ಕನಕದಾಸರ ಕೃತಿಗಳು ಪ್ರಸ್ತುತ ಸಮಾಜಕ್ಕೆ ಪೂರಕ
ಮಹಾಪುರುಷರನ್ನು ದೇವರನ್ನಾಗಿಸುವ ಪರಿಪಾಠ ಬದಲಾಗಲಿ: ಡಾ| ವಿ.ಜಿ.ರುದ್ರೇಶ್
Team Udayavani, Nov 16, 2019, 11:16 AM IST
ದಾವಣಗೆರೆ: ಇಂದು ಸಮಾಜದಲ್ಲಿ ಇತಿಹಾಸ ಮತ್ತು ಪುರಾಣದ ಮಹಾಪುರುಷರನ್ನು ದೇವರನ್ನಾಗಿಸುವ ಪರಿಪಾಠವಿದೆ. ಇದು ಬದಲಾಗಬೇಕು ಎಂದು ಡಿ.ಆರ್.ಎಂ ವಿಜ್ಞಾನ ಕಾಲೇಜಿನ ಉಪನ್ಯಾಸಕ ಡಾ| ವಡ್ನಾಳ್ .ಜಿ.ರುದ್ರೇಶ್ ಹೇಳಿದ್ದಾರೆ.
ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕದಾಸರ ಸರಳ ಜಯಂತಿ ಆಚರಣೆಯಲ್ಲಿ ಉಪನ್ಯಾಸ ನೀಡಿದ ಅವರು, ಮನುಷ್ಯ ದೇವರಾದರೆ ಸಮಸ್ಯೆ ಹೆಚ್ಚುತ್ತದೆ. ಹಾಗಾಗಿ ಸಮಾಜದ ಶಕ್ತಿ ಮತ್ತು ನಮ್ಮ ನೆರಳಾಗಿರುವ ಪುರಾಣದ ಮತ್ತು ಇತಿಹಾಸದ ಮಾನವತಾವಾದಿಗಳ ಆದರ್ಶ, ಸಂದೇಶ ಅನುಸರಿಸಬೇಕು ಎಂದರು.
ಕನಕದಾಸರು ಜಾತಿ ಮತ್ತು ಧರ್ಮದ ಅಂಧಕಾರ ತೊಲಗಿಸಲು ಪಾಳೆಗಾರಿಕೆ ಬಿಟ್ಟು ಆಳವಾದ ಅನುಭವದ ಮೂಲಕ ಸಮಾಜ ಕಟ್ಟುವಿಕೆ ಕೆಲಸ ಮಾಡಿದರು. ಅವರ ಕೃತಿಗಳು ಪ್ರಸ್ತುತ ಸಮಾಜಕ್ಕೆ ಪೂರಕವಾಗಿವೆ ಎಂದು ಹೇಳಿದರು.
ಕನಕದಾಸರು ಸಮಾಜದ ವಿಜ್ಞಾನಿಯಾಗಿ, ರಾಜಕೀಯ ಮತ್ತು ಧಾರ್ಮಿಕ ಚಿಂತನೆಯಲ್ಲಿ ತೊಡಗಿ, ಲೋಕ ಕಲ್ಯಾಣಕ್ಕಾಗಿ ದಾಸರಾದರು. ಪಾಳೇಗಾರ ವೃತ್ತಿಯಲ್ಲಿದ್ದ ಅವರು ಶಸ್ತ್ರಾಸ್ತ್ರ ಮನುಷ್ಯನ ಕುಲಕ್ಕೆ ಮಾರಕ ಎಂಬುದಾಗಿ ತಿಳಿದು ಅದನ್ನು ತ್ಯಜಿಸಿದರು ಎಂದು ತಿಳಿಸಿದರು.
ಧಾನ್ಯಗಳಿಗೆ ಧ್ವನಿ ನೀಡಿದವರು ಕನಕದಾಸರು. ರಾಮ ಧಾನ್ಯಚರಿತೆಯ ಮೂಲಕ ಧಾನ್ಯಗಳಿಗೆ ಧ್ವನಿಯಾಗಿ ಸಮಾಜದ ಮೇಲು-ಕೀಳಿನ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು. ಮೋಹನ ತರಂಗಿಣಿ ಮತ್ತು ಹರಿಭಕ್ತಸಾರ ಕೃತಿಗಳ ಮೂಲಕ ಜನರಲ್ಲಿ ಭಕ್ತಿಯ ಕುರಿತು ತಿಳಿವಳಿಕೆ ಮೂಡಿಸಿ, ನಾನು ಎಂಬ ಅಹಂಕಾರ ಇಲ್ಲದಿದ್ದರೆ ಎಲ್ಲರೂ ಸ್ವರ್ಗಕ್ಕೆ ಹೋಗಬಹುದು ಎಂಬುದನ್ನು ಸಮಾಜಕ್ಕೆ ತಿಳಿಸಿಕೊಟ್ಟವರು ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸಮಾಜದ ಮುಖಂಡರು, ಅಧಿಕಾರಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಮರ್ಪಿಸಿದರು. ಕನಕದಾಸರ ಭಾವಚಿತ್ರದ ಬಿಡಿಸುವುದು ಹಾಗೂ ಭಾರತೀಯ ಸಂಸ್ಕೃತಿಗೆ ಕನಕದಾಸರ ಕೊಡುಗೆ ಎಂಬ ವಿಷಯ ಕುರಿತು ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
ಜಿ.ಪಂ.ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಕುರುಬರ ಸಮಾಜದ ಜಿಲ್ಲಾಧ್ಯಕ್ಷ ಕೆಂಗೋ ಹನುಮಂತಪ್ಪ, ಕುರುಬ ಸಮಾಜದ ಮುಖಂಡರಾದ ಬಳ್ಳಾರಿ ಷಣ್ಮುಖಪ್ಪ, ಬಿ.ಎಚ್. ಹನುಮಂತಪ್ಪ, ಎಚ್.ಪಿ.ಗೋಣೆಪ್ಪ, ರೈತ ಮುಖಂಡ ಬಲ್ಲೂರು ರವಿಕುಮಾರ್ ಪ್ರಭಾರ ಅಪರ ಜಿಲ್ಲಾ ಧಿಕಾರಿ ಜಿ.ನಜ್ಮಾ, ಎಎಸ್‌ಪಿ ರಾಜೀವ್, ತಹಶೀಲ್ದಾರ್ ಸಂತೋಷ್‌ಕುಮಾರ್, ಚುನಾವಣಾ ತಹಶೀಲ್ದಾರ್ ಪ್ರಸಾದ್, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ದಿವಾಕರ ರೆಡ್ಡಿ, ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.