ಶಬ್ದ ಮಾಲಿನ್ಯ ಉಂಟಾದ್ರೆ ದಂಡ!

Team Udayavani, Nov 17, 2019, 11:20 AM IST

bk-tdy-4

ಮುಧೋಳ: ಟ್ರ್ಯಾಕ್ಟರ್‌ ಹಾಗೂ ಟಂಟಂಗಳಲ್ಲಿ ಕರ್ಕಶ ಶಬ್ದದಿಂದ ಜನರಿಗೆ ಆಗುವ ತೊಂದರೆ ತಪ್ಪಿಸಲು ತಾಲೂಕಿನ ಗ್ರಾಮ ಪಂಚಾಯತಗಳು ದಂಡ ವಿಧಿಸಿ ವಾಹನವನ್ನು ವಶಕ್ಕೆ ಪಡೆಯುವ ನಿಯಮ ಜಾರಿಗೆ ತಂದಿವೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ನಲ್ಲಿ ಜೋರಾಗಿ ಹಾಡು ಹಾಕಿಕೊಂಡು ಹೊರಟರೆ ಗ್ರಾಮಸ್ಥರಿಗೆ ಇನ್ನಿಲ್ಲದ ಕಿರಿಕಿರಿ ಉಂಟಾಗುತ್ತದೆ.

ಹಾಡಿನ ಸದ್ದಿನಿಂದಾಗಿ ಹಿಂದುಗಡೆ ಬರುವ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಈ ಸಮಸ್ಯೆ ಮನವರಿಕೆ ಮಾಡಿಕೊಂಡಿರುವ ಇಂಗಳಗಿ ಗ್ರಾಮಸ್ಥರು ಟ್ರ್ಯಾಕ್ಟರ್‌ ಹಾಗೂ ಟಂಟಂಗಳು ಗ್ರಾಮದಲ್ಲಿ ಚಲಿಸುವಾಗ ಹಾಡು ಹಚ್ಚಿಕೊಂಡು ಸಾಗಬಾರದು ಎಂಬ ಸ್ಥಳೀಯ ನಿಯಮ ಮಾಡಿಕೊಂಡಿದ್ದಾರೆ. ಒಂದು ವೇಳೆ ಗ್ರಾಮದ ಹಿರಿಯರು ಮಾಡಿರುವ ನಿಯಮಮುರಿದರೆ ಅಂತಹ ವಾಹನಗಳ ಚಾಲಕ ಅಥವಾ ಮಾಲೀಕರಿಗೆ 5 ಸಾವಿರ ರೂ. ದಂಡ ಹಾಗೂ ಎರಡು ದಿನ ವಾಹನವನ್ನು ವಶಕ್ಕೆ ಪಡೆಯಲಾಗುತ್ತಿದೆ.

ಸರ್ವಾನುಮತದ ನಿಯಮ: ಕಳೆದ ಮೂರ್‍ನಾಲ್ಕು ತಿಂಗಳುಗಳ ಹಿಂದೆ ಗ್ರಾಮದಲ್ಲಿ ಟ್ರ್ಯಾಕ್ಟರ್‌ ಹಾಗೂ ಟಂಟಂಗಳು ಅನಗತ್ಯವಾಗಿ ಜೋರಾಗಿ ಹಾಡನ್ನು ಹಾಕಿಕೊಂಡು ಓಡಿಸಲಾಗುತ್ತಿದ್ದು. ಈ ರೀತಿ ಮಾಡುವುದರಿಂದ ಗ್ರಾಮದಲ್ಲಿ ಶಬ್ದ ಮಾಲಿನ್ಯದೊಂದಿಗೆ ಜನರಿಗೆ ಇನ್ನಿಲ್ಲದಂತೆ ಕಿರಿಕಿರಿಯುಂಟಾಗಿತ್ತು. ಈ ಹಿನ್ನೆಲೆ ಗ್ರಾಮಸ್ಥರೆಲ್ಲ ಸೇರಿ ಅನಗತ್ಯವಾಗಿ ಹಾಡು ಹಾಕಿಕೊಂಡು ಸುತ್ತಾಡುವ ವಾಹನದ ಮಾಲೀಕರು ಅಥವಾ ಚಾಲಕರಿಗೆ ದಂಡ ವಿಧಿಸುವ ನಿಯಮ ಜಾರಿಗೆ ತಂದಿದ್ದಾರೆ.

ಗ್ರಾಮದ ಅಭಿವೃದ್ಧಿಗೆ ಬಳಕೆ: ಇಂಗಳಗಿ ಗ್ರಾಪಂನಿಂದ ಇದೂವರೆಗೂ ಒಟ್ಟು ನಾಲ್ಕು ವಾಹಗಳಿಗೆ ದಂಡ ವಿಧಿಸಿದ್ದು, ದಂಡದಿಂದ ಸಂಗ್ರಹವಾಗುವ ಹಣವನ್ನು ಗ್ರಾಮದ ದೇವಸ್ಥಾನ ಜೀರ್ಣೋದ್ಧಾರ, ರಸ್ತೆ ದುರಸ್ತಿ ಸೇರಿದಂತೆ ಗ್ರಾಮದ ವಿವಿಧ ಮೂಲಭೂತ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತಾರೆ.

ಹಲಗಲಿಯಲ್ಲಿಯೂ ಇದೆ ಎಚ್ಚರಿಕೆ ಫಲಕ: ಟ್ರ್ಯಾಕ್ಟರ್‌ ಹಾಗೂ ಟಂಟಂಗಳಲ್ಲಿ ಹಾಡು ಹಾಕಬಾರದು ಎಂಬ ನಿಯಮವನ್ನು ತಾಲೂಕಿನ ಹಲಗಲಿಯಲ್ಲಿಯೂ ಅಳವಡಿಸಲಾಗಿದೆ. ಗ್ರಾಮ ಪ್ರವೇಶಿಸುವ ಹದ್ದಿಯಲ್ಲಿ ಎಚ್ಚರಿಕೆ ಫಲಕ ಅಳವಡಿಸಿದ್ದು, ಜೋರಾಗಿ ಹಾಡು ಹಾಕಬಾರದು ಎಂದು ಸೂಚಿಸಲಾಗಿದೆ.

ಗ್ರಾಮಸ್ಥರ-ಹಿರಿಯರು ಹಾಗೂ ಪಂಚಾಯತ್‌ ಸದಸ್ಯರ ಸರ್ವಾನುಮತದಿಂದ ಅನಗತ್ಯವಾಗಿ ಓಡಾಡುವ ವಾಹನಗಳಿಗೆ ದಂಡ ವಿಧಿಸುವ ನಿಯಮವನ್ನು ಜಾರಿಗೆ ತರಲಾಗಿದೆ. ಇದರಿಂದ ಗ್ರಾಮದಲ್ಲಿ ಶಬ್ದ ಮಾಲಿನ್ಯದ ಜತೆಯಲ್ಲಿ ಅನಗತ್ಯ ಕಿರಿಕಿರಿ ತಪ್ಪಿದಂತಾಗಿದೆ. ಆ ಹಣವನ್ನು ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಬಳಸಲಾಗುತ್ತಿದೆ.  –ಕಲ್ಮೇಶ ಚಿನ್ನಣ್ಣವರ, ಗ್ರಾಮ ಪಂಚಾಯತ ಸದಸ್ಯ ಇಂಗಳಗಿ

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.