“ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಗುರಿ’
Team Udayavani, Nov 15, 2019, 5:10 AM IST
ಬೆಂಗಳೂರು: ಮೈತ್ರಿ ಸರಕಾರ ಪತನಗೊಳ್ಳಲು ಕಾರಣರಾದ ಹದಿನೈದು ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಮೊದಲ ಗುರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಅಥವಾ ಸಿದ್ದರಾಮಯ್ಯ ಅವರು ಶತ್ರು ಅಲ್ಲ. ಸಿದ್ದರಾಮಯ್ಯ ಅವರು ಏನು ಬೇಕಾದರೂ ಹೇಳಿ ಕೊಳ್ಳಲಿ, ರಾಜಕೀಯವಾಗಿ ನಮಗೆ ವೈರತ್ವ ಇರಬಹುದು. ಆದರೆ ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸಲು ಏನೆಲ್ಲ ಕಾರ್ಯತಂತ್ರ ಮಾಡಬಹುದೋ ಅವೆಲ್ಲವನ್ನೂ ಮಾಡು ತ್ತೇನೆ ಎಂದು ತಿಳಿಸಿದರು.
ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವುದು ಮೊದಲ ಆದ್ಯತೆ. ನಮ್ಮ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿ ಟಿಕೆಟ್ ಪಡೆದಿರುವ ಅನರ್ಹರನ್ನು ಸೋಲಿಸುತ್ತೇನೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಆದರೆ ಕಾಂಗ್ರೆಸ್-ಬಿಜೆಪಿ ಜತೆ ಒಪ್ಪಂದದ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಶರತ್ ಬಚ್ಚೇಗೌಡರಿಗೆ ಬೆಂಬಲ ಸೂಚಿಸಿದ ತತ್‌ಕ್ಷಣ ಏನೇನೋ ವ್ಯಾಖ್ಯಾನ ಬರುತ್ತಿದೆ. ನಮ್ಮ ಸಮುದಾಯ ಎಂಬ ಕಾರಣಕ್ಕೆ ಬೆಂಬಲ ಸೂಚಿಸಿಲ್ಲ. ಅವರು ಮೊದಲಿನಿಂದಲೂ ಜನತಾ ಪರಿವಾರ, ಕೆಲವೊಂದು ವ್ಯತ್ಯಾಸ ಇರುವುದರಿಂದ ಬೇರೆ ಆಗಿದ್ದಾರೆ. ನಾನು ಕಳೆದ ಒಂದು ವಾರದಿಂದ ಶರತ್ ಸಂಪರ್ಕದಲ್ಲಿದ್ದೇನೆ. ಅವರು ಗೆಲ್ಲುವುದು ಖಚಿತ, ಬಯಸಿದರೆ ನಾನೂ ಒಂದು ದಿನ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೇಳಿದರು.
ಉಪ ಚುನಾವಣೆಯಲ್ಲಿ ಪಕ್ಷದ ಶಕ್ತಿ ನೋಡಿಕೊಂಡು ಮುಂದಿನ ಭವಿಷ್ಯ ನೋಡಿಕೊಂಡು ನಾನೂ ಕಾರ್ಯತಂತ್ರ ರೂಪಿಸುತ್ತೇನೆ. ನನ್ನೆಲ್ಲ ಶ್ರಮ ಹಾಕಿ ಪಕ್ಷದ ಅಭ್ಯರ್ಥಿಗಳ ಪರ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.