ಮತ ವಿಭಜಿಸಲು ಶಿವಶಂಕರ ರೆಡ್ಡಿ ಕುತಂತ್ರ: ಆರೋಪ
Team Udayavani, Nov 16, 2019, 3:00 AM IST
ಗೌರಿಬಿದನೂರು: ನಾನು 25 ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇನೆ. ಗೌರಿಬಿದನೂರು ಶಾಸಕರ ರಾಜಕೀಯವನ್ನು ನಾನು ಚೆನ್ನಾಗಿ ಅರಿತಿದ್ದು, ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುತ್ತಾರೆ ಎಂಬ ಭಯದಿಂದ ಮತ ವಿಭಜನೆ ಮಾಡಲು ಕೆಲವು ಅಭ್ಯರ್ಥಿಗಳನ್ನು ಸ್ಪರ್ಧಿಸುವಂತೆ ಮಾಡಿದ್ದರು ಎಂದು ಜೆಡಿಎಸ್ ಮುಖಂಡ ಸಿ.ಆರ್.ನರಸಿಂಹಮೂರ್ತಿ ಗಂಭೀರ ಆರೋಪ ಮಾಡಿದರು. ನಗರದ ಎಎನ್‌ಆರ್‌ವಿ ಫಂಕ್ಷನ್ ಹಾಲ್‌ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಮತ್ತು ಗೌರಿಬಿದನೂರು ಹಿತರಕ್ಷಣಾ ವೇದಿಕೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಸಿ.ಆರ್.ನರಸಿಂಹಮೂರ್ತಿ ಮಾತನಾಡಿದರು.
ನಗರಸಭೆ ಗದ್ದುಗೆ ನಮಗೆ: ಶಾಸಕರು ಕೇವಲ ತಂತ್ರಗಾರಿಕೆ ಮಾಡಿದ್ದಾರಷ್ಟೆ. ಆದರೆ ನಗರದ ಮತದಾರರು ನಮ್ಮನ್ನು ಬೆಂಬಲಿಸಿದ್ದಾರೆ. ನಾಲ್ಕು ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳು 1, 2, 2, 4 ಮತಗಳಿಂದ ಸೋತಿದ್ದು, 22 ನೇ ವಾರ್ಡ್ ಒಂದು ಪೋಸ್ಟಲ್ ಇರುವ ಬಗ್ಗೆ ಬ್ಯಾಲೇಟ್ ರಿಜಿಸ್ಟ್ರಾರ್ ಸಹ ಚುನಾವಣಾಧಿಕಾರಿ ಬಳಿ ಇರಲಿಲ್ಲ. ಒಟ್ಟಾರೆ ನಮ್ಮ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷಕ್ಕಿಂತ 188 ಮತಗಳನ್ನು ಹೆಚ್ಚಿಗೆ ಪಡೆದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಜಯ ಗಳಿಸಿರುವ ಸಪ್ತಗಿರಿ ಸಹ ನಮ್ಮ ಜೊತೆ ಇದ್ದು, ಬಿಜೆಪಿ ಪಕ್ಷದವರು ಸೇರಿ 16 ಜನ ಸದಸ್ಯರಿದ್ದು, ಮುಂದಿನ ದಿನಗಳಲ್ಲಿ ನಾವೇ ನಗರಸಭೆ ಚುಕ್ಕಾಣಿ ಹಿಡಿಯುವುದಾಗಿ ತಿಳಿಸಿದರು.
ಪಕ್ಷಕ್ಕೆ ಸೇರಲು ಬೆದರಿಕೆ: ವಾರ್ಡ್ ನಂ.30ರ ಪಕ್ಷೇತರ ಅಭ್ಯರ್ಥಿ ಭಾಗ್ಯಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಆಶ್ವಾಸನೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಅವರಿಗೆ ಆಮಿಷ ಒಡ್ಡಿದೆ. ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನೇ ಸರ್ಕಾರ ಪ್ರಕಟಿಸಿಲ್ಲ. ಆದರೆ 5-6 ಸದಸ್ಯರಿಗೆ ಜನರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಆಮಿಷ ಒಡ್ಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿರುವ ಸಪ್ತಗಿರಿ ನಮ್ಮ ಜೊತೆ ಗುರುತಿಸಿಕೊಂಡಿದ್ದಕ್ಕೆ ಕಾಂಗ್ರೆಸ್‌ನವರು ಪಕ್ಷಕ್ಕೆ ಸೇರುವಂತೆ ಬೆದರಿಸುತ್ತಿದ್ದಾರೆ ಎಂದು ತಿಳಿಸಿದರು.
ಚುನಾವಣಾಧಿಕಾರಿ ಕೈವಾಡ: ಜೆಡಿಎಸ್ ಮುಖಂಡ ಬಿ.ಜಿ.ವೇಣುಗೋಪಾಲ ರೆಡ್ಡಿ ಮಾತನಾಡಿ, ಮತ ಎಣಿಕೆ ಸಮಯದಲ್ಲಿ ನಾವು ಕಾನೂನಿಗೆ ಗೌರವ ನೀಡಿ ಮತ ಎಣಿಕೆ ಕೇಂದ್ರಕ್ಕೆ ಬರಲಿಲ್ಲ. ಇದುವೇ ನಮ್ಮ ಕೆಲವು ಅಭ್ಯರ್ಥಿಗಳಿಗೆ ಸೋಲಾಗಿದೆ. ಈ ಸೋಲಿನ ಹಿಂದೆ ಚುನಾವಣಾಧಿಕಾರಿ ನಂಜುಂಡಸ್ವಾಮಿ ಅವರ ಕೈವಾಡ ಇದ್ದು, ಅವರನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್ ಕುಮಾರ್ ಮಾತನಾಡಿ, ಶಾಸಕರ ಬೆಂಬಲಿಗರು ಪಕ್ಷೇತರವಾಗಿ ಗೆದ್ದವರಿಗೆ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಹಾಗೂ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಹೆದರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಗೌರಿಬಿದನೂರು ಹಿತ ರಕ್ಷಣಾ ವೇದಿಕೆ ಮುಖಂಡ ಎಂ.ನರಸಿಂಹಮೂರ್ತಿ ಅವರು ಗೆಲುವು ಸಾಧಿಸಿರುವ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ವೇದಿಕೆಯಲ್ಲಿ ಅಬ್ಬುಲ್ಲಾ, ಜೆಡಿಎಸ್ ಪಕ್ಷದ ಮುಖಂಡರಾದ ಆಲಂಪಲ್ಲಿ ವೇಣು, ನಗರಸಭೆ ಮಾಜಿ ಸದಸ್ಯ ಅನಂತರಾಜು, ಸದಸ್ಯೆ ಪದ್ಮಾವತಮ್ಮ, ಸದಸ್ಯ ಸಪ್ತಗಿರಿ, ಮಾರ್ಕೆಟ್ ರಾಜು, ಮಂಜುನಾಥ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.