ನಾಡಕಚೇರಿಗೆ ಅಧಿಕಾರಿಗಳೇ ಬರಲ್ಲ

Team Udayavani, Nov 17, 2019, 2:44 PM IST

kolar-tdy-2

ಕೋಲಾರ: ತಾಲೂಕಿನ ನರಸಾಪುರ ನಾಡಕಚೇರಿಗೆ ಸರಿಯಾಗಿ ಬಾರದೇ, ಜನರ ಕೈಗೂ ಸಿಗದ ಅಧಿಕಾರಿಗಳನ್ನು ಹುಡುಕಿ ಕೊಟ್ಟು, ಅಕ್ರಮಗಳಿಗೆ ಕಡಿವಾಣ ಹಾಕಿ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ನಾಡ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಕಂದಾಯ ಅಧಿಕಾರಿ ಹರ್ಷದ್‌ ಆಲಿಗೆ ಮನವಿ ನೀಡಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜನ ಸಾಮಾನ್ಯರ ನಾಡಕಚೇರಿಯಲ್ಲಿ ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರ ಪಡೆಯಬೇಕಾದರೆ ಒಂದು ದಲ್ಲಾಳಿಗಳನ್ನು ಅವಲಂಬಿಸಬೇಕು. ಇಲ್ಲವೇ ಕೂಲಿ ಬಿಟ್ಟು ದಿನದ 24 ಗಂಟೆ ನಾಡಕಚೇರಿಯಲ್ಲಿ ಕಾಯಬೇಕು. ಅಧಿಕಾರಿಗಳಿಗಾಗಿ ಜನ ಸಾಮಾನ್ಯರು ಕಾದು ಕಾದು ಸುಸ್ತಾಗಿ, ಸರ್ಕಾರದ ಯೋಜನೆಗಳು ಬೇಡ ಎನ್ನುವ ಮಟ್ಟಕ್ಕೆ ಬಂದಿದ್ದಾರೆ ಎಂದು ಆಪಾದಿಸಿದರು.

ದಾಖಲೆ ಬೇಕಿದ್ರೆ ಲಂಚ ಕೊಡ್ಬೇಕು: ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ ತಮ್ಮ ವೈಯಕ್ತಿಕ ಕೆಲಸಗಳಲ್ಲಿ ತೊಡಗಿ, ಜನ ಸಾಮಾನ್ಯರನ್ನು ಹಿಂಸೆ ಮಾಡುತ್ತಿದ್ದಾರೆ. ಮತ್ತೂಂದೆಡೆ ಸರ್ಕಾರದ ಯೋಜನೆಗಳನ್ನು ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬೇಕಾಗುವ ವಿವಿಧ ದಾಖಲೆಗಳನ್ನು ಪಡೆಯಬೇಕಾದರೆ ತಿಂಗಳಾನುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಾಡಕಚೇರಿಯಲ್ಲಿದೆ. ಅದರ ಜೊತೆಗೆ ಆಧಾರ್‌ ಪಡೆಯಬೇಕಾದರೆ ಲಂಚ ನೀಡಬೇಕು ಎಂದು ಆರೋಪಿಸಿದರು.

ಗಮನ ಹರಿಸುತ್ತಿಲ್ಲ: ಜಿಲ್ಲಾ ಮುಖಂಡ ಕೆ.ಇ.ಬಿ.ಚಂದ್ರು ಮಾತನಾಡಿ, ನಾಡಕಚೇರಿ ಮೂಲ ಸೌಕರ್ಯ ಇಲ್ಲದೆ, ಭೂತಬಂಗಲೆಯಾಗಿದೆ. ಜನ ಸಾಮಾನ್ಯರು ಕೆಲಸಗಳಿಗೆ ಅಲ್ಲಿನ ಸಿಬ್ಬಂದಿಯ ಉತ್ತರ ಸರ್ವರ್‌, ವಿದ್ಯುತ್‌ ಮತ್ತಿತರ ನೂರೊಂದು ಸಮಸ್ಯೆ ಹೇಳಿ ಜನ ಸಾಮಾನ್ಯರ ಜೀವನ ಜೊತೆ ಚೆಲ್ಲಾಟವಾಡುತ್ತಿದ್ದರೂ, ಹಿರಿಯ ಅ ಧಿಕಾರಿಗಳು ನಾಡ ಕಚೇರಿಗಳತ್ತ ಗಮನ ಹರಿಸುತ್ತಿಲ್ಲ ಎಂದು ದೂರಿದರು.

ಅಕ್ರಮಗಳಿಗೆ ಕಡಿವಾಣ ಹಾಕುವ ಭರವಸೆ: ಮನವಿ ಸ್ವೀಕರಿಸಿ ಮಾತನಾಡಿದ ಕಂದಾಯ ಅ ಧಿಕಾರಿ ಹರ್ಷದ್‌ ಆಲಿ,ನಾಡ ಕಚೇರಿಯಲ್ಲಿ ಸಿಬ್ಬಂದಿಯ ಕೊರತೆಯ ಜೊತೆಗೆ ಅವ್ಯವಸ್ಥೆಗಳು ಇರುವುದು ನಿಜ ಸಿಬ್ಬಂದಿಯನ್ನು ಇತರೆ ಕೆಲಸಗಳಿಗೆ ನೇಮಕ ಮಾಡುತ್ತಾರೆ. ನಮಗೂ ಕೆಲಸದ ಒತ್ತಡ ಹೆಚ್ಚಾಗುತ್ತಿರುವುದರಿಂದ ಜನ ಸಾಮಾನ್ಯರಿಗೆ ಸ್ಪಂದಿಸಲು ಆಗುತ್ತಿಲ್ಲ. ಈ ಮನವಿಯನ್ನು ಮೇಲಧಿಕಾರಿಗಳಿಗೆ ತಲುಪಿಸಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಅಕ್ರಮಗಳಿಗೆ ಕಡಿವಾಣ ಹಾಕುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೋಬಳಿ ಅಧ್ಯಕ್ಷ ರೆಹಮಾನ್‌, ಹೊಸಹಳ್ಳಿ ಮಂಜುನಾಥರೆಡ್ಡಿ, ಅಮರನಾರಾಯಣಸ್ವಾಮಿ,ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಈಕಂಬಳ್ಳಿ ಮಂಜುನಾಥ ನರಸಿಂಹ, ನಾಗೇಶ್‌, ಸತೀಶ್‌, ಅಂಜನ್‌, ರವಿ, ರಾಜು, ಟಿಪ್ಪು, ವೆಂಕಟೇಶ್‌, ಮಂಜುನಾಥ್.ಟಿ ಮುಂತಾದವರಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.