ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುಖಂಭಂಗ: ಉಗ್ರಪ್ಪ
Team Udayavani, Nov 15, 2019, 5:56 PM IST
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ 418 ವಾರ್ಡ್‌ಗಳ ಪೈಕಿ 151 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಗೆ ಮುಖಭಂಗವಾಗಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಮತದಾರರೇ ಬಿಜೆಪಿಯನ್ನು 125 ಕ್ಕೆ ಇಳಿಸಿದ್ದು ಮತದಾರರು ಬಿಜೆಪಿಯನ್ನು ತಿರಸ್ಕರಿಸಿ ಯಡಿಯೂರಪ್ಪನೇತೃತ್ವದ ಸರಕಾರಕ್ಕೆ ಕಪಾಳಮೋಕ್ಷ ಮಾಡಿದ್ದಾರೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಮೂರು ವಿಚಾರಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಆರ್. ಶಂಕರ್ ಅವರಿಗೆ ಎಂಎಲ್‌ಸಿ ಮಾಡಿ ಸಚಿವ ಸ್ಥಾನ ಕೊಡುತ್ತೇನೆ ಎಂದು ಹೇಳಿರುವುದು, ಎಲ್ಲ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಮತ್ತು ಶಿವಾಜಿನಗರ ಕ್ಷೇತ್ರದಲ್ಲಿ ತಮಿಳು ಜನಾಂಗದವರಿಗೆ ಟಿಕೆಟ್ ನೀಡಿದ್ದೇವೆ ಎಂದು ಆ ಸಮುದಾಯದ ಮತದಾರರನ್ನು ಓಲೈಕೆ ಮಾಡಿದ್ದಾರೆ. ಹೀಗಾಗಿ ಚುನಾವಣ ಆಯೋಗ ಯಡಿಯೂರಪ್ಪ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಅನರ್ಹರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದ ಬಿಜೆಪಿಯವರು 16 ಮಂದಿ ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡು ನೈತಿಕವಾಗಿ ಬೆತ್ತಲಾಗಿದ್ದಾರೆ. ಈ ಹಿಂದೆ ಮೈತ್ರಿ ಸರಕಾರದ ಪತನಕ್ಕೂ ಶಾಸಕರ ರಾಜೀನಾಮೆಗೂ ಸಂಬಂಧವಿಲ್ಲ. ಆಪರೇಷನ್ ಕಮಲ ಮಾಡಿಲ್ಲ ಎನ್ನುತ್ತಿದ್ದರು. ಈಗ ಅವರೇ ಅನರ್ಹರಿಗೆ ಮಾತು ಕೊಟ್ಟಂತೆ ಸಚಿವರಾಗಿ ಮಾಡುವುದಾಗಿ ಹೇಳಿರುವುದು ಅವರು ಶಾಸಕರಿಗೆ ಆಮಿಷ ಒಡ್ಡಿ ಆಪರೇಷನ್ ಕಮಲ ಮಾಡಿದ್ದಾರೆ ಎನ್ನುವುದು ಬಯಲಾಗಿದೆ. ರಾಜ್ಯದ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಜನರ ಕ್ಷಮೆ ಕೋರಬೇಕು ಮತ್ತು ಆಪರೇಷನ್ ಕಮಲದ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಬಿಜೆಪಿಯವರು ವಿಶ್ವಾಸದ್ರೋಹಿಗಳು ಎನ್ನುವುದಕ್ಕೆ ಆರ್. ಶಂಕರ್ ಮತ್ತು ರೋಶನ್ ಬೇಗ್ ಅವರೇ ಉದಾಹರಣೆ. ಚುನಾವಣೆ ಮುಗಿದ ಅನಂತರ ಉಳಿದ ಅನರ್ಹರ ಪರಿಸ್ಥಿತಿಯೂ ಅದೇ ಆಗುತ್ತದೆ ಎಂದು ಉಗ್ರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.