ಸಲಹಾ ಸಮಿತಿ ಸಭೆ ಕರೆಯಿರಿ
Team Udayavani, Nov 16, 2019, 3:25 PM IST
ಸಿಂಧನೂರು: ತುಂಗಾಭದ್ರಾ ಸಲಹಾ ಸಮಿತಿಗಳ ಸಭೆಯನ್ನು ಕರೆದು, ರೈತರಿಗೆ ಎರಡನೆ ಬೆಳೆಗೆ ನೀರನ್ನು ಒದಗಿಸಿ ಕೊಡುವಂತೆ ಜಿಲ್ಲಾ ಪಂಚಾಯತ್ ಸದಸ್ಯ ಬಸವರಾಜ ಹಿರೇಗೌಡ್ರು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಒತ್ತಾಯಿಸಿದ್ದಾರೆ.
ಸಿಂಧನೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತುಂಗಭದ್ರಾ ಜಲಾಶಯದಲ್ಲಿ ಸರಿ ಸುಮಾರು 101 ರಿಂದ 105 ಟಿಎಂಸಿ ಅಡಿಯಷ್ಟು ನೀರಿನ ಸಂಗ್ರಹವಿದ್ದು, ಎಡದಂಡೆಯ ರೈತರ ಎರಡನೆ ಬೆಳೆಗೆ ಬೇಕಾವಷ್ಟು ನೀರು ಸಂಗ್ರಹಗೊಂಡಿದೆ. ಇದರಿಂದ ರೈತರು ಎರಡನೇ ಬೆಳೆಗೆ ನೀರು ಬರುವ ಎಂಬ ವಿಶ್ವಾಸದಲ್ಲಿದ್ದಾರೆ. ಆದರೇ ಎಲ್ಲಿಂದ ಎಲ್ಲಿಯ ವರೆಗೂ ಎಡದಂಡೆ ನಾಲೆಗೆ ನೀರನ್ನು ಬಿಡಲಾಗುವುದು ಎಂಬ ಗೊಂದಲ ರೈತರಲ್ಲಿ ಉಂಟಾಗಿದೆ. ಕೂಡಲೇ ಸಂಬಂಧಿಸಿದ ಅ ಧಿಕಾರಿಗಳು ಐಸಿಸಿ ಸಭೆಯನ್ನು ಕರೆದು ರೈತರ ಸಂಕಷ್ಟವನ್ನು ಪರಿಹರಿಬೇಕೆಂದು ಆಗ್ರಹಿಸಿದ್ದಾರೆ.
ರಾಯಚೂರು ಹಾಗೂ ಕೊಪ್ಪಳ ಭಾಗದ ಅನೇಕ ರೈತರು ತುಂಗಾಭದ್ರಾ ಜಲಾಶಯವನ್ನೇ ನಂಬಿದ್ದಾರೆ. ಸುಮಾರ 4ವರ್ಷಗಳಿಂದ ರೈತರು ಒಂದೇ ಬೆಳೆಯನ್ನು ಬೆಳೆಯುವಂತಾಗಿದೆ. ಇದರಿಂದ ಜೀವನ ನಡೆಸುವುದು ತುಂಬಾ ದುಸ್ತರವಾಗಿದೆ. ಕೂಡಲೇ ಈ ಭಾಗದ ಶಾಸಕರು, ಮಾಜಿ ಶಾಸಕರು, ಸಂಸದರು ಸಂಬಂಧಿಸಿದ ಅಧಿಕಾರಿಗಳ ಸಭೆಯನ್ನು ಕರೆದು ಕೂಡಲೇ ತುಂಗಾಭದ್ರಾ ಎಡದಂಡೆಯ ರೈತರ ಎರಡನೇ ಬೆಳೆಗೆ ನೀರನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಮರಿಯಪ್ಪ, ಶರಣಪ್ಪ, ಬಿ.ಎಸ್.ನೆಟ್ಟಕಲ್ಲಪ್ಪ, ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.