ಶೀಘ್ರವೇ ಮನಪಾ ಮೇಯರ್‌- ಉಪ ಮೇಯರ್‌ ಚುನಾವಣೆ ಸಾಧ್ಯತೆ

ಪಾಲಿಕೆ ಆಡಳಿತ ಸೂತ್ರ ಕೈಹಿಡಿಯಲು ಬಿಜೆಪಿ ತಯಾರಿ

Team Udayavani, Nov 15, 2019, 10:30 PM IST

tt-10

ಮಹಾನಗರ: ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಆಡಳಿತ ಸೂತ್ರ ಕೈಹಿಡಿಯಲು ಸನ್ನದ್ಧವಾಗಿದೆ. ಈಗ ಮುಂದಿನ ಮೇಯರ್‌, ಉಪ ಮೇಯರ್‌ ಆಯ್ಕೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.  ಮೇಯರ್‌, ಉಪಮೇಯರ್‌ ಮೀಸಲಾತಿ ಈಗಾಗಲೇ ಸರಕಾರ ಪ್ರಕಟಿಸಿದ್ದು, ಹಾಗಾಗಿ ಅದಕ್ಕಾಗಿ ಕಾದು ಕಾಲ ಹರಣ ಮಾಡುವ ಪ್ರಮೇಯವಿಲ್ಲ. ಮುಂದಿನ 2- 3 ವಾರಗಳೊಳಗೆ ಮೇಯರ್‌, ಉಪ ಮೇಯರ್‌ ಆಯ್ಕೆ ನಡೆಯಲಿದೆ. ಒಂದೊಮ್ಮೆ ಸರಕಾರ ಮೀಸಲಾತಿಯನ್ನು ಬದಲಾಯಿಸಿದರೆ ಮಾತ್ರ ಸ್ವಲ್ಪ ವಿಳಂಬ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ 2- 3 ದಿನಗಳಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಅಧ್ಯಕ್ಷರ ಹಾಗೂ ಪ್ರಮುಖರ ಸಭೆ ಕರೆದು ಚರ್ಚಿಸಿ ಮೇಯರ್‌, ಉಪ ಮೇಯರ್‌ ಆಯ್ಕೆಯ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಮೇಯರ್‌, ಉಪಮೇಯರ್‌ ಸ್ಥಾನಗಳ ಮೀಸಲಾತಿಯನ್ನು ಈ ಹಿಂದೆಯೇ ಪ್ರಕಟಿಸಿದ್ದು, ಅದನ್ನು ಇದೀಗ ಮತ್ತೆ ಬದಲಾಯಿಸುವ ಬಗ್ಗೆ ಈ ತನಕ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ “ಸುದಿನ’ಕ್ಕೆ ತಿಳಿಸಿದ್ದಾರೆ.

ಚುನಾವಣ ಪ್ರಕ್ರಿಯೆ ಮುಕ್ತಾಯವಾಗಿ ಫಲಿತಾಂಶ ಘೋಷಣೆಯಾದ ಕುರಿತಂತೆ ಅಧಿಕೃತವಾಗಿ ಪತ್ರವನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಬರೆಯಲಾಗುವುದು. ಪ್ರಾದೇಶಿಕ ಆಯುಕ್ತರು ಮೇಯರ್‌, ಉಪ ಮೇಯರ್‌ ಚುನಾವಣೆಗೆ ಸಂಬಂಧಿಸಿ ದಿನಾಂಕವನ್ನು ನಿಗದಿ ಪಡಿಸಿ ಪಾಲಿಕೆ ಪತ್ರ ಬರೆಯುತ್ತಾರೆ. ಅವರು (ಪ್ರಾದೇಶಿಕ ಆಯುಕ್ತರು) ನಿಗದಿ ಪಡಿಸಿದ ದಿನಾಂಕದ ಬಗ್ಗೆ ಎಲ್ಲ ಚುನಾಯಿತ ಸದಸ್ಯರಿಗೆ ಮಾಹಿತಿ ನೀಡಲಾಗುತ್ತದೆ. ನಿಗದಿ ಪಡಿಸುವ ದಿನಾಂಕದಂದು ಪಾಲಿಕೆಯ ಪರಿಷತ್‌ನ ಪ್ರಥಮ ಸಭೆ, ಮೇಯರ್‌ ಚುನಾವಣೆ ನಡೆಸಲಾಗುತ್ತದೆ ಎಂದು ಪಾಲಿಕೆಯ ಆಯುಕ್ತ ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಮೇಯರ್‌, ಉಪ ಮೇಯರ್‌ ಆಯ್ಕೆಯನ್ನು ಇಂತಿಷ್ಟೇ ದಿನಗಳಲ್ಲಿ ಮಾಡ ಬೇಕೆಂಬ ನಿರ್ದಿಷ್ಟ ನಿಯಮಗಳೇನೂ ಇಲ್ಲ. ಆದರೆ ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ಬಳಿಕ 15- 20 ದಿನಗಳಲ್ಲಿ ಮೇಯರ್‌ ಆಯ್ಕೆ ನಡೆಯುತ್ತದೆ. ಮೇಯರ್‌, ಉಪ ಮೇಯರ್‌ ಮೀಸಲಾತಿಯನ್ನು ಸರಕಾರ ಪರಿಷ್ಕರಣೆ ಮಾಡಲು ಮುಂದಾಗದಿದ್ದರೆ ಮುಂದಿನ 2- 3 ವಾರಗಳಲ್ಲಿ ಮೇಯರ್‌ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಇಂದು ಅಭಿನಂದನ ಸಭೆ
ಪಾಲಿಕೆಯ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಅಭಿನಂದನಾ ಸಭೆ ಮತ್ತು ವಿಜಯೋತ್ಸವ ನಗರದ ಕದ್ರಿ ಮೈದಾನಿನಲ್ಲಿ ನ. 16ರಂದು ಸಂಜೆ 5.30ಕ್ಕೆ ಶಾಸಕರಾದ ಡಿ. ವೇದವ್ಯಾಸ್‌ ಕಾಮತ್‌ ಮತ್ತು ಡಾ| ಭರತ್‌ ಶೆಟ್ಟಿ ವೈ. ಅವರ ನೇತೃತ್ವದಲ್ಲಿ ನಡೆಯಲಿದೆ.

ಉತ್ತಮ ಆಡಳಿತ ನೀಡುತ್ತೇವೆ
ಪಾಲಿಕೆಗೆ ಆಯ್ಕೆಯಾದ 44 ಮಂದಿ ಸದಸ್ಯರಲ್ಲಿ ಸಾಕಷ್ಟು ಮಂದಿ ಹಿರಿಯರು ಮತ್ತು ಅನುಭವಿಗಳು ಇದ್ದು, ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ ಉತ್ತಮ ಆಡಳಿತ ನೀಡಲು ಪ್ರಯತ್ನಿಸುತ್ತೇವೆ.
 - ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.