ನೀತಿ ಸಂಹಿತೆ; ಪೇಡ್‌ನ್ಯೂಸ್ ಮೇಲೆ ಹದ್ದಿನ ಕಣು
ಮುಕ್ತ-ನ್ಯಾಯಸಮ್ಮತ ಚುನಾವಣೆ ನಡೆಸಲು ಈಗಾಗಲೇ ಸಕಲ ಕ್ರಮ: ರಾಮಲಿಂಗಪ್ಪ
Team Udayavani, Nov 15, 2019, 4:39 PM IST
ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಈಗಾಗಲೇ ನೀತಿಸಂಹಿತೆ ಜಾರಿಯಾಗಿದ್ದು, ಮಾಧ್ಯಮಗಳ ನೀತಿ ಸಂಹಿತೆ ಉಲ್ಲಂಘನೆ, ಪೇಡ್ ನ್ಯೂಸ್ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಎಂಸಿಎಂಸಿ ನೋಡಲ್ ಅಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಹೇಳಿದರು.
ನಗರದ ವಾರ್ತಾಭವನದಲ್ಲಿ ಎಂಸಿಎಂಸಿ ಸಮಿತಿ ಸದಸ್ಯರಿಗೆ ಹಾಗೂ ಮಾಧ್ಯಮ ಕಣ್ಗಾವಲು ಸಿಬ್ಬಂದಿಗೆ ಗುರುವಾರ ಆಯೋಜಿಸಿದ್ದ ಎಂಸಿಎಂಸಿ ಸಮಿತಿ ಕಾರ್ಯವೈಖರಿ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣೆ ಆಯೋಗ ಈಗಾಗಲೇ ಸಕಲ ಕ್ರಮಗಳನ್ನು ಕೈಗೊಂಡಿದೆ. ಅದರ ಸೂಚನೆ ಅನ್ವಯ ಬಳ್ಳಾರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿ ರಚಿಸಲಾಗಿದೆ. ”ಪೇಡ್ ನ್ಯೂಸ್” ತಡೆಗಟ್ಟಲು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಮಾಧ್ಯಮ ಸಂಬಂಧಿತ ಅರ್ಜಿಗಳು, ಅನುಮತಿಗಳನ್ನು ಸರಾಗವಾಗಿ ನೀಡುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ಕೇಬಲ್ ವಾಹಿನಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.
ಎಂಸಿಎಂಸಿ ಸಮಿತಿಗೆ ನೆರವಾಗಲು ದಿನಪತ್ರಿಕೆಗಳನ್ನು ಹಾಗೂ ಸ್ಥಳೀಯ ಕೇಬಲ್ ವಾಹಿನಿಗಳನ್ನು ವೀಕ್ಷಿಸಲು, ಮಾಧ್ಯಮ ಪ್ರಮಾಣೀಕರಣಕ್ಕೆ ಒಟ್ಟು 20 ಸಿಬ್ಬಂದಿ ನಿಯೋಜಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ವಿದ್ಯುನ್ಮಾನ ವಾಹಿನಿಗಳು, ಮುದ್ರಣ ಮಾಧ್ಯಮ ಹಾಗೂ ಕೇಬಲ್ ವಾಹಿನಿಗಳಲ್ಲಿ ಪ್ರಸಾರವಾಗುವ ಪ್ರತಿ ಕಾರ್ಯಕ್ರಮವನ್ನು ಪರಿಶೀಲಿಸಲಾಗುತ್ತದೆ. ಉಲ್ಲಂಘನೆ ಹಾಗೂ ಸಂಶಯಾಸ್ಪದ ಕಾಸಿಗಾಗಿ ಸುದ್ದಿಗಳು ಪ್ರಸಾರವಾದಲ್ಲಿ ಅವುಗಳನ್ನು ರೆಕಾರ್ಡ್ ಮಾಡಿ ಜಿಲ್ಲಾ ಚುನಾವಣಾ ಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.
