರೀ ಪಾತ್ರ ನಿರ್ವಹಿಸಿ¨ªಾರೆ. ಉಳಿದಂತೆ ಕೀರ್ತಿ, ಮಂಜು, ಬಾಲಕೃಷ್ಣ, ಏಕಾಂತ್‌, ಶಶಿ ಮೊದಲಾದ ಕಲಾವಿದರು ಚಿತ್ರದ ಇತರೆ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಹೇಮಂತ್‌ ಕುಮಾರ್‌ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನವಿದೆ. ಬೀಳಗಿ, ಕಿತ್ತೂರು, ಬೆಂಗಳೂರು ಸುತ್ತಮುತ್ತ “ಭಾಗ್ಯಶ್ರೀ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಒಟ್ಟಾರೆ ಬಾಲ್ಯವಿವಾಹದ ಬಗ್ಗೆ ಅರಿವು ಮೂಡಿಸಲು ಬರುತ್ತಿರುವ “ಭಾಗ್ಯಶ್ರೀ’ ಎಷ್ಟರ ಮಟ್ಟಿಗೆ ಪ್ರೇಕ್ಷಕರ ಮೇಲೆ ಪರಿಣಾಮ ಬೀರಲಿದ್ದಾಳೆ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.