ಉಮಾಶಂಕರ್ ಕ್ಷಮೆ ಯಾಚನೆಗೆ ಪುರಸಭೆ ಸದಸ್ಯ ಒತ್ತಾಯ
Team Udayavani, Nov 15, 2019, 4:30 PM IST
ಕೆ.ಆರ್.ಪೇಟೆ: ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿ ವಿಶ್ವಮಾನ್ಯ ಸಂವಿಧಾನವನ್ನು ಭಾರತ ದೇಶಕ್ಕೆ ರಚಿಸಿಕೊಟ್ಟ ಸಂವಿಧಾನಶಿಲ್ಪಿ ಅಂಬೇಡ್ಕರ್ ವಿಚಾರ ಧಾರೆಗಳನ್ನು ಶಾಲಾ ಪಠ್ಯಗಳಲ್ಲಿ ಬದಲಾಯಿಸಲು ಹೊರಟಿರುವ ಎಸ್.ಆರ್. ಉಮಾಶಂಕರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಪುರಸಭೆಯ ಸದಸ್ಯ ಡಿ.ಪ್ರೇಮಕುಮಾರ್ ಒತ್ತಾಯಿಸಿದರು.
ಪಟ್ಟಣದಲ್ಲಿ ದಲಿತರು, ಮುಸ್ಲಿಂ ಯುವಕರ ಸಭೆಯಲ್ಲಿಮಾತನಾಡಿದ ಅವರು, ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿ ವಿಶ್ವದ ಇತರೆ ರಾಷ್ಟ್ರಗಳ ಸಂವಿಧಾನ ಅಧ್ಯಯನ ಮಾಡಿ ಭಾರತ ದೇಶದ ಸಾರ್ವಭೌಮತ್ವ ಹಾಗೂ ಅಖಂಡತೆಗೆ ಹೊಂದಿಕೆಯಾಗುವಂತಹ ವಿಶ್ವಮಾನ್ಯ ಸಂವಿಧಾನ ರಚಿಸಿದ ಮೇಧಾವಿ, ಶೋಷಿತ ವರ್ಗಗಳ ಉಸಿರಾದ ಅಂಬೇಡ್ಕರ್ ವಿಚಾರಧಾರೆಗಳನ್ನು ಪಠ್ಯಕ್ರಮಗಳಲ್ಲಿ ತಿದ್ದಿ ಬದಲಿಸಬೇಕು ಎಂಬ ಬಾಲಿಷ ಹೇಳಿಕೆ ನೀಡಿರುವ ಐಎಎಸ್ ಅಧಿಕಾರಿ ಉಮಾಶಂಕರ್ ಬೇಷರತ್ತಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ದಲಿತರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಅವಹೇಳನ ಸರಿಯಲ್ಲ: ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಟಿಪ್ಪು ಜಯಂತಿ ಸಮಾರಂಭದಲ್ಲಿ ನಾನು ಮಾಡಿರುವ ಭಾಷಣಕ್ಕೆ ಕೆಲ ಯುವಕರು ಟಿಕ್‌ಟಾಕ್ ಮಾಡಿ ನನ್ನ ಬಗ್ಗೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣ ಹಾಗೂ ವ್ಯಾಟ್ಸಫ್ ಗ್ರೂಪ್ ಗಳಲ್ಲಿ ಹಾಕಿರುವುದು ಖಂಡನೀಯ. ಅವರ ವಿರುದ್ಧ ಪೊಲೀಸ್ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಂ, ಮುದುಗೆರೆ ಮಹೇಂದ್ರ, ಸೋಮಸುಂದರ್, ಪ್ರದೀಪ್, ಚೆಲುವರಾಜು, ಜೈನಹಳ್ಳಿ ಹರೀಶ್, ಜಕ್ಕನಹಳ್ಳಿ ರಾಜೇಶ್, ಸೌಭಾಗ್ಯ ಉಮೇಶ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.