ಬಾರ್‌ಕೋಲ್, ಬಿಂದಿಗೆ ಹಿಡಿದು ಬೃಹತ್ ಪ್ರತಿಭಟನೆ
Team Udayavani, Nov 17, 2019, 3:00 AM IST
ನಂಜನಗೂಡು: ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡ ರಾಜ್ಯ ರೈತ ಸಂಘವು, ತಾಲೂಕು ಆಡಳಿತವನ್ನು ಬಡಿದೆಬ್ಬಿಸಲು ಬಾರ್‌ಕೋಲ್ ಹಾಗೂ ಖಾಲಿ ಬಿಂದಿಗೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಿತು.
ಶನಿವಾರ ನಗರದ ಅಂಬೇಡ್ಕರ್ ಪುತ್ಥಳಿ ಎದರಿನಿಂದ ಹೊರಟ ಸಹಸ್ರಾರು ರೈತರು ಮಹಾತ್ಮ ಗಾಂಧಿ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ ತಲುಪಿ ತಾಲೂಕು ಆಡಳಿತದ ಸಮುಚ್ಛಯದ ಮಿನಿ ವಿಧಾನಸೌಧದವರಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಅಲ್ಲಿ ಸಭೆ ನಡೆಸಿದರು.
ಕುಡಿಯುವ ನೀರು, ಸ್ಮಶಾನ ವ್ಯವಸ್ಥೆ, ಕಾರ್ಖಾನೆಗಳಿಗೆ ಭೂಮಿ ಕೊಟ್ಟವರಿಗೆ ಉದ್ಯೋಗ, ಫಸಲು ಬಿಮಾ ಯೋಜನೆಯ ಪರಿಹಾರ, ಕಾಡಂಚಿನ ವನ್ಯಜೀವಿಗಳ ಹಾವಳಿ ತಡೆ ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ವೃತ್ತದಲ್ಲಿ ಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ತಮಟೆ ಬಾರಿಸಿ ಹಸಿರು ಬಾವುಟದ ಮೆರವಣಿಗೆಗೆ ಚಾಲನೆ ನೀಡಿದರು. ಕಾರ್ಯಕರ್ತರು ದಾರಿಯುದ್ದಕ್ಕೂ ಬಾರ್‌ಕೋಲ್ ಝುಳಪಿಸಿದರೆ, ನೂರಾರು ಮಹಿಳೆಯರು ಖಾಲಿ ಬಿಂದಿಗೆ ಹಿಡಿದು, ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿದರು.
ಗಡುವು: ತಾಲೂಕಿನ ಹುಣಸನಾಳು, ತರದಲೆ, ಕುರಹಟ್ಟಿ, ಕುಡ್ಲಾಪುರ, ಬಾಗೂರು ಮುಂತಾದ ಗ್ರಾಮಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೇಸಿಗೆಗೂ ಮುನ್ನವೇ ಹಾಹಾಕಾರ ಶುರುವಾಗಿದೆ. ಕುಡಿಯುವ ನೀರು, ಸಮರ್ಪಕ ವಿದ್ಯುತ್ ಪೂರೈಕೆ, ನಾಲೆಗಳ ದುರಸ್ತಿ ಸೇರಿದಂತೆ 16 ಬೇಡಿಕೆಗಳ ಕುರಿತು ಅಧಿಕಾರಿಗಳು ಡಿಸೆಂಬರ್ 9 ರೊಳಗೆ ವರದಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.