ಬೆಳಕು ಪಸರಿಸಿದ ಕನಕದಾಸರು: ಪಲಿಮಾರು ಶ್ರೀ
ಉಡುಪಿ ಶ್ರೀಕೃಷ್ಣ ಮಠದಲ್ಲಿ ಕನಕದಾಸ ಜಯಂತಿ ಆಚರಣೆ
Team Udayavani, Nov 16, 2019, 4:16 AM IST
ಉಡುಪಿ: ಕನಕದಾಸರ ಜಯಂತಿ ಇಡೀ ಜಗತ್ತಿಗೆ ದೀಪೋತ್ಸವ ವನ್ನು ಉಂಟುಮಾಡಿದೆ. ಕನಕರ ಸಾಹಿತ್ಯ, ಜೀವನ ಪರಂಪರೆಗಳು ಅಜರಾಮರ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಬಣ್ಣಿಸಿದರು.
ಬೆಂಗಳೂರಿನ ಕನಕ ಸದ್ಭಾವನ ಜ್ಯೋತಿ ರಥಯಾತ್ರೆ ಸಮಿತಿ ಮತ್ತು ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಶುಕ್ರವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿದ್ದ ಕನಕ ಸದ್ಭಾವನ ಜ್ಯೋತಿ ರಥಯಾತ್ರೆ ಮತ್ತು ಭಕ್ತ ಕನಕದಾಸರ 532ನೇ ಜಯಂತಿ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಹಾಲುಮತ ಸಮಾಜ ಭಿನ್ನಾಭಿಪ್ರಾಯ ಮರೆತು ಸಮುದಾಯದ ಅಭಿವೃದ್ಧಿಗೆ ಗಮನ ಹರಿಸ ಬೇಕು. ಕನಕರಿಗೂ ಉಡುಪಿಗೂ ಇರುವ ಸಂಬಂಧದಿಂದಾಗಿ ಉಡುಪಿಯಲ್ಲಿ ಆಚರಿಸುವ ಕನಕ ಜಯಂತಿಗೆ ಅದರದ್ದೇ
ಆದ ಮಹತ್ವ ಇದೆ. ಕನಕ ಮಂದಿರ ಪುನರ್ ನಿರ್ಮಾಣಕ್ಕೆ ನಿಮ್ಮ ಜತೆಗಿದ್ದು ಸಂಪೂರ್ಣ ಸಹಕಾರ ನೀಡಲಾಗುವುದು. ಬಾಲ್ಯ ವಿವಾಹ ಪದ್ಧತಿ ಕಿತ್ತೆಸೆಯಿರಿ ಎಂದು ಹಾಲುಮತ ಸಮುದಾಯಕ್ಕೆ ಕರೆ ನೀಡಿದರು.
ಅಧ್ಯಕ್ಷತೆಯನ್ನು ಉಡುಪಿ ಶಾಸಕ ರಘುಪತಿ ಭಟ್ ವಹಿಸಿದ್ದರು. ಬೆಂಗಳೂರಿನ ಶ್ರೀ ಉಮಾಶಂಕರ ಸ್ವಾಮೀಜಿ, ಸಾಹಿತಿಗಳಾದ ಪ್ರೊ| ಕೃಷ್ಣಮೂರ್ತಿ, ಪ್ರೊ| ಚೊಕ್ಕನಳ್ಳಿ ಮಹೇಶ್, ಸಮಿತಿಯ ರಾಜ್ಯಾಧ್ಯಕ್ಷ ಓಂ ಕೃಷ್ಣಮೂರ್ತಿ, ಅಲೆವೂರು ಗ್ರಾ.ಪಂ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಐಹೊಳೆ, ಮಾಜಿ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಬಳ್ಳಾರಿ ಜಿ.ಪಂ. ಸದಸ್ಯ ಪರಶುರಾಮ, ಕನಕ ಸದ್ಭಾವನ ಜ್ಯೋತಿ ನಾಗಮ್ಮ, ಕಾಂತಮ್ಮ, ಪುಷ್ಪಲತಾ, ಕಿರಣ್ ಉಪಸ್ಥಿತರಿದ್ದರು. ಕನಕ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಮೇಟಿ ಮುದಿಯಪ್ಪ ಸ್ವಾಗತಿಸಿದರು.
ಬೆಂಗಳೂರಿನಿಂದ ಉಡುಪಿಗೆ ಬಂದ ಕನಕ ಸದ್ಭಾವನ ಜ್ಯೋತಿ ರಥಯಾತ್ರೆಗೆ ಜೋಡುಕಟ್ಟೆಯಲ್ಲಿ ಜಿಲ್ಲಾ ಕನಕದಾಸ ಸೇವಾ ಸಂಘದ ಗೌರವಾಧ್ಯಕ್ಷ ಮೇಟಿ ಮುದಿಯಪ್ಪ ಚಾಲನೆ ನೀಡಿದರು. ಮೆರವಣಿಗೆ ನಗರದಲ್ಲಿ ಸಂಚರಿಸಿ ಶ್ರೀಕೃಷ್ಣ ಮಠದ ಎದುರಿನ ಕನಕದಾಸರ ಮಂದಿರಕ್ಕೆ ಬಂದು ಮುಕ್ತಾಯಗೊಂಡಿತು. ಕನಕದಾಸರ ಮೂರ್ತಿಗೆ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು.
ವಿವಿಧೆಡೆ ಕನಕ ಜಯಂತಿ
ಇದೇವೇಳೆ ಕರಾವಳಿಯ ವಿವಿಧೆಡೆ ಕನಕದಾಸ ಜಯಂತಿಯನ್ನು ಶುಕ್ರವಾರ ಶ್ರದ್ಧಾಪೂರ್ವಕ ಆಚರಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ದ.ಕ. ಜಿಲ್ಲಾಡಳಿತ, ದ.ಕ. ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕನಕದಾಸ ಜಯಂತಿ ನಡೆಯಿತು. ಕನಕರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ ಎಂದು ಸಂಸದ ನಳಿನ್‌ಕುಮಾರ್ ಕಟೀಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.