ಮತದಾನಕ್ಕೆ ಇನ್ನೂ ನಾಲ್ಕು ದಿನಗಳ ಮುನ್ನ ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟ ಮಾಡುವುದಕ್ಕೆ ಸಂಬಂಧಿಸಿದಂತೆ ಅನುಮತಿ ಪಡೆಯುವುದು ಕಡ್ಡಾಯ. ವಿದ್ಯುನ್ಮಾನ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಸಾರ ಮಾಡುವುದಕ್ಕೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಲೇಬೇಕು. ಒಂದು ವೇಳೆ ನಿರ್ಲಕ್ಷಿಸಿ ಪ್ರಸಾರ ಮಾಡಿದರೇ ವಾಹಿನಿಗಳು ಹಾಗೂ ಸಂಬಂ ಸಿದ ಅಭ್ಯರ್ಥಿಗಳ ಮೇಲೆ ಚುನಾವಣಾ
ಧಿಕಾರಿಗಳು ಪ್ರಕರಣ ದಾಖಲಿಸಲಿದ್ದಾರೆ ಎಂದರು.
ಸ್ಥಳೀಯ ಕೇಬಲ್ ವಾಹಿನಿಗಳು ಚುನಾವಣಾ ಜಾಹೀರಾತು ಪ್ರಸಾರಕ್ಕೂ ಮುನ್ನ ರಾಜಕೀಯ ಪಕ್ಷಗಳು/ಅಭ್ಯರ್ಥಿಗಳು ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡಿವೆ ಎಂಬುದನ್ನು ಖಾತ್ರಿಪಡಿಸಿಕೊಂಡು ಜಾಹೀರಾತು ಪ್ರಸಾರ ಮಾಡಬೇಕು. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ದಲ್ಲಿ ಕೇಬಲ್ ವಾಹಿನಿಗಳ ಉಪಕರಣಗಳನ್ನು ಜಿಲ್ಲಾ ಚುನಾವಣಾಕಾರಿಗಳು ಜಪ್ತಿ ಮಾಡಿ ಕೇಸ್ ದಾಖಲಿಸಲಿದ್ದಾರೆ ಎಂದರು.
ಪತ್ರಿಕೆಗಳಲ್ಲಿ ಪ್ರಕಟವಾಗುವ ಚುನಾವಣೆಗೆ ಸಂಬಂಧಿಸಿದ ಜಾಹೀರಾತುಗಳನ್ನು ಗಮನಿಸಿ ಆ ಜಾಹೀರಾತಿಗೆ ತಗಲುವ ವೆಚ್ಚವನ್ನು ಜಾಹೀರಾತು ನೀಡಿದ ಪಕ್ಷ/ಅಭ್ಯರ್ಥಿಯ ವೆಚ್ಚದ ಖಾತೆಗೆ ಜಮಾ ಮಾಡಿ ಚುನಾವಣೆಯ ಖರ್ಚು-ವೆಚ್ಚ ಶಾಖೆಗೆ ಮಾಹಿತಿ ನೀಡಲಾಗುತ್ತದೆ. ಎಲ್ಲ ಪತ್ರಿಕೆಗಳ ವಾಣಿಜ್ಯ ಜಾಹೀರಾತು ದರ ಪಟ್ಟಿ ವಾರ್ತಾ ಇಲಾಖೆ ಬಳಿಯಿದ್ದು, ಅದರನ್ವಯ ಜಾಹೀರಾತು ದರವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಬಳಿಕ ಚುನಾವಣಾ ಸಂದರ್ಭದಲ್ಲಿ ನಮ್ಮ ಸಮಿತಿ ಸಿಬ್ಬಂದಿ ವಹಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿ ಸದಸ್ಯರಾದ ಸಣ್ಣ ಉಳಿತಾಯ ಹಾಗೂ ಆಸ್ತ ಋಣ ನಿರ್ವಹಣಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಆಹಾರ ಇಲಾಖೆಯ ಆಹಾರ ನಿರೀಕ್ಷಕ ರವಿಕುಮಾರ್ ರಾಥೋಡ್, ಸಣ್ಣ ಉಳಿತಾಯ ಇಲಾಖೆಯ ಅಭಿವೃದ್ಧಿ ಅ ಕಾರಿ ಸುಧೀಶ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ್, ವಾರ್ತಾ ಇಲಾಖೆಯ ಪ್ರ.ದ.ಸ ವಿ.ಸಿ.ಗುರುರಾಜ್ ಸೇರಿದಂತೆ ಎಂ.ಸಿ.ಎಂ.ಸಿ ತಂಡದ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